← 1Kings (15/22) → |
1. | ನೆಬಾಟನ ಮಗನಾಗಿರುವ ಅರಸನಾದ ಯಾರೊಬ್ಬಾಮನ ಹದಿನೆಂಟನೇ ವರುಷ ದಲ್ಲಿ ಅಬೀಯಾಮನು ಯೆಹೂದದ ಮೇಲೆ ಆಳುತ್ತಿ ದ್ದನು. |
2. | ಅವನು ಯೆರೂಸಲೇಮಿನಲ್ಲಿ ಮೂರು ವರುಷ ಆಳಿದನು. ಅವನ ತಾಯಿ ಅಬೀಷಾಲೋಮನ ಮಗ ಳಾಗಿದ್ದು ಮಾಕಾ ಎಂಬ ಹೆಸರುಳ್ಳವಳಾಗಿದ್ದಳು. |
3. | ಆದರೆ ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ ತನ್ನ ಹೃದಯವು ತನ್ನ ದೇವರಾದ ಕರ್ತನ ಮುಂದೆ ಪೂರ್ಣವಾಗಿರದೆ ತನಗೆ ಮುಂಚಿದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು. |
4. | ಅವನ ತರುವಾಯ ಅವನ ಮಗನನ್ನು ನೇಮಿಸುವದಕ್ಕೂ ಯೆರೂಸಲೇಮನ್ನು ಸ್ಥಿರಪಡಿಸುವದಕ್ಕೂ ತನ್ನ ದೇವರಾದ ಕರ್ತನು ದಾವೀದನ ನಿಮಿತ್ತ ಯೆರೂ ಸಲೇಮಿನಲ್ಲಿ ಅವನಿಗೆ ದೀಪವನ್ನು ಕೊಟ್ಟನು. |
5. | ದಾವೀದನು ಹಿತ್ತಿಯನಾದ ಊರೀಯನ ವಿಷಯ ಹೊರತಾಗಿ ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಕರ್ತನು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ ಆತನ ದೃಷ್ಟಿಗೆ ಮೆಚ್ಚಿಗೆಯಾದದ್ದನ್ನು ಮಾಡಿ ದನು. ಆದರೆ ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧಉಂಟಾಗಿತ್ತು. |
6. | ಅಬೀಯಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟವಲ್ಲವೋ? |
7. | ಅಬೀಯಾಮನಿಗೂ ಯಾರೂಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು. |
8. | ಅಬೀಯಾಮನು ತನ್ನ ಪಿತೃಗಳ ಸಂಗಡ ಮಲಗಿ ದನು; ದಾವೀದನ ಪಟ್ಟಣದಲ್ಲಿ ಅವನನ್ನು ಹೂಣಿ ಟ್ಟರು. ಅವನ ಮಗನಾದ ಆಸನು ಅವನಿಗೆ ಬದಲಾಗಿ ಆಳಿದನು. |
9. | ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನ ಇಪ್ಪತ್ತನೇ ವರುಷದಲ್ಲಿ ಆಸನು ಯೆಹೂದದ ಮೇಲೆ ಆಳಿದನು. |
10. | ನಾಲ್ವತ್ತೊಂದು ವರುಷ ಅವನು ಯೆರೂ ಸಲೇಮಿನಲ್ಲಿ ಆಳಿದನು. ಅವನ ತಾಯಿ ಅಬೀಷಾ ಲೋಮನ ಮಗಳಾಗಿದ್ದು ಮಾಕಾಳೆಂಬ ಹೆಸರುಳ್ಳವ ಳಾಗಿದ್ದಳು. |
11. | ಆಸನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನ ಸಮ್ಮುಖದಲ್ಲಿ ಮೆಚ್ಚಿಗೆಯಾದದ್ದನ್ನು ಮಾಡಿದನು. |
12. | ಅವನು ಪುರುಷ ಸಂಗಮರನ್ನು ದೇಶದಲ್ಲಿಂದ ಹೊರಡಿಸಿ ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು. |
13. | ಇದಲ್ಲದೆ ಆಸನು ತನ್ನ ತಾಯಿಯಾದ ಮಾಕಾ ತೋಪಿನಲ್ಲಿ ಒಂದು ವಿಗ್ರಹವನ್ನು ಮಾಡಿಸಿ ಇಟ್ಟದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿ ಅವಳ ವಿಗ್ರಹ ವನ್ನು ಕಡಿದುಬಿಟ್ಟು ಕಿದ್ರೋನೆಂಬ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು. |
14. | ಉನ್ನತ ಸ್ಥಳಗಳಾದರೋ ಅವು ತೆಗೆದು ಹಾಕಲ್ಪಟ್ಟಿದ್ದಿಲ್ಲ; ಆದಾಗ್ಯೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ಕರ್ತನ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು. |
15. | ತಾನೂ ತನ್ನ ತಂದೆಯೂ ಅರ್ಪಿಸಿದ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ಅಂತೂ ಪ್ರತಿಷ್ಠಿಸಿದವುಗಳನ್ನು ಅವನು ಕರ್ತನ ಮಂದಿರಕ್ಕೆ ತಂದನು. |
16. | ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷ ನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧ ನಡೆಯು ತ್ತಿತ್ತು. |
17. | ಆಗ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಹೋಗಿ ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲಿ ಹೊರಗಾಗಲಿ ಯಾರೂ ಹೋಗದ ಹಾಗೆ ರಾಮವನ್ನು ಕಟ್ಟಿಸಿದನು. |
18. | ಆಗ ಆಸನು ಕರ್ತನ ಮಂದಿರದ ಬೊಕ್ಕಸಗಳನ್ನೂ ಮಿಕ್ಕ ಸಮಸ್ತ ಬೆಳ್ಳಿ ಬಂಗಾರವನ್ನು ಅರಮನೆಯ ಬೊಕ್ಕಸಗಳಲ್ಲಿ ತೆಗೆದು ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ ದಮಸ್ಕ ಪಟ್ಟಣದಲ್ಲಿ ವಾಸವಾಗಿರುವ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ--ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆ ಉಂಟಲ್ಲಾ. |
19. | ಇಗೋ, ನಾನು ಬೆಳ್ಳಿ ಬಂಗಾರವನ್ನು ಕಾಣಿಕೆಯಾಗಿ ನಿನ್ನ ಬಳಿಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವ ಹಾಗೆ ನೀನು ಬಂದು ಅವನ ಸಂಗಡ ಮಾಡಿದ ನಿನ್ನ ಒಡಂಬಡಿಕೆಯನ್ನು ಮುರಿಯಬೇಕು ಅಂದನು. |
20. | ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನಗುಂಟಾದ ಸೈನ್ಯಗಳ ಅಧಿಪತಿ ಗಳನ್ನು ಕಳುಹಿಸಿ ಇಯ್ಯೋನ್, ದಾನ್, ಆಬೇಲ್ಬೇ ತ್ಮಾಕಾ ಸಮಸ್ತ ಕಿನ್ನೆರೋತ್, ಸಮಸ್ತ ನಫ್ತಾಲಿ ದೇಶವು, ಇವುಗಳನ್ನು ಹೊಡೆದುಬಿಟ್ಟನು. |
21. | ಬಾಷನು ಅದನ್ನು ಕೇಳುತ್ತಲೆ ರಾಮವನ್ನು ಕಟ್ಟಿಸುವದನ್ನು ಬಿಟ್ಟು ತಿರ್ಚ ದಲ್ಲಿ ವಾಸಿಸಿದನು. |
22. | ಆಗ ಅರಸನಾದ ಆಸನು ಯೆಹೂದದೆಲ್ಲೆಲ್ಲಿಯೂ ಸಾರಿದನು; ಒಬ್ಬರೂ ಬಿಡಲ್ಪ ಡಲಿಲ್ಲ; ಆಗ ಅವರು ಬಾಷನು ಕಟ್ಟಿಸಿದ ರಾಮದ ಕಲ್ಲುಗಳನ್ನೂ ಅದರ ಮರಗಳನ್ನೂ ತಕ್ಕೊಂಡು ಹೋದರು. ಅರಸನಾದ ಆಸನು ಅವುಗಳಿಂದ ಬೆನ್ಯಾವಿಾನನ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು. |
23. | ಆಸನ ಮಿಕ್ಕಾದ ಎಲ್ಲಾ ಕ್ರಿಯೆಗಳೂ ಅವನ ಸಮಸ್ತ ಪರಾಕ್ರಮವೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ಪಟ್ಟಣಗಳೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ? ಆದರೆ ತನ್ನ ವೃದ್ದಾಪ್ಯದ ಕಾಲದಲ್ಲಿ ಅವನು ತನ್ನ ಕಾಲುಗಳಲ್ಲಿ ಅಸ್ವಸ್ಥನಾಗಿದ್ದನು. |
24. | ಆಸನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣಿಡಲ್ಪಟ್ಟನು. ಅವನಿಗೆ ಬದ ಲಾಗಿ ಅವನ ಮಗನಾದ ಯೆಹೋಷಾಫಾಟನು ಆಳಿದನು. |
25. | ಯೆಹೂದದ ಅರಸನಾದ ಆಸನ ಎರಡನೇ ವರುಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಎರಡು ವರುಷ ಆಳಿದನು. |
26. | ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಪಾಪಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದ ಅವನ ತಂದೆಯ ಪಾಪದಲ್ಲಿಯೂ ಅವನ ಮಾರ್ಗದಲ್ಲಿಯೂ ನಡೆದನು. |
27. | ಇಸ್ಸಾಕಾರನ ಮನೆಯವನಾಗಿರುವ ಅಹೀಯನ ಮಗನಾದ ಬಾಷನು ಅವನಿಗೆ ವಿರೋಧವಾಗಿದ್ದು ಫಿಲಿಷ್ಟಿಯರಿಗೆ ಉಂಟಾದ ಗಿಬ್ಬೆತೋನಿನಲ್ಲಿ ಅವನನ್ನು ಹೊಡೆದುಬಿಟ್ಟನು. ಯಾಕಂದರೆ ನಾದಾಬನೂ ಸಮಸ್ತ ಇಸ್ರಾಯೇಲ್ಯರೂ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು. |
28. | ಯೆಹೂದದ ಅರಸನಾದ ಆಸನ ಮೂರ ನೇ ವರುಷದಲ್ಲಿ ಬಾಷನು ನಾದಾಬನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ಆಳಿದನು. |
29. | ಅವನು ಆಳುತ್ತಿರುವಾಗ ಏನಾಯಿತಂದರೆ, ಯಾರೊಬ್ಬಾಮನ ಮನೆಯನ್ನೆಲ್ಲಾ ಹೊಡೆದುಬಿಟ್ಟನು. |
30. | ಯಾರೊಬ್ಬಾ ಮನು ಪಾಪಮಾಡಿ ಇಸ್ರಾಯೇಲ್ಯರನ್ನು ಪ್ರೇರೇಪಿ ಸಿದ ನಿಮಿತ್ತವಾಗಿಯೂ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ ಕರ್ತನು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ಅವನು ಯಾರೊಬ್ಬಾಮನನ್ನು ನಾಶಮಾಡುವ ವರೆಗೆ ಶ್ವಾಸವುಳ್ಳ ಒಬ್ಬನನ್ನೂ ಉಳಿಯಗೊಡಿಸಲಿಲ್ಲ. |
31. | ಆದರೆ ನಾದಾಬನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? |
32. | ಇದಲ್ಲದೆ ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧವಿತ್ತು. |
33. | ಯೆಹೂದದ ಅರಸನಾದ ಆಸನ ಮೂರನೇ ವರುಷದಲ್ಲಿ ಅಹೀಯನ ಮಗನಾದ ಬಾಷನು ಸಮಸ್ತ ಇಸ್ರಾಯೇಲ್ಯರ ಮೇಲೆ ತಿರ್ಚದಲ್ಲಿ ಆಳಲು ಆರಂಭಿಸಿ ಇಪ್ಪತ್ತನಾಲ್ಕು ವರುಷ ಆಳಿದನು. |
34. | ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಯಾರೊ ಬ್ಬಾಮನ ಮಾರ್ಗದಲ್ಲಿಯೂ ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ಲ್ಲಿಯೂ ನಡೆದನು. |
← 1Kings (15/22) → |