1Peter (1/5) → |
1. | ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೊನ್ಯ ಇವುಗಳಲ್ಲೆಲ್ಲಾ ಚದರಿರುವ ಪರದೇಶಸ್ಥರಿಗೆ |
2. | ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ. |
3. | ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ |
4. | ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ. |
5. | ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ. |
6. | ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ. |
7. | ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು. |
8. | ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ. |
9. | ನಿಮ್ಮ ನಂಬಿಕೆಯ ಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿದ್ದೀರಿ. |
10. | ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು. |
11. | ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು. |
12. | ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು. |
13. | ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ. |
14. | ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ |
15. | ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾದ ಮಕ್ಕಳಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರ್ರಿ. |
16. | ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧ ರಾಗಿರಬೇಕು ಎಂದು ಬರೆದದೆಯಲ್ಲಾ. |
17. | ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ. |
18. | ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ; |
19. | ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ. |
20. | ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು. |
21. | ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ. |
22. | ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ. |
23. | ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು. |
24. | ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು; |
25. | ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ. |
1Peter (1/5) → |