← 1Corinthians (9/16) → |
1. | ನಾನು ಅಪೊಸ್ತಲನಲ್ಲವೇ? ನಾನು ಸ್ವತಂತ್ರನಲ್ಲವೇ? ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಾನು ನೋಡಿದವನಲ್ಲವೇ? ಕರ್ತನಲ್ಲಿ ನೀವು ನನ್ನ ಕೆಲಸವಲ್ಲವೇ? |
2. | ನಾನು ಅಪೊಸ್ತಲನಲ್ಲವೇ? ನಾನು ಸ್ವತಂತ್ರನಲ್ಲವೇ? ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಾನು ನೋಡಿದವನಲ್ಲವೇ? ಕರ್ತನಲ್ಲಿ ನೀವು ನನ್ನ ಕೆಲಸವಲ್ಲವೇ? |
3. | ನನ್ನನ್ನು ವಿಚಾರಿಸು ವವರಿಗೆ ಇದೇ ನನ್ನ ಉತ್ತರ. |
4. | ತಿನ್ನುವದಕ್ಕೂ ಕುಡಿಯು ವದಕ್ಕೂ ನಮಗೆ ಹಕ್ಕಿಲ್ಲವೇ? |
5. | ಸಹೋದರಿಯಾಗಿ ರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ ಕರ್ತನ ಸಹೋದರ ರಂತೆಯೂ ಕೇಫನಂತೆಯೂ ನಮಗೆ ಅಧಿಕಾರ ವಿಲ್ಲವೇ? |
6. | ಇಲ್ಲವೆ ಕೆಲಸಮಾಡದೆ ಇರುವದಕ್ಕೆ ನನಗೂ ಬಾರ್ನಬನಿಗೂ ಮಾತ್ರ ಅಧಿಕಾರವಿಲ್ಲವೇ? |
7. | ಸ್ವಂತ ಖರ್ಚಿನಿಂದ ಯಾರಾದರೂ ಯಾವಾಗಲಾದರೂ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇ ತೋಟವನ್ನು ನೆಟ್ಟ ಯಾರಾದರೂ ಅದರ ಫಲವನ್ನು ತಿನ್ನದಿರುವ ದುಂಟೇ? ಇಲ್ಲವೆ ಮಂದೆಯನ್ನು ಮೇಯಿಸಿದ ಯಾರಾದರೂ ಮಂದೆಯ ಹೈನವನ್ನು ತಿನ್ನದಿರುವ ದುಂಟೇ? |
8. | ಮನುಷ್ಯ ರೀತಿಯಲ್ಲಿ ನಾನು ಇವುಗಳನ್ನು ಹೇಳುತ್ತೇನೋ? ಇಲ್ಲವೆ ನ್ಯಾಯ ಪ್ರಮಾಣವು ಸಹ ಇದನ್ನು ಹೇಳುವದಿಲ್ಲವೋ? |
9. | ಕಣತುಳಿಯುವ ಎತ್ತಿನ ಬಾಯನ್ನು ನೀನು ಕಟ್ಟಬಾರದು ಎಂದು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದದೆ. ದೇವರು ಚಿಂತಿಸು ವದು ಎತ್ತುಗಳಿಗಾಗಿಯೋ? |
10. | ಇಲ್ಲವೆ ನಮಗೋಸ್ಕರ ವಾಗಿಯೇ ಆತನು ಹೇಳುತ್ತಾನೋ? ಉಳುವವನು ನಿರೀಕ್ಷೆಯಿಂದ ಉಳಬೇಕು, ನಿರೀಕ್ಷೆಯಲ್ಲಿ ಕಣತುಳಿಸು ವವನು ತನ್ನ ನಿರೀಕ್ಷೆಯಲ್ಲಿ ಪಾಲುಗಾರನಾಗಿರಬೇಕು ಎಂದು ನಮಗೋಸ್ಕರ ನಿಸ್ಸಂದೇಹವಾಗಿ ಇದು ಬರೆಯಲ್ಪಟ್ಟಿತು. |
11. | ನಾವು ನಿಮಗೋಸ್ಕರ ಆತ್ಮಸಂಬಂಧ ವಾದವುಗಳನ್ನು ಬಿತ್ತಿದ ಮೇಲೆ ನಿಮ್ಮಿಂದ ಶಾರೀರಿಕ ವಾದವುಗಳನ್ನು ಕೊಯ್ಯುವದು ದೊಡ್ಡದೋ? |
12. | ನಿಮ್ಮ ಮೇಲಿರುವ ಅಧಿಕಾರದಲ್ಲಿ ಇತರರಿಗೆ ಪಾಲು ಇದ್ದರೆ ಅವರಿಗಿಂತ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಅಧಿಕಾರವನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿ ಕೊಂಡಿರುತ್ತೇವೆ. |
13. | ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ? |
14. | ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡ ಬೇಕೆಂದು ಕರ್ತನು ನೇಮಿಸಿದನು. |
15. | ಆದರೆ ಇವುಗಳಲ್ಲಿ ಒಂದನ್ನೂ ನಾನು ಉಪ ಯೋಗಿಸಲಿಲ್ಲ; ಇಲ್ಲವೆ ನನಗೆ ಹಾಗೆ ಆಗಲೆಂದು ನಾನು ಈ ವಿಷಯಗಳನ್ನು ಬರೆಯಲೂ ಇಲ್ಲ; ಯಾಕಂದರೆ ನಾನು ಹೆಚ್ಚಳಪಡುವದನ್ನು ಯಾವ ನಾದರೂ ವ್ಯರ್ಥ ಮಾಡುವದಕ್ಕಿಂತ ಸಾಯುವದೇ ನನಗೆ ಮೇಲು. |
16. | ನಾನು ಸುವಾರ್ತೆಯನ್ನು ಸಾರಿದರೂ ಹೆಚ್ಚಳ ಪಡುವದಕ್ಕೆ ನನಗೇನೂ ಇಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲೆ ಇದೆ. ಹೌದು, ನಾನು ಸುವಾರ್ತೆಯನ್ನು ಸಾರದಿದ್ದರೆ ನನಗೆ ಅಯ್ಯೋ! |
17. | ನಾನು ಇದನ್ನು ಇಷ್ಟಪೂರ್ವಕವಾಗಿ ಮಾಡಿದರೆ ನನಗೆ ಬಹುಮಾನವುಂಟು. ನನ್ನ ಇಷ್ಟಕ್ಕೆ ವಿರೋಧ ವಾಗಿ ಮಾಡಿದರೆ ಸುವಾರ್ತೆಯ ವಿಷಯವಾದ ದೈವನೇಮವು ನನ್ನ ವಶಕ್ಕೆ ಕೊಡಲ್ಪಟ್ಟಿದೆ. |
18. | ಹಾಗಾ ದರೆ ನನ್ನ ಬಹುಮಾನ ಯಾವದು? ನಿಶ್ಚಯವಾಗಿ ನಾನು ಸುವಾರ್ತೆಯನ್ನು ಸಾರುವಾಗ ಸುವಾರ್ತೆ ಯಲ್ಲಿರುವ ನನ್ನ ಅಧಿಕಾರವನ್ನು ನಾನು ದುರುಪ ಯೋಗ ಮಾಡದಂತೆ ಕ್ರಿಸ್ತನ ಸುವಾರ್ತೆಯನ್ನು ಉಚಿತವಾಗಿ ಸಾರುವದೇ ನನ್ನ ಬಹುಮಾನ. |
19. | ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ. |
20. | ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ |
21. | (ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು. |
22. | ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ. |
23. | ನಾನು ನಿಮ್ಮೊಂದಿಗೆ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಸುವಾರ್ತೆ ಗೋಸ್ಕರವೇ ಇದನ್ನು ಮಾಡುತ್ತೇನೆ. |
24. | ರಂಗಸ್ಥಾನದಲ್ಲಿ ಓಡುವವರೆಲ್ಲರೂ ಓಡುತ್ತಾರಾ ದರೂ ಒಬ್ಬನು ಮಾತ್ರ ಬಹುಮಾನವನ್ನು ಹೊಂದುತ್ತಾ ನೆಂಬದು ನಿಮಗೆ ತಿಳಿಯದೋ? ಅವರಂತೆ ನೀವೂ ಬಹುಮಾನವನ್ನು ಪಡಕೊಳ್ಳಬೇಕೆಂತಲೇ ಓಡಿರಿ. |
25. | ಪ್ರವೀಣತೆಗಾಗಿ ಹೋರಾಡುವ ಪ್ರತಿಯೊಬ್ಬನು ಎಲ್ಲಾ ವಿಷಯಗಳಲ್ಲಿ ಮಿತವಾಗಿರುತ್ತಾನೆ; ಅವರಾ ದರೋ ನಾಶವಾಗುವ ಕಿರೀಟವನ್ನು ಹೊಂದಿಕೊಳ್ಳು ವದಕ್ಕಾಗಿ ಹೋರಾಡುತ್ತಾರೆ; ನಾವಾದರೋ ನಾಶ ವಾಗದ ಕಿರೀಟಕ್ಕಾಗಿಯೇ ಹೋರಾಡುತ್ತೇವೆ. |
26. | ಹೀಗಿರಲಾಗಿ ನಾನು ಸಹ ಗುರಿಗೊತ್ತಿಲ್ಲದವನಾಗಿ ಓಡದೆ ಗೆಲ್ಲಬೇಕೆಂದು ಅವರಂತೆಯೇ ಓಡುತ್ತೇನೆ; ನಾನು ಗಾಳಿಯನ್ನು ಗುದ್ದುವವನಾಗಿರದೆ ಗೆಲ್ಲಬೇಕೆಂದು ಹೋರಾಡುತ್ತೇನೆ. |
27. | ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ. |
← 1Corinthians (9/16) → |