Ezekiel (28/48)  

1. ಕರ್ತನ ವಾಕ್ಯವು ಮತ್ತೆ ಬಂದು ನನಗೆ ಹೇಳಿದ್ದೇನಂದರೆ--
2. ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ.
3. ಇಗೋ, ನೀನು ದಾನಿಯೇಲನಿಗಿಂತ ಜ್ಞಾನಿಯಾಗಿರುವೆ; ರಹಸ್ಯವಾದದ್ದು ಏನಿದ್ದರೂ ನಿನಗೆ ಮರೆಯಾಗಿರುವದಿಲ್ಲ.
4. ನಿನ್ನ ಜ್ಞಾನ ದಿಂದಲೂ ವಿವೇಕದಿಂದಲೂ ನಿನಗೆ ದ್ರವ್ಯವನ್ನುಂಟು ಮಾಡಿಕೊಂಡಿರುವೆ. ಚಿನ್ನವನ್ನೂ ಬೆಳ್ಳಿಯನ್ನೂ ನಿನ್ನ ಭಂಡಾರಗಳಲ್ಲಿ ಇಟ್ಟುಕೊಂಡಿರುವೆ.
5. ನಿನ್ನ ಅಧಿಕ ಜ್ಞಾನದಿಂದಲೂ ವ್ಯಾಪಾರದಿಂದಲೂ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವಿ. ನಿನ್ನ ಆಸ್ತಿಯ ನಿಮಿತ್ತ ನಿನ್ನ ಹೃದಯವು ಹೆಚ್ಚಿಸಿಕೊಂಡಿದೆ;
6. ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡ ದ್ದರಿಂದ;
7. ಇಗೋ, ನಾನು ನಿನ್ನ ಮೇಲೆ ಭಯಂಕರ ವಾದ ಜನಾಂಗಗಳ ಅಪರಿಚಿತರನ್ನು ತರುತ್ತೇನೆ; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು.
8. ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು, ಸಮುದ್ರಗಳ ಮಧ್ಯದಲ್ಲಿ ಹತವಾದವರ ಹಾಗೆ ನೀನು ಸಾಯುವೆ.
9. ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು ನಾನು ದೇವರೆಂದು ಹೇಳುವಿಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರ ಪ್ರಾಣಿಯೇ;
10. ನೀನು ಅನ್ಯರ ಕೈಯಿಂದ ಸುನ್ನತಿ ಹೀನರ ಮರಣಕ್ಕೆ ಗುರಿ ಯಾಗುವಿ ನಾನೇ ಇದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳಿದ್ದಾನೆ.
11. ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ,
12. ಮನುಷ್ಯಪುತ್ರನೇ, ತೂರಿನ ಅರಸನ ವಿಷಯದಲ್ಲಿ ಶೋಕಗೀತೆಯನ್ನೆತ್ತಿ ಅವನಿಗೆ ಹೀಗೆ ಹೇಳು--ದೇವರಾದ ಕರ್ತನು ಹೀಗೆ ಹೇಳು ತ್ತಾನೆ, ಸಂಪೂರ್ಣ ಜ್ಞಾನಿ, ಪರಿಪೂರ್ಣ ಸುಂದರವಾದ ನೀನು ಲೆಕ್ಕವನ್ನು ಮುದ್ರಿಸುತ್ತೀ.
13. ದೇವರ ತೋಟ ವಾದ ಏದೆನಿನಲ್ಲಿ ನೀನಿದ್ದಿ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇ ಧಿಕ, ಕೆಂಪು, ಸ್ಪಟಿಕ, ಚಿನ್ನ ಈ ಅಮೂಲ್ಯವಾದವು ಗಳಿಂದ ಭೂಷಿತವಾಗಿದ್ದಿ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.
14. ನೀನೇ ಮುಚ್ಚು ವಂತ ಅಭಿಷೇಕಿಸಲ್ಪಟ್ಟ ಕೆರೂಬಿಯು ದೇವರ ಪರಿಶುದ್ಧ ಪರ್ವತದಲ್ಲಿ ನಿನ್ನನ್ನು ಇಟ್ಟೆನು; ಅಲ್ಲೇ ನೀನಿದ್ದಿ, ಬೆಂಕಿಯ ಕಲ್ಲುಗಳ, ಮಧ್ಯದಲ್ಲಿ ನೀನು ಕೆಳಗೂ ಮೇಲಕ್ಕೂ ತಿರುಗಾಡಿದಿ.
15. ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು.
16. ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದಿ; ಆದದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ಬಿಸಾಡುವೆನು. ಓ ಮುಚ್ಚುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.
17. ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿ ಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಜ್ಞಾನವನ್ನು ಕೆಡಿಸಿಕೊಂಡಿ; ನಾನು ನಿನ್ನನ್ನು ನೆಲಕ್ಕೆ ಹಾಕುವೆನು. ಅರಸನ ಮುಂದೆ ಅವರು ನೋಡುವ ಹಾಗೆ ನಿನ್ನನ್ನು ಇಡುತ್ತೇನೆ;
18. ನಿನ್ನ ಅಪಾರವಾದ ಅಪರಾಧಗ ಳಿಂದಲೂ ಅನ್ಯಾಯವಾದ ವ್ಯಾಪಾರಗಳಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸು ಮಾಡಿದೆ. ಆದಕಾರಣ ನಾನು ನಿನ್ನೊಳಗಿಂದ ಬೆಂಕಿಯನು ಬರಮಾಡಿದೆನು, ಅದು ನಿನ್ನನ್ನು ನುಂಗಿತು; ನೋಡು ವವರೆಲ್ಲರ ಮುಂದೆ ನಿನ್ನನ್ನು ಬೂದಿ ಮಾಡುವೆನು;
19. ನಿನ್ನನ್ನು ಅರಿತ ಜನರೆಲ್ಲರೂ ನಿನ್ನ ವಿಷಯದಲ್ಲಿ ವಿಸ್ಮಯಗೊಳ್ಳುವರು; ನೀನು ಸಂಪೂರ್ಣ ಭೀತಿಗೊಳ ಗಾಗಿ ಇನ್ನೆಂದಿಗೂ ಇಲ್ಲದಂತಾಗುವಿ.
20. ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇ ನಂದರೆ,
21. ಮನುಷ್ಯಪುತ್ರನೇ, ನೀನು ಚೀದೋನಿಗೆ ಅಭಿಮುಖನಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.
22. ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿದೋನೇ ನಾನು ನಿನಗೆ ವಿರೋಧವಾಗಿದ್ದೇನೆ; ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧನಾಗುವಾಗ ನಾನೇ ಕರ್ತನೆಂದು ತಿಳಿಯುವರು.
23. ಅದರಲ್ಲಿ ವ್ಯಾಧಿಯನ್ನೂ ಬೀದಿಗಳಲ್ಲಿ ರಕ್ತವನ್ನು ಕಳುಹಿಸುವೆನು; ಸುತ್ತಲೂ ಅದಕ್ಕೆ ವಿರುದ್ಧವಾಗಿ ಕತ್ತಿಯಿಂದ ಹತವಾದವರು ಅದರಲ್ಲಿ ಬೀಳುವರು; ಆಗ ನಾನೇ ಕರ್ತನೆಂದು ತಿಳಿಯುವರು.
24. ಇಸ್ರಾಯೇಲ್‌ ವಂಶದವರಿಗೆ ಚುಚ್ಚುವ ದತ್ತೂರಿ ಸುತ್ತಲೂ ಹೀನೈಸುವ ನೋಯಿಸುವ ಮುಳ್ಳು ಇನ್ನಿರದು; ನಾನೇ ದೇವರಾದ ಕರ್ತನೆಂದು ಅವರಿಗೆ ತಿಳಿಯುವದು.
25. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲ್ಯರ ಮನೆತನದವರನ್ನು ಚದರಿಹೋದ ಜನಾಂಗದಿಂದ ಒಂದುಗೂಡಿಸಿ ಅನ್ಯಜನಾಂಗಗಳ ಮುಂದೆ ಅವರಲ್ಲಿ ಪರಿಶುದ್ಧವಾದ ಮೇಲೆ ಇಸ್ರಾ ಯೇಲ್ಯರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ದೇಶದಲ್ಲಿಯೇ ವಾಸಿಸುವರು;
26. ಅವರು ನಿರ್ಭಯರಾಗಿ ಅಲ್ಲಿ ವಾಸಿಸುವರು; ಮನೆ ಗಳನ್ನು ಕಟ್ಟುವರು; ದ್ರಾಕ್ಷೇತೋಟಗಳನ್ನು ನೆಡುವರು; ಹೌದು, ಸುತ್ತಲಾಗಿ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯರಾಗಿ ವಾಸಿಸುವರು. ಕರ್ತನಾದ ನಾನೇ ಅವರ ದೇವರೆಂದು ತಿಳಿಯುವರು.

  Ezekiel (28/48)