← 1Chronicles (16/29) → |
1. | ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿದ ಡೇರೆಯ ಮಧ್ಯದಲ್ಲಿ ಇರಿಸಿದ ತರುವಾಯ ಅವರು ದೇವರ ಮುಂದೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು. |
2. | ದಾವೀದನು ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಅವನು ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ |
3. | ಇಸ್ರಾಯೇಲಿನಲ್ಲಿರುವ ಸ್ತ್ರೀ ಪುರುಷರಾದ ಸಮಸ್ತರಿಗೂ ಒಬ್ಬೊಬ್ಬರಿಗೆ ಒಂದೊಂದು ರೊಟ್ಟಿಯನ್ನೂ ಒಂದು ತುಂಡು ಮಾಂಸವನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಕೊಟ್ಟನು. |
4. | ಇದಲ್ಲದೆ ಕರ್ತನ ಮಂಜೂಷದ ಮುಂದೆ ಸೇವೆ ಮಾಡಲೂ ಇಸ್ರಾಯೇಲಿನ ದೇವರಾದ ಕರ್ತನನ್ನು ಸ್ಮರಿಸುವದಕ್ಕೂ ಕೊಂಡಾಡುವದಕ್ಕೂ ಹೊಗಳುವ ದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು. |
5. | ಅವರು ಯಾರಂದರೆ, ಮುಖ್ಯಸ್ಥನಾದ ಆಸಾಫನೂ ಅವನ ತರುವಾಯ ಜೆಕರ್ಯನೂ ಯೆಗೀಯೇಲನೂ ಶೆವಿಾರಾಮೋತನೂ ಯೆಹೀಯೇಲನೂ ಮತ್ತಿತ್ಯನೂ ಎಲೀಯಾಬನೂ ಬೆನಾಯನೂ ಒಬೇದೆದೋಮನೂ ಯೇಗಿಯೇಲನೂ. ಇವರು ವೀಣೆಗಳನ್ನೂ ಕಿನ್ನರಿ ಗಳನ್ನೂ ಬಾರಿಸುತ್ತಿದ್ದರು; ಆದರೆ ಆಸಾಫನು ತಾಳ ಗಳನ್ನು ಬಾರಿಸುತ್ತಿದ್ದನು. |
6. | ಇದಲ್ಲದೆ ಯಾಜಕರಾದ ಬೆನಾಯನೂ ಯೆಹಜೀಯೇಲನೂ ದೇವರ ಒಡಂಬ ಡಿಕೆಯ ಮಂಜೂಷದ ಮುಂದೆ ಯಾವಾಗಲೂ ತುತೂರಿಗಳನ್ನು ಊದುವವರಾಗಿದ್ದರು. |
7. | ಆಗ ಅದೇ ದಿವಸದಲ್ಲಿ ಕರ್ತನನ್ನು ಕೊಂಡಾಡುವದಕ್ಕೆ ದಾವೀದನು ಮೊದಲು ಆಸಾಫನಿಗೂ ಅವನ ಸಹೋದರರಿಗೂ ಈ ಸಂಗೀತವನ್ನು ಕೊಟ್ಟನು;-- |
8. | ಕರ್ತನನ್ನು ಕೊಂಡಾ ಡಿರಿ, ಆತನ ಹೆಸರನ್ನು ಕರೆಯಿರಿ; ಜನಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯುವಂತೆ ಮಾಡಿರಿ. |
9. | ಆತನಿಗೆ ಹಾಡಿರಿ, ಆತನನ್ನು ಕೀರ್ತಿಸಿರಿ; ಆತನ ಅದ್ಭುತಗಳ ನ್ನೆಲ್ಲಾ ಧ್ಯಾನಿಸಿರಿ. |
10. | ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ. ಕರ್ತನನ್ನು ಹುಡುಕುವವರ ಹೃದ ಯವು ಸಂತೋಷಿಸಲಿ. |
11. | ಕರ್ತನನ್ನೂ ಆತನ ಬಲ ವನ್ನೂ ಆಶ್ರಯಿಸಿರಿ. ಆತನ ಮುಖವನ್ನು ಯಾವಾ ಗಲೂ ಹುಡುಕಿರಿ. |
12. | ಆತನು ಮಾಡಿದ ಅದ್ಭುತ ಗಳನ್ನೂ ಮಹತ್ಕಾರ್ಯಗಳನ್ನು ಆತನ ನ್ಯಾಯನಿರ್ಣ ಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ. |
13. | ಆತನ ಸೇವ ಕನಾದ ಇಸ್ರಾಯೇಲಿನ ಸಂತಾನವೇ, ಆತನು ಆದು ಕೊಂಡ ಯಾಕೋಬನ ಮಕ್ಕಳೇ, |
14. | ಆತನೇ ನಮ್ಮ ದೇವರಾದ ಕರ್ತನಾಗಿದ್ದಾನೆ; ಆತನ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಅವೆ. |
15. | ಆತನ ಒಡಂಬಡಿಕೆ ಯನ್ನು ಸಾವಿರ ತಲಾಂತರಗಳಿಗೆ ಆತನು ಆಜ್ಞಾಪಿ ಸಿದ ಮಾತನ್ನು |
16. | ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸಾಕನಿಗೆ ಇಟ್ಟ ಆಣೆಯನ್ನು ಇದನ್ನು ನಿತ್ಯವೂ ಜ್ಞಾಪಕಮಾಡಿಕೊಳ್ಳಿರಿ. |
17. | ಅದನ್ನು ಯಾಕೋಬನಿಗೆ ನೇಮಕವಾಗಿಯೂ ಇಸ್ರಾಯೇಲಿಗೆ ನಿತ್ಯ ಒಡಂಬಡಿಕೆಯಾಗಿಯೂ ಸ್ಥಾಪಿಸಿ |
18. | ಹೇಳಿದ್ದೇನಂದರೆ--ನಿನಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯ ತೆಯ ಪಾಲಾಗಿ ಕೊಡುವೆನು. |
19. | ಆಗ ನೀವು ಸ್ವಲ್ಪ ಮಂದಿಯಾಗಿಯೂ ಪರದೇಶಸ್ಥರಾಗಿಯೂ ಅದರಲ್ಲಿ ಇದ್ದಿರಿ. |
20. | ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಮತ್ತೊಂದಕ್ಕೂ ಹೋಗುತ್ತಿದ್ದರು. |
21. | ಆತನು ಯಾರಿಂದಲೂ ಅವರಿಗೆ ಅನ್ಯಾಯ ಮಾಡ ಗೊಡಿಸಲಿಲ್ಲ; ಹೌದು, ಅವರಿಗೋಸ್ಕರ ಅರಸುಗಳನ್ನು ಗದರಿಸಿದನು. |
22. | ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ; ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ. |
23. | ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ. |
24. | ಜನಾಂಗಗಳಲ್ಲಿ ಆತನ ಘನವನ್ನೂ ಎಲ್ಲಾ ಜನಗಳಲ್ಲಿ ಆತನ ಅದ್ಭುತಗಳನ್ನೂ ಪ್ರಕಟಿಸಿರಿ. |
25. | ಯಾಕಂದರೆ ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ; |
26. | ಆತನು ಎಲ್ಲಾ ದೇವರುಗಳ ಮೇಲೆ ಭಯಂಕರನೂ. ಯಾಕಂದರೆ ಜನಗಳ ದೇವರುಗಳೆಲ್ಲಾ ಬೊಂಬೆಗಳಾಗಿವೆ. ಆದರೆ ಕರ್ತನು ಆಕಾಶಗಳನ್ನು ಉಂಟುಮಾಡಿದನು. |
27. | ಮಹಿ ಮೆಯೂ ಪ್ರಭೆಯೂ ಆತನ ಮುಂದೆ ಅವೆ. ಬಲವೂ ಆನಂದವೂ ಆತನ ಸ್ಥಳದಲ್ಲಿ ಅವೆ. |
28. | ಜನಸಂತತಿಗಳೇ, ಕರ್ತನಿಗೆ ಬಲ ಪ್ರಭಾವವನ್ನೂ ತನ್ನಿರಿ, |
29. | ಕರ್ತನಿಗೆ ಆತನ ಹೆಸರಿನ ಘನವನ್ನೂ ತನ್ನಿರಿ; ಅರ್ಪಣೆಯನ್ನು ತೆಗೆದುಕೊಂಡು ಆತನ ಮುಂದೆ ಬನ್ನಿರಿ. ಪರಿಶುದ್ಧತ್ವ ವೆಂಬ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ. |
30. | ಸಮಸ್ತ ಭೂಮಿಯೇ, ಆತನ ಮುಂದೆ ನಡುಗು. ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. |
31. | ಆಕಾಶ ಗಳು ಸಂತೋಷಿಸಲಿ, ಭೂಮಿಯು ಉಲ್ಲಾಸಪಡಲಿ. |
32. | ಕರ್ತನು ಆಳುತ್ತಾನೆಂದು ಜನಾಂಗಗಳಲ್ಲಿ ಹೇಳಲಿ. ಸಮುದ್ರವೂ ಅದರ ಪರಿಪೂರ್ಣತ್ವವೂ ಘೋಷಿಸಲಿ; ಹೊಲಗಳೂ ಅವುಗಳಲ್ಲಿರುವ ಸಮಸ್ತವೂ ಉತ್ಸಾಹ ಪಡಲಿ. |
33. | ಆಗ ಕರ್ತನ ಮುಂದೆಯೇ ಅಡವಿಯ ಮರಗಳೆಲ್ಲಾ ಉತ್ಸಾಹ ಧ್ವನಿಮಾಡಲಿ; ಆತನು ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ. |
34. | ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು;ಆತನ ಕೃಪೆಯು ಯುಗಯುಗಕ್ಕೂ ಅವೆ. |
35. | ನಮ್ಮ ರಕ್ಷಣೆಯ ದೇವರೇ, ನಾವು ನಿನ್ನ ಪರಿಶುದ್ಧ ಹೆಸ ರನ್ನು ಕೊಂಡಾಡಿ ನಿನ್ನ ಸ್ತೋತ್ರದಲ್ಲಿ ಹೆಚ್ಚಳ ಪಡುವ ಹಾಗೆ ನಮ್ಮನ್ನು ರಕ್ಷಿಸು; ಜನಾಂಗಗಳೊಳಗಿಂದ ನಮ್ಮನ್ನು ತೆಗೆದು ಕೂಡಿಸು. |
36. | ಇಸ್ರಾಯೇಲಿನ ಕರ್ತ ನಾದ ದೇವರು ಯುಗಯುಗಾಂತರಗಳಲ್ಲಿ ಸ್ತುತಿ ಸಲ್ಪಡಲಿ ಎಂದು ಹೇಳಿರಿ. ಸಮಸ್ತ ಜನರು ಆಮೆನ್ ಎಂದು ಹೇಳಿ ಕರ್ತನನ್ನು ಸ್ತುತಿಸಿದರು. |
37. | ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ದಾವೀದನು ಬಿಟ್ಟವರು ಯಾರಂದರೆ--ಪ್ರತಿ ದಿವಸದ ಕಾರ್ಯದ ಪ್ರಕಾರ ಯಾವಾಗಲೂ ಮಂಜೂಷದ ಮುಂದೆ ಸೇವೆಮಾಡಲು ಆಸಾಫನನ್ನೂ ಅವನ ಸಹೋ ದರರನ್ನೂ; |
38. | ಒಬೇದೆದೋಮನನ್ನೂ ಅವನ ಸಹೋ ದರರಾದ ಅರವತ್ತೆಂಟು ಮಂದಿಯನ್ನೂ; ದ್ವಾರಪಾಲಕ ರಾದ ಯೆದುತೂನನ ಮಗನಾದ ಒಬೇದೆದೋಮ ನನ್ನೂ ಹೋಸನನ್ನೂ. |
39. | ಯಾವಾಗಲೂ ಉದಯ ಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ದಹನಬಲಿ ಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಕರ್ತನು ಇಸ್ರಾಯೇಲಿಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದ ಎಲ್ಲಾದರ ಪ್ರಕಾರ ಮಾಡು ವದಕ್ಕೂ |
40. | ಗಿಬ್ಯೋನಿನಲ್ಲಿರುವ ಉನ್ನತದಲ್ಲಿ ಕರ್ತನ ಗುಡಾರದ ಮುಂದೆ ಸೇವಿಸುವದಕ್ಕೆ ಯಾಜಕನಾದ ಚಾದೋಕನೂ ಯಾಜಕರಾದ ಅವನ ಸಹೋದರರೂ |
41. | ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ. |
42. | ಅವರ ಸಂಗಡ ಶಬ್ದ ಮಾಡ ಬೇಕಾದವರಿಗೋಸ್ಕರ ತುತೂರಿಗಳೂ ತಾಳಗಳೂ ದೇವರ ಗೀತ ವಾದ್ಯಗಳೂ ಸಹಿತವಾಗಿ ಹೇಮಾನನೂ ಯೆದುತೂನನೂ, ಮತ್ತು ಯೆದುತೂನನ ಕುಮಾರರು ದ್ವಾರಪಾಲಕರಾಗಿದ್ದರು. |
43. | ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು. |
← 1Chronicles (16/29) → |