← 1Kings (22/22) |
1. | ಆದರೆ ಅರಾಮ್ಯರಿಗೂ ಇಸ್ರಾಯೇಲ್ಯ ರಿಗೂ ಮೂರು ವರುಷ ಯುದ್ಧವಿಲ್ಲದೆ ಇತ್ತು. |
2. | ಮೂರನೇ ವರುಷದಲ್ಲಿ ಏನಾಯಿತಂದರೆ, ಯೆಹೂದದ ಅರಸನಾದ ಯೆಹೋಷಾಫಾಟನು ಇಸ್ರಾಯೇಲಿನ ಅರಸನ ಬಳಿಗೆ ಬಂದನು. |
3. | ಇಸ್ರಾ ಯೇಲಿನ ಅರಸನು ತನ್ನ ಸೇವಕರಿಗೆ--ಗಿಲ್ಯಾದಿನ ಲ್ಲಿರುವ ರಾಮೋತ್ ನಮ್ಮದೆಂದು ಅರಿಯಿರಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದು ಕೊಳ್ಳದೆ ಸುಮ್ಮನೆ ಇದ್ದೇವೆ ಅಂದನು. |
4. | ಆಗ ಅವನು ಯೆಹೋಷಾಫಾಟನಿಗೆ -- ನೀನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ ಅಂದನು. ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಿಗೆ--ನಿನ್ನ ಹಾಗೆಯೇ ನಾನೂ ನಿನ್ನ ಜನರ ಹಾಗೆಯೇ ನನ್ನ ಜನರೂ ನಿನ್ನ ಕುದುರೆಗಳ ಹಾಗೆಯೇ ನನ್ನ ಕುದುರೆಗಳೂ ಇದ್ದೇವೆ ಅಂದನು. |
5. | ಆದರೆ ಯೆಹೂಷಾಫಾಟನು ಇಸ್ರಾಯೇಲಿನ ಅರಸ ನಿಗೆ--ನೀನು ದಯಮಾಡಿ ಇಂದು ಕರ್ತನ ವಾಕ್ಯವನ್ನು ವಿಚಾರಿಸು ಅಂದನು. |
6. | ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು. |
7. | ಆದರೆ ಯೆಹೋಷಾಫಾಟನು--ಇವರು ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇರುವದಿಲ್ಲವೋ ಅಂದನು. |
8. | ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು. |
9. | ಆಗ ಇಸ್ರಾಯೇಲಿನ ಅರಸನು ಒಬ್ಬ ಅಧಿಕಾರಿಯನ್ನು ಕರೆದು--ಇಮ್ಲನ ಮಗನಾದ ವಿಾಕಾ ಯೆಹುನನ್ನು ಶೀಘ್ರವಾಗಿ ಕರಕೊಂಡು ಬಾ ಅಂದನು. |
10. | ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೂಷಾಫಾಟನೂ ವಸ್ತ್ರಗಳನ್ನು ಧರಿಸಿ ಕೊಂಡು ಸಮಾರ್ಯದ ಬಾಗಲ ಮುಂದಣ ಕಣದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿದ್ದರು; ಸಕಲ ಪ್ರವಾದಿ ಗಳೂ ಅವರ ಮುಂದೆ ಪ್ರವಾದಿಸಿದರು. |
11. | ಆಗ ಕೆನಾನನ ಮಗನಾದ ಚಿದ್ಕೀಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು--ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು |
12. | ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನ ರಾಮೋತಿಗೆ ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು. |
13. | ಆದರೆ ವಿಾಕಾಯೆಹುನನ್ನು ಕರೆಯಲು ಹೋದ ದೂತನು ಅವನಿಗೆ--ಇಗೋ, ಪ್ರವಾದಿಗಳ ವಾಕ್ಯಗಳು ಒಂದೇ ಬಾಯಿಂದ ಅರಸನಿಗೆ ಒಳ್ಳೇದನ್ನೇ ಪ್ರಕಟಿಸುತ್ತವೆ; ನಿನ್ನ ವಾಕ್ಯವು ಅವರಲ್ಲಿರುವ ಒಬ್ಬನ ವಾಕ್ಯದ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು. |
14. | ಅದಕ್ಕೆ ವಿಾಕಾಯೆಹು--ಕರ್ತನ ಜೀವ ದಾಣೆ, ಕರ್ತನು ನನಗೆ ಏನು ಹೇಳುವನೋ ಅದನ್ನು ಮಾತನಾಡುವೆನು ಅಂದನು. ಹೀಗೆ ಅವನು ಅರಸನ ಬಳಿಗೆ ಬಂದನು. |
15. | ಅರಸನು ಅವನಿಗೆ--ವಿಾಕಾಯೆ ಹುವೇ, ನಾವು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆಹೋಗಬಹುದೋ ಹೋಗಬಾ ರದೋ ಅಂದನು. ಇವನು ಪ್ರತ್ಯುತ್ತರವಾಗಿ--ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು. |
16. | ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು ಅಂದನು. |
17. | ಅದಕ್ಕ ವನು ಕಾಯುವವನಿಲ್ಲದ ಕುರಿಗಳ ಹಾಗೆಯೇ ಬೆಟ್ಟ ಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲನ್ನು ನೋಡಿದೆನು. ಆಗ ಕರ್ತನು--ಇವರಿಗೆ ಯಜಮಾ ನನು ಇಲ್ಲದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂತಿರಿಗಿ ಹೋಗಲಿ ಅಂದನು. |
18. | ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು. |
19. | ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು. |
20. | ಆಗ ಕರ್ತನು--ಅಹಾಬನು ಹೋಗಿ ಗಿಲ್ಯಾದಿನ ರಾಮೋ ತಿನ ಬಳಿಯಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು. |
21. | ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮವು ಹೊರಟು ಬಂದು ಕರ್ತನ ಮುಂದೆ ನಿಂತು--ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು. |
22. | ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು. |
23. | ಅದಕ್ಕೆ ಆತನು--ನೀನು ಅವ ನನ್ನು ಮರುಳುಗೊಳಿಸುವಿ ಮತ್ತು ಜಯಿಸುವಿ. ನೀನು ಹೋಗಿ ಹಾಗೆ ಮಾಡು ಅಂದನು. ಆದದರಿಂದ ಇಗೋ, ಈಗ ಕರ್ತನು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ; ಇದ ಲ್ಲದೆ ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು. |
24. | ಆಗ ಕೆನಾನನ ಮಗನಾದ ಚಿದ್ಕೀಯನು ಸವಿಾ ಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು--ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಹೋಯಿತು ಅಂದನು. |
25. | ಅದಕ್ಕೆ ವಿಾಕಾಯೆಹುವುಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿ ಯೊಳಗೆ ನೀನು ಹೋಗುವ ದಿವಸದಲ್ಲಿ ನೋಡುವಿ ಅಂದನು. |
26. | ಆಗ ಇಸ್ರಾಯೇಲಿನ ಅರಸನು ಹೇಳಿದ್ದೇ ನಂದರೆ -- ವಿಾಕಾಯೆಹುನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗ ನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ತಕ್ಕೊಂಡುಹೋಗಿ |
27. | ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು. |
28. | ಅದಕ್ಕೆ ವಿಾಕಾಯೆಹುವು ನೀನು ಸಮಾ ಧಾನದಿಂದ ತಿರಿಗಿ ನಿಜವಾಗಿ ಬಂದರೆ ಕರ್ತನು ನನ್ನ ಮುಖಾಂತರ ಮಾತನಾಡಿದ್ದಿಲ್ಲವೆಂದು ಜನರೇ, ನೀವೆ ಲ್ಲರೂ ಕೇಳಿರಿ ಅಂದನು. |
29. | ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂ ದದ ಅರಸನಾದ ಯೆಹೋಷಾಫಾಟನೂ ಗಿಲ್ಯಾದಿನ ರಾಮೋತಿಗೆ ಹೋದರು. |
30. | ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆಮಾಡಿ ಯುದ್ಧದೊಳಗೆ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆ ಮಾಡಿ ಯುದ್ಧಕ್ಕೆ ಹೋದನು. |
31. | ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೈರಡು ಮಂದಿ ಪ್ರಧಾನರಿಗೆ--ನೀವು ಹಿರಿಕಿರಿ ಯರ ಸಂಗಡ ಯುದ್ಧ ಮಾಡದೆ ಇಸ್ರಾಯೇಲಿನ ಅರಸನ ಸಂಗಡಲೇ ಯುದ್ಧಮಾಡಿರಿ ಎಂದು ಆಜ್ಞಾಪಿ ಸಿದನು. |
32. | ಆದದರಿಂದ ರಥಾಧಿಪತಿಗಳು ಯೆಹೋ ಷಾಫಾಟನನ್ನು ನೋಡಿದಾಗ--ನಿಶ್ಚಯವಾಗಿ ಇವನು ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ತಿರುಗಿಕೊಂಡರು; ಆಗ ಯೆಹೋಷಾಫಾಟನು ಕೂಗಿಕೊಂಡನು. |
33. | ಆಗ ಅವನು ಇಸ್ರಾಯೇಲಿನ ಅರಸನಲ್ಲವೆಂದು ರಥಾಧಿಪತಿ ಗಳು ನೋಡಿದಾಗ ಅವನನ್ನು ಬಿಟ್ಟು ಓರೆಯಾಗಿ ಹೋದರು. |
34. | ಆದರೆ ಒಬ್ಬ ಮನುಷ್ಯನು ಗುರಿಯಿಡದೆ ಬಿಲ್ಲಿಗೆ ಬಾಣವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದುಗಳಲ್ಲಿ ಹೊಡೆದನು; ಆದದರಿಂದ ಅವನು ತನ್ನ ರಥನಡಿಸುವವನಿಗೆ--ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇ ಕಡೆಗೆ ತಕ್ಕೊಂಡು ಹೋಗು. ಯಾಕಂದರೆ ನಾನು ಗಾಯಗೊಂಡಿದ್ದೇನೆ ಅಂದನು. |
35. | ಆ ದಿವಸ ಯುದ್ಧವು ಬಲವಾದದರಿಂದ ಅರಸನು ಅರಾಮ್ಯರಿಗೆದುರಾಗಿ ರಥದಲ್ಲಿಯೇ ಇದ್ದು ಸಾಯಂಕಾಲದಲ್ಲಿ ಸತ್ತುಹೋದನು; ಆದರೆ ಆ ಗಾಯದ ರಕ್ತವು ರಥದ ಮಧ್ಯದಲ್ಲಿ ಹರಿಯಿತು. |
36. | ಸೂರ್ಯ ಮುಣುಗುವಾಗ ಪ್ರತಿ ಮನುಷ್ಯನು ತನ್ನ ತನ್ನ ಪಟ್ಟಣಕ್ಕೂ ಪ್ರತಿ ಮನುಷ್ಯನು ತನ್ನ ತನ್ನ ದೇಶಕ್ಕೂ ಹೋಗಲಿ ಎಂದು ದಂಡಿನಲ್ಲಿ ಪ್ರಕಟ ಮಾಡಲ್ಪಟ್ಟಿತು. |
37. | ಹಾಗೆಯೇ ಅರಸನು ಸತ್ತುಹೋಗಿ ಸಮಾರ್ಯಕ್ಕೆ ತರಲ್ಪಟ್ಟಾಗ ಅವರು ಅರಸನನ್ನು ಸಮಾ ರ್ಯದಲ್ಲಿ ಹೂಣಿಟ್ಟರು. |
38. | ಆ ರಥವು ಸಮಾರ್ಯದ ಕೆರೆಯಲ್ಲಿ ತೊಳೆಯಲ್ಪಡುವಾಗ ಕರ್ತನು ಹೇಳಿದ ವಾಕ್ಯದ ಪ್ರಕಾರವೇ ನಾಯಿಗಳು ಅವನ ರಕ್ತವನ್ನು ನೆಕ್ಕಿದವು; ಹಾಗೆಯೇ ಅವರು ಕವಚವನ್ನು ತೊಳೆದರು. |
39. | ಆದರೆ ಅಹಾಬನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ದಂತದ ಮನೆಯೂ ಎಲ್ಲಾ ಪಟ್ಟಣಗಳೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? |
40. | ಹೀಗೆಯೇ ಅಹಾಬನು ತನ್ನ ಪಿತೃಗಳ ಸಂಗಡ ಮಲಗಿದನು; ಅವನ ಮಗನಾದ ಅಹಜ್ಯನು ಅವನಿಗೆ ಬದಲಾಗಿ ಆಳಿದನು. |
41. | ಆಸನ ಮಗನಾದ ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಾದ ಅಹಾಬನ ನಾಲ್ಕನೇ ವರುಷ ದಲ್ಲಿ ಯೆಹೂದದ ಮೇಲೆ ಆಳುವದಕ್ಕೆ ಆರಂಭಿಸಿದನು. |
42. | ಯೆಹೋಷಾಫಾಟನು ಅರಸನಾಗುವಾಗ ಮೂವ ತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರುಷ ಆಳಿದನು. ಅವನ ತಾಯಿಯ ಹೆಸರು ಅಜೂಬಳು; ಅವಳು ಶಿಲ್ಹಿಯ ಮಗಳು. |
43. | ಅವನು ತನ್ನ ತಂದೆಯಾದ ಆಸನ ಎಲ್ಲಾ ಮಾರ್ಗ ಗಳಲ್ಲಿ ನಡೆದು ಅದನ್ನು ಬಿಟ್ಟು ತೊಲಗದೆ ಕರ್ತನ ಸಮ್ಮುಖದಲ್ಲಿ ಯಥಾರ್ಥವಾದದ್ದನ್ನು ಮಾಡಿದನು. ಆದರೂ ಉನ್ನತ ಸ್ಥಳಗಳನ್ನು ತೆಗೆದುಹಾಕಲಿಲ್ಲ; ಜನರು ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು. |
44. | ಯೆಹೋಷಾಫಾಟನು ಇಸ್ರಾ ಯೇಲಿನ ಅರಸನ ಸಂಗಡ ಸಮಾಧಾನ ಮಾಡಿ ಕೊಂಡನು. |
45. | ಯೆಹೋಷಾಫಾಟನ ಇತರ ಕ್ರಿಯೆ ಗಳೂ ಅವನು ತೋರಿಸಿದ ಪರಾಕ್ರಮವೂ ಅವನು ಯುದ್ಧ ಮಾಡಿದ ವಿಧವೂ ಯೆಹೂದದ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? |
46. | ಅವನ ತಂದೆಯಾದ ಆಸನ ದಿವಸಗಳಲ್ಲಿ ಉಳಿದ ಪುರುಷಗಾಮಿಗಳನ್ನು ಅವನು ದೇಶದಿಂದ ತೆಗೆದು ಹಾಕಿದನು. |
47. | ಆ ಕಾಲದಲ್ಲಿ ಎದೋಮಿನೊಳಗೆ ಅರಸ ನಿರಲಿಲ್ಲ; ಅಧಿಪತಿಯು ಆಳುತ್ತಿದ್ದನು. |
48. | ಯೆಹೋ ಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗು ವದಕ್ಕೆ ತಾರ್ಷೀಷಿನ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ; ಯಾಕಂದರೆ ಆ ಹಡಗು ಗಳು ಎಚ್ಯೋನ್ಗೆಬೆರಿನ ಬಳಿಯಲ್ಲಿ ಒಡೆದುಹೋದವು. |
49. | ಆಗ ಅಹಾಬನ ಮಗನಾದ ಅಹಜ್ಯನು ಯೆಹೋ ಷಾಫಾಟನಿಗೆ--ನನ್ನ ಸೇವಕರು ನಿನ್ನ ಸೇವಕರ ಸಂಗಡ ಹಡಗುಗಳಲ್ಲಿ ಹೋಗಲಿ ಅಂದನು; ಆದರೆ ಯೆಹೋ ಷಾಫಾಟನು ಸಮ್ಮತಿಸಲಿಲ್ಲ. |
50. | ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣ ಲ್ಪಟ್ಟನು. ಆಗ ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು. |
51. | ಅಹಾಬನ ಮಗನಾದ ಅಹಜ್ಯನು ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೇಳನೆ ವರುಷ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಲಾ ರಂಭಿಸಿ ಎರಡು ವರುಷ ಆಳಿದನು. ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನುಮಾಡಿ |
52. | ತನ್ನ ತಂದೆಯ ಮಾರ್ಗದಲ್ಲಿಯೂ ತನ್ನ ತಾಯಿಯ ಮಾರ್ಗ ದಲ್ಲಿಯೂ ಇಸ್ರಾಯೆಲ್ಯರನ್ನು ಪಾಪಮಾಡಲು ಪ್ರೇರೇ ಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನಮಾರ್ಗದಲ್ಲಿಯೂ ನಡೆದನು. |
53. | ಅವನು ಬಾಳನನ್ನು ಸೇವಿಸಿ ಅದಕ್ಕೆ ಅಡ್ಡಬಿದ್ದು ತನ್ನ ತಂದೆಯು ಮಾಡಿದ ಎಲ್ಲಾದರ ಪ್ರಕಾರವೇ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದನು. |
← 1Kings (22/22) |