← 1Chronicles (25/29) → |
1. | ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು. |
2. | ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು. |
3. | ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು. |
4. | ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು. |
5. | ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು. |
6. | ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು. |
7. | ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು. |
8. | ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು. |
9. | ಆಸಾಫನಿ ಗೋಸ್ಕರ ಮೊದಲನೇ ಚೀಟು ಯೋಸೆಫನಿಗೆ ಬಂತು; ಎರಡನೆಯದು ಗೆದಲ್ಯನಿಗೆ, ಅವನೂ ಅವನ ಸಹೋ ದರರೂ ಅವನ ಕುಮಾರರೂ ಹನ್ನೆರಡು ಮಂದಿ; |
10. | ಮೂರನೆಯದು ಜಕ್ಕೂರನಿಗೆ; ಅವನೂ ಅವನ ಕುಮಾರರೂ ಸಹೋದರರೂ ಹನ್ನೆರಡು ಮಂದಿ, |
11. | ನಾಲ್ಕನೆಯದು ಇಚ್ರೀಗೆ, ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; |
12. | ಐದನೆ ಯದು ನೆತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ. |
13. | ಆರನೆ ಯದು ಬುಕ್ಕಿಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; |
14. | ಏಳನೆ ಯದು ಯೆಸರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; |
15. | ಎಂಟನೆ ಯದು ಯೆಶಾಯನಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; |
16. | ಒಂಭ ತ್ತನೆಯದು ಮತ್ತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; |
17. | ಹತ್ತನೆಯದು ಶಿವ್ಮೆಾಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ; |
18. | ಹನ್ನೊಂದನೆಯದು ಅಜರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; |
19. | ಹನ್ನೆರಡನೆಯದು ಹಷಬ್ಯನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; |
20. | ಹದಿಮೂರನೆಯದು ಶೂಬಾಯೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; |
21. | ಹದಿನಾಲ್ಕನೆಯದು ಮತ್ತಿತ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; |
22. | ಹದಿನೈದನೆಯದು ಯೆರೆಮೋತ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ; |
23. | ಹದಿನಾರನೆಯದು ಹನನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; |
24. | ಹದಿನೇಳನೆ ಯದು ಯೊಷ್ಬೆಕಾಷನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; |
25. | ಹದಿ ನೆಂಟನೆಯದು ಹನಾನೀಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ; |
26. | ಹತ್ತೊಂಭತ್ತನೆಯದು ಮಲ್ಲೋತಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆ ರಡು ಮಂದಿ; |
27. | ಇಪ್ಪತ್ತನೆಯದು ಎಲೀಯಾತನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; |
28. | ಇಪ್ಪತ್ತೊಂದನೆಯದು ಹೋತೀ ರನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ; |
29. | ಇಪ್ಪತ್ತೆರಡನೆಯದು ಗಿದ್ದಲ್ತಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; |
30. | ಇಪ್ಪತ್ತು ಮೂರನೆಯದು ಮಹಜೀಯೋತನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; |
31. | ಇಪ್ಪತ್ತು ನಾಲ್ಕನೆಯದು ರೊಮಮ್ತಿಯೇಜರ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ. |
← 1Chronicles (25/29) → |