| ← John (17/21) → |
| 1. | ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು. |
| 2. | ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ. |
| 3. | ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ. |
| 4. | ನಾನು ನಿನ್ನನ್ನು ಭೂಮಿಯ ಮೇಲೆ ಮಹಿಮೆಪಡಿಸಿದ್ದೇನೆ; ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮುಗಿಸಿದ್ದೇನೆ; |
| 5. | ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು. |
| 6. | ಲೋಕದೊಳಗಿಂದ ನೀನು ನನಗೆ ಕೊಟ್ಟ ಮನು ಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರತ್ಯಕ್ಷಪಡಿಸಿದ್ದೇನೆ. ಅವರು ನಿನ್ನವರಾಗಿದ್ದರು; ನೀನು ಅವರನ್ನು ನನಗೆ ಕೊಟ್ಟಿದ್ದೀ; ಇದಲ್ಲದೆ ಅವರು ನಿನ್ನ ವಾಕ್ಯವನ್ನು ಕೈ ಕೊಂಡಿದ್ದಾರೆ. |
| 7. | ನೀನು ನನಗೆ ಕೊಟ್ಟಿರುವವುಗಳೆಲ್ಲವು ನಿನ್ನವುಗಳೇ ಎಂದು ಈಗ ಅವರು ತಿಳಿದುಕೊಂಡಿದ್ದಾರೆ. |
| 8. | ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ. |
| 9. | ನಾನು ಅವರಿಗೋಸ್ಕರ ಕೇಳಿ ಕೊಳ್ಳುತ್ತೇನೆ; ನೀನು ನನಗೆ ಕೊಟ್ಟವರಿಗೋಸ್ಕರವೇ ಹೊರತು ನಾನು ಲೋಕಕ್ಕೋಸ್ಕರ ಕೇಳಿಕೊಳ್ಳುವದಿಲ್ಲ; ಯಾಕಂದರೆ ಅವರು ನಿನ್ನವರು. |
| 10. | ನನ್ನವರೆಲ್ಲರು ನಿನ್ನ ವರೇ; ನಿನ್ನವರು ನನ್ನವರೇ; ಅವರಲ್ಲಿ ಮಹಿಮೆ ಪಟ್ಟಿದ್ದೇನೆ. |
| 11. | ಇನ್ನು ಮೇಲೆ ನಾನು ಲೋಕದಲ್ಲಿ ಇರುವದಿಲ್ಲ; ಆದರೆ ಇವರು ಲೋಕದಲ್ಲಿದ್ದಾರೆ; ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆಯೇ ಅವರು ಸಹ ಒಂದಾಗಿರುವಂತೆ ನೀನು ನನಗೆ ಕೊಟ್ಟಿರುವವರನ್ನು ನಿನ್ನ ಸ್ವಂತ ಹೆಸರಿನಲ್ಲಿ ಕಾಪಾಡು. |
| 12. | ನಾನು ಅವರೊಂದಿಗೆ ಲೋಕದಲ್ಲಿದ್ದಾಗ ನಿನ್ನ ಹೆಸರಿನಲ್ಲಿ ಅವರನ್ನು ಕಾಪಾಡಿದೆನು; ನೀನು ನನಗೆ ಕೊಟ್ಟವರನ್ನು ನಾನು ಕಾಪಾಡಿದ್ದೇನೆ; ಬರಹವು ನೆರವೇರುವ ಹಾಗೆ ಆ ನಾಶನದ ಮಗನೇ ಹೊರತು ಅವರಲ್ಲಿ ಒಬ್ಬನೂ ನಾಶವಾಗಲಿಲ್ಲ. |
| 13. | ಈಗ ನಾನು ನಿನ್ನ ಬಳಿಗೆ ಬರು ತ್ತೇನೆ ನನ್ನ ಆನಂದವು ಅವರೊಳಗೆ ಈಡೇರುವಂತೆ ನಾನು ಲೋಕದಲ್ಲಿ ಈ ವಿಷಯಗಳನ್ನು ಮಾತನಾಡು ತ್ತೇನೆ. |
| 14. | ನಾನು ನಿನ್ನ ವಾಕ್ಯವನ್ನು ಅವರಿಗೆ ಕೊಟ್ಟಿದ್ದೇನೆ ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲವಾದದರಿಂದ ಲೋಕವು ಅವರನ್ನು ಹಗೆಮಾಡಿಯದೆ. |
| 15. | ನೀನು ಅವರನ್ನು ಲೋಕದೊಳಗಿಂದ ತೆಗೆಯಬೇಕೆಂತಲ್ಲ; ಅವರನ್ನು ಕೇಡಿನಿಂದ ಕಾಪಾಡಬೇಕೆಂದು ನಾನು ಕೇಳಿಕೊಳ್ಳು ತ್ತೇನೆ. |
| 16. | ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲ. |
| 17. | ನಿನ್ನ ಸತ್ಯದಿಂದ ಅವರನ್ನು ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು |
| 18. | ನೀನು ನನ್ನನ್ನು ಲೋಕದೊಳಗೆ ಕಳುಹಿಸಿದ ಹಾಗೆಯೇ ನಾನು ಸಹ ಅವರನ್ನು ಲೋಕದೊಳಗೆ ಕಳುಹಿಸಿದ್ದೇನೆ. |
| 19. | ಅವರು ಸತ್ಯದಲ್ಲಿ ಪ್ರತಿಷ್ಠಿಸಲ್ಪಡುವಂತೆ ನಾನು ನನ್ನನ್ನು ಅವರಿ ಗೋಸ್ಕರ ಪ್ರತಿಷ್ಠಿಸಿಕೊಳ್ಳುತ್ತೇನೆ. |
| 20. | ಆದರೆ ಇವರಿಗೊಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನ ಮೇಲೆ ನಂಬಿಕೆಯಿಡುವವರಿಗೋ ಸ್ಕರವೂ ಕೇಳಿಕೊಳ್ಳುತ್ತೇನೆ. |
| 21. | ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ. |
| 22. | ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರುವಂತೆ ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ. |
| 23. | ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ (ಇರುವಂತೆ) ಅವರೂ ಒಂದಾಗಿ ಪರಿಪೂರ್ಣರಾಗಿ ರುವರು; ನೀನು ನನ್ನನ್ನು ಕಳುಹಿಸಿದ್ದೀ ಎಂತಲೂ ನನ್ನನ್ನು ಪ್ರೀತಿ ಮಾಡಿದಂತೆ ಅವರನ್ನು ನೀನು ಪ್ರೀತಿಮಾಡಿದ್ದೀ ಎಂತಲೂ ಲೋಕವು ತಿಳಿದುಕೊಳ್ಳುವದು. |
| 24. | ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ. |
| 25. | ಓ ನೀತಿಯುಳ್ಳ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ; ಆದರೆ ನಾನು ನಿನ್ನನ್ನು ತಿಳಿದಿದ್ದೇನೆ, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ಇವರು ತಿಳಿದಿದ್ದಾರೆ. |
| 26. | ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು. |
| ← John (17/21) → |