← 1Corinthians (4/16) → |
1. | ಒಬ್ಬನು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಮರ್ಮಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಲಿ. |
2. | ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಾಗಿದೆ. |
3. | ನನಗಾದರೋ ನಿಮ್ಮಿಂದಾಗಲಿ ಮನುಷ್ಯರ ನ್ಯಾಯವಿಚಾರಣೆಯಿಂದಾಗಲಿ ನನಗೆ ನ್ಯಾಯವಿಚಾರಣೆಯಾಗುವದು ಅತ್ಯಲ್ಪವಾಗಿದೆ. ಹೌದು, ನಾನೂ ನನ್ನನ್ನು ವಿಚಾರಿಸಿಕೊಳ್ಳುವದಿಲ್ಲ. |
4. | ನಾನೇ ನಾನಾಗಿ ಏನೂ ತಿಳಿಯದವನಾಗಿದ್ದೇನೆ; ಆದಾಗ್ಯೂ ಅದರಿಂದ ನಾನು ನೀತಿವಂತನಾಗಲಿಲ್ಲ; ನನ್ನನ್ನು ವಿಚಾರಿಸುವಾತನು ಕರ್ತನೇ. |
5. | ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು. |
6. | ಸಹೋದರರೇ, ನಾನು ನಿಮಗೋಸ್ಕರವೇ ಸಾಮ್ಯರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ; ಬರೆದಿರುವದನ್ನು ನೀವು ವಿಾರಿಹೋಗದೆ ನಿಮ್ಮಲ್ಲಿ ಯಾರೂ ಒಬ್ಬನಿಗೆ ವಿರೋಧವಾಗಿ ಮತ್ತೊಬ್ಬನು ಉಬ್ಬಿಕೊಳ್ಳಬಾರದೆಂಬದನ್ನು ನಮ್ಮಲ್ಲಿ ಕಲಿತುಕೊಳ್ಳ ಬೇಕು. |
7. | ನಿನಗೂ ಇತರರಿಗೂ ತಾರತಮ್ಯ ಮಾಡಿ ದವರು ಯಾರು? ನೀನು ಹೊಂದದೆ ಇರುವಂಥದ್ದು ನಿನ್ನಲ್ಲಿ ಯಾವದು ಇದೆ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ? |
8. | ಈಗಾಗಲೇ ನೀವು ತೃಪ್ತರಾದಿರಿ, ಈಗಾಗಲೇ ಐಶ್ವರ್ಯವಂತರಾದಿರಿ, ನಾವಿಲ್ಲದೆ ನೀವು ಅರಸರಂತೆ ಆಳಿದಿರಿ; ನೀವು ಆಳುವಂತೆ ದೇವರು ಮಾಡಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು; ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೆವು. |
9. | ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು. |
10. | ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು. |
11. | ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ |
12. | ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ |
13. | ಅಪಕೀರ್ತಿ ಹೊಂದಿ ಬೇಡಿಕೊಳ್ಳುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಮಾಡಲ್ಪಟ್ಟಿದ್ದೇವೆ. |
14. | ನಿಮ್ಮನ್ನು ನಾಚಿಕೆಪಡಿಸುವದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮ್ಮನ್ನು ಎಚ್ಚರಿಸುವ ದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ. |
15. | ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಹತ್ತು ಸಾವಿರ ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು. |
16. | ಆದದರಿಂದ ನನ್ನನ್ನು ಹಿಂಬಾಲಿಸ ಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. |
17. | ಈ ಕಾರಣ ದಿಂದ ಕರ್ತನಲ್ಲಿ ನನ್ನ ಪ್ರಿಯ ಮಗನಾದ ತಿಮೊಥೆ ಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೆನೆ; ಅವನು ಕರ್ತನಲ್ಲಿ ನಂಬಿಗಸ್ತನಾಗಿದ್ದಾನೆ; ಅವನು ಕ್ರಿಸ್ತನಲ್ಲಿ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮ ವನ್ನು ನಿಮ್ಮ ನೆನಪಿಗೆ ತರು |
18. | ನಾನು ನಿಮ್ಮ ಬಳಿಗೆ ಬರುವದಿಲ್ಲವೇನೋ ಎಂದು ಕೆಲವರು ಉಬ್ಬಿಕೊಂಡಿದ್ದಾರೆ. |
19. | ಆದರೆ ಕರ್ತನ ಚಿತ್ತವಿದ್ದರೆ ನಾನು ಬೇಗ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿ ರುವವರ ಮಾತನ್ನಲ್ಲ, ಅವರ ಶಕ್ತಿಯನ್ನೇ ಗೊತ್ತು ಮಾಡಿಕೊಳ್ಳುವೆನು. |
20. | ದೇವರ ರಾಜ್ಯವು ಮಾತಿನಲ್ಲಿ ಇಲ್ಲ, ಆದರೆ ಶಕ್ತಿಯಲ್ಲಿಯೇ ಆಧಾರಗೊಂಡಿದೆ. |
21. | ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ? |
← 1Corinthians (4/16) → |