← 1Chronicles (18/29) → |
1. | ಇದರ ತರುವಾಯ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ತಗ್ಗಿಸಿ ಗತ್‌ನ್ನೂ ಅದರ ಗ್ರಾಮಗಳನ್ನೂ ಫಿಲಿಷ್ಟಿಯರ ಕೈಯೊಳಗಿಂದ ತೆಗೆದುಕೊಂಡನು. |
2. | ಹಾಗೆಯೇ ಅವನು ಮೋವಾಬ್ಯರನ್ನು ಸಂಹರಿಸಿ ದ್ದರಿಂದ ಮೋವಾಬ್ಯರು ದಾವೀದನಿಗೆ ಸೇವಕರಾಗಿ ಕಪ್ಪವನ್ನು ಕೊಡುವವರಾದರು. |
3. | ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಿರಪಡಿಸಲು ಹೋಗುತ್ತಿ ರುವಾಗ ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದರೆಜರನನ್ನು ಸಂಹರಿಸಿದನು. |
4. | ದಾವೀದನು ಅವ ನಿಂದ ಸಾವಿರ ರಥಗಳನ್ನೂ ಏಳು ಸಾವಿರ ರಾಹುತ ರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ತೆಗೆದು ಕೊಂಡನು. ದಾವೀದನು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲುನರ ಗಳನ್ನು ಕೊಯಿಸಿ ಬಿಟ್ಟನು. |
5. | ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದರೆಜರನಿಗೆ ಸಹಾಯ ಕೊಡಲು ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಮಂದಿಯನ್ನು ಸಂಹರಿಸಿಬಿಟ್ಟನು. |
6. | ದಾವೀದನು ದಮಸ್ಕದ ಅರಾಮಿನಲ್ಲಿ ಠಾಣಗಳನ್ನು ಇಟ್ಟನು. ಅರಾಮ್ಯರು ದಾವೀದನಿಗೆ ಸೇವಕರಾಗಿ ಕಪ್ಪ ವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ರಕ್ಷಿಸಿದನು. |
7. | ಆಗ ದಾವೀದನು ಹದರೆಜರನ ಸೇವಕರಿಗುಂಟಾದ ಬಂಗಾ ರದ ಗುರಾಣಿಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು. |
8. | ಇದಲ್ಲದೆ ಹದರೆಜರನ ಪಟ್ಟಣಗಳಾದ ಟಭತಿನಿಂದಲೂ ಕೂನಿನಿಂದಲೂ ದಾವೀದನು ಅತ್ಯಧಿಕವಾಗಿ ತಾಮ್ರವನ್ನು ತಂದನು. ಅದರಿಂದ ಸೊಲೊಮೋನನು ತಾಮ್ರದ ಸಮುದ್ರ ವನ್ನೂ ಸ್ತಂಭಗಳನ್ನೂ ತಾಮ್ರದ ಪಾತ್ರೆಗಳನ್ನೂ ಮಾಡಿಸಿದನು. |
9. | ಆದರೆ ಹಮಾತಿನ ಅರಸನಾದ ತೋವನಿಗೆ ಹದ ರೆಜರನ ಸಂಗಡ ಯುದ್ಧ ಉಂಟಾಗಿದ್ದದರಿಂದ ದಾವೀದನು ಹದರೆಜರನ ಸಮಸ್ತ ಸೈನ್ಯವನ್ನು ಹೊಡೆದ ವರ್ತಮಾನವನ್ನು ತೋವಿಗೆ ಮುಟ್ಟಿದಾಗ |
10. | ಅರಸ ನಾದ ದಾವೀದನ ಕ್ಷೇಮ ಸಮಾಚಾರವನ್ನು ವಿಚಾರಿ ಸಲೂ ಹದರೆಜರನ ಸಂಗಡ ಯುದ್ಧ ಮಾಡಿ ಅವನನ್ನು ಹೊಡೆದದ್ದಕ್ಕೋಸ್ಕರ ಅವನನ್ನು ಆಶೀರ್ವದಿಸಲೂ ತೋವನು ತನ್ನ ಕುಮಾರನಾದ ಹದೋರಾಮನನ್ನು ಎಲ್ಲಾ ತರವಾದ ಬೆಳ್ಳಿ ಬಂಗಾರ ತಾಮ್ರದ ಪಾತ್ರೆಗಳು ಸಹಿತವಾಗಿ ಅವನ ಬಳಿಗೆ ಕಳುಹಿಸಿದನು. |
11. | ಇವುಗಳನ್ನು ಅರಸನಾದ ದಾವೀದನು ಎದೋಮ್ಯರು ಮೋವಾಬ್ಯರು ಅಮ್ಮೋನನ ಮಕ್ಕಳು ಫಿಲಿಷ್ಟಿಯರು ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿ ಬಂಗಾರವನ್ನು ಕರ್ತನಿಗೆ ಪ್ರತಿಷ್ಠೆಮಾಡಿದನು. |
12. | ಇದಲ್ಲದೆ, ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರೊಳಗೆ ಹದಿನೆಂಟು ಸಾವಿರ ಮಂದಿಯನ್ನು ಕೊಂದು ಎದೋಮಿನಲ್ಲಿ ಠಾಣ ಗಳನ್ನು ಇಟ್ಟನು. ಎದೋಮ್ಯರೆಲ್ಲರೂ ದಾವೀದನ ಸೇವಕರಾದರು. |
13. | ದಾವೀದನು ಎಲ್ಲಿ ಹೋದನೋ ಅಲ್ಲಿ ಕರ್ತನು ಅವನನ್ನು ರಕ್ಷಿಸಿದನು. |
14. | ಹೀಗೆಯೇ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ, ತನ್ನ ಸಮಸ್ತ ಜನರಿಗೆ ನ್ಯಾಯವನ್ನೂ ನೀತಿಯನ್ನೂ ನಡಿಸಿದನು. |
15. | ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕ ನಾಗಿದ್ದನು. |
16. | ಅಹೀಟೂಬನ ಮಗನಾದ ಚಾದೋ ಕನೂ ಎಬ್ಯಾತಾರನ ಮಗನಾದ ಅಬೀಮೆಲೆಕನೂ ಯಾಜಕರಾಗಿದ್ದರು. |
17. | ಶವ್ಷನು ಶಾಸ್ತ್ರಿಯಾಗಿದ್ದನು. ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿ ಯಾಗಿದ್ದನು. ದಾವೀದನ ಮಕ್ಕಳು ಅರಸನ ಬಳಿಯಲ್ಲಿ ಮುಖ್ಯಸ್ಥರಾಗಿದ್ದರು. |
← 1Chronicles (18/29) → |