← Psalms (108/150) → |
1. | ಓ ದೇವರೇ, ನನ್ನ ಹೃದಯವು ಸಿದ್ಧವಾಗಿದೆ; ನಾನು ನನ್ನ ಹೆಚ್ಚಳ ದೊಂದಿಗೆ ಹಾಡಿ ಕೀರ್ತಿಸುವೆನು. |
2. | ವೀಣೆಯೇ, ಕಿನ್ನರಿಯೇ, ಎಚ್ಚರವಾಗು; ನಾನು ಉದಯದಲ್ಲಿ ಎಚ್ಚರಗೊಳ್ಳುವೆನು. |
3. | ಕರ್ತನೇ, ಜನರಲ್ಲಿ ನಿನ್ನನ್ನು ಕೊಂಡಾಡುವೆನು; ಜನಾಂಗಗಳಲ್ಲಿ ನಿನ್ನನ್ನು ಕೀರ್ತಿಸು ವೆನು. |
4. | ಆಕಾಶಕ್ಕಿಂತ ನಿನ್ನ ಕರುಣೆಯೂ ಮೇಘಗಳನ್ನು ನಿಲುಕುವಂಥ ನಿನ್ನ ಸತ್ಯವೂ ದೊಡ್ಡದು. |
5. | ದೇವರೇ, ಆಕಾಶಗಳ ಮೇಲೆ ನೀನು ಘನಹೊಂದು; ಭೂಮಿಯ ಮೇಲೆ ನಿನ್ನ ಮಹಿಮೆಯು ಇರಲಿ. |
6. | ನಿನ್ನ ಪ್ರಿಯರು ಬಿಡುಗಡೆಯಾಗುವ ಹಾಗೆ ನಿನ್ನ ಬಲಗೈಯಿಂದ ರಕ್ಷಿಸಿ ನನಗೆ ಉತ್ತರ ಕೊಡು. |
7. | ದೇವರು ತನ್ನ ಪರಿಶುದ್ಧತ್ವದಲ್ಲಿ ನುಡಿದಿದ್ದಾನೆ; ನಾನು ಉತ್ಸಾಹ ಪಡುವೆನು. ಶೆಕೆಮನ್ನು ಹಂಚುವೆನು, ಸುಕ್ಕೋತಿನ ತಗ್ಗನ್ನು ಅಳತೆ ಮಾಡುವೆನು. |
8. | ಗಿಲ್ಯಾದ್ ನನ್ನದು; ಮನಸ್ಸೆ ನನ್ನದು; ಎಫ್ರಾಯಾಮ್ ನನ್ನ ತಲೆಯ ಬಲಸ್ಥಾನವು; ಯೆಹೂದವು ನನ್ನ ರಾಜ ದಂಡವಾಗಿದೆ |
9. | ಮೋವಾಬ್ ನನ್ನನ್ನು ತೊಳೆಯುವ ಪಾತ್ರೆಯು; ಏದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯದ ಮೇಲೆ ಜಯಧ್ವನಿಗೈಯುವೆನು. |
10. | ಬಲ ವುಳ್ಳ ಪಟ್ಟಣಕ್ಕೆ ನನ್ನನ್ನು ಕರೆತರುವವನಾರು? ಏದೋಮಿನ ವರೆಗೆ ನನ್ನನ್ನು ನಡಿಸುವವನಾರು? |
11. | ದೇವರೇ, ನಮ್ಮನ್ನು ತೊರೆದು ಬಿಟ್ಟವನು ನೀನೇ ಅಲ್ಲವೋ? ನಮ್ಮ ಸೈನ್ಯಗಳ ಸಂಗಡ ಹೊರಟು ಹೋಗದೆ ಇದ್ದ ದೇವರು ನೀನಲ್ಲವೋ? |
12. | ಇಕ್ಕಟ್ಟಿ ನಲ್ಲಿರುವ ನಮಗೆ ಸಹಾಯಕೊಡು; ಮನುಷ್ಯನ ಸಹಾಯವು ವ್ಯರ್ಥವಾಗಿದೆ. |
13. | ದೇವರಿಂದ ಪರಾ ಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು. |
← Psalms (108/150) → |