Psalms (23/150)  

1. ಕರ್ತನು ನನ್ನ ಕುರುಬನು; ಕೊರತೆಪಡೆನು.
2. ಆತನು ಹಸರುಗಾವಲುಗಳಲ್ಲಿ ನನ್ನನ್ನು ತಂಗುವಂತೆ ಮಾಡುತ್ತಾನೆ. ಶಾಂತವಾದ ನೀರುಗಳ ಪಕ್ಕದಲ್ಲಿ ನನ್ನನ್ನು ನಡಿಸುತ್ತಾನೆ.
3. ನನ್ನ ಪ್ರಾಣವನ್ನು ಪುನರ್ಜೀವಿಸ ಮಾಡುತ್ತಾನೆ. ನೀತಿಯ ದಾರಿಗಳಲ್ಲಿ ತನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸುತ್ತಾನೆ.
4. ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.
5. ನನ್ನ ವೈರಿಗಳ ಎದುರಿನಲ್ಲಿ ನನ್ನ ಮುಂದೆ ಮೇಜನ್ನು ಸಿದ್ಧಮಾಡುತ್ತೀ; ನೀನು ನನ್ನ ತಲೆಯನ್ನು ಎಣ್ಣೆಯಿಂದ ಅಭಿಷೇಕಿಸುತ್ತೀ; ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.
6. ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.

  Psalms (23/150)