← 1Samuel (5/31) → |
1. | ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು. |
2. | ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಬಂದು ದಾಗೋನನ ಮನೆಯಲ್ಲಿ ದಾಗೋನನ ಬಳಿಯಲ್ಲಿಟ್ಟರು. |
3. | ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು. |
4. | ಆಗ ಅವರು ದಾಗೋನನನ್ನು ತೆಗೆದು ಅದನ್ನು ಅದರ ಸ್ಥಳದಲ್ಲಿ ತಿರಿಗಿ ಇಟ್ಟರು. ಅವರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು; ದಾಗೋನನ ತಲೆಯೂ ಅದರ ಎರಡು ಕೈಗಳೂ ಹೊಸ್ತಿಲ ಮೇಲೆ ಕಡಿಯಲ್ಪಟ್ಟು ಬಿದ್ದಿದ್ದವು; ಮುಂಡ ಮಾತ್ರ ಅದಕ್ಕೆ ಉಳಿದಿತ್ತು. |
5. | ಆದದರಿಂದ ಈ ದಿನದ ವರೆಗೂ ದಾಗೋನನ ಯಾಜಕರೂ ದಾಗೋನನ ಮನೆಯಲ್ಲಿ ಪ್ರವೇಶಿಸುವ ವರೆಲ್ಲರೂ ಅಷ್ಡೋದಿನಲ್ಲಿರುವ ದಾಗೋನನ ಹೊಸ್ತಿ ಲನ್ನು ತುಳಿಯುವದಿಲ್ಲ. |
6. | ಆದರೆ ಕರ್ತನ ಕೈ ಅಷ್ಡೋದಿನವರ ಮೇಲೆ ಭಾರ ವಾಗಿದ್ದು ಅವರನ್ನು ನಾಶಮಾಡಿ ಅಷ್ಡೋದನ್ನೂ ಅದರ ಮೇರೆಗಳನ್ನೂ ಗಡ್ಡೆರೋಗದಿಂದ ಹೊಡೆದನು. |
7. | ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ನೋಡಿ--ಇಸ್ರಾಯೇಲ್ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಯಾಕಂದರೆ ಆತನ ಕೈ ನಮ್ಮ ಮೇಲೆಯೂ ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ ಅಂದರು. |
8. | ಅವರು ಫಿಲಿಷ್ಟಿ ಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೇಕಳುಹಿಸಿ ಅವರಿಗೆ--ಇಸ್ರಾಯೇಲ್ ದೇವರ ಮಂಜೂಷವನ್ನು ಏನು ಮಾಡೋಣ ಅಂದರು. ಅದಕ್ಕವರು--ಇಸ್ರಾ ಯೇಲ್ ದೇವರ ಮಂಜೂಷವು ಗತ್ ಊರಿಗೆ ಒಯ್ಯಲ್ಪಡಲಿ ಅಂದರು. ಅವರು ಇಸ್ರಾಯೇಲ್ ದೇವರ ಮಂಜೂಷವನ್ನು ಗತ್ಗೆ ಒಯ್ದರು. |
9. | ಆದರೆ ಅವರು ಅದನ್ನು ಸುತ್ತಿ ತಂದ ತರುವಾಯ ಕರ್ತನ ಕೈ ಆ ಪಟ್ಟಣದ ಮೇಲೆ ಬಂದು ಮಹಾ ದೊಡ್ಡನಾಶ ಮಾಡಿತು. ಇದಲ್ಲದೆ ಕರ್ತನು ಚಿಕ್ಕವರಿಂದ ಹಿರಿಯರ ವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದನು; ಅವರಿಗೆ ಗಡ್ಡೆರೋಗ ಹುಟ್ಟಿತು. |
10. | ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ ಆದದ್ದೇನಂದರೆ, ಎಕ್ರೋನ್ಯರು ನಮ್ಮನ್ನೂ ನಮ್ಮ ಜನರನ್ನೂ ಕೊಂದು ಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರೆಂದು ಕೂಗಿ ಹೇಳಿದರು. |
11. | ಆಗ ಆ ಪಟ್ಟಣದಲ್ಲೆಲ್ಲಾ ಮರಣಕರವಾದ ನಾಶನ ಉಂಟಾಗಿ ದೇವರ ಕೈ ಅಲ್ಲಿ ಮಹಾಭಾರವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟು ಗೂಡಿಸಿ ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ ನಮ್ಮ ಜನರನ್ನೂ ಕೊಂದುಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರಿಗಿ ಹೋಗುವಂತೆ ಕಳುಹಿಸಿಬಿಡಿರಿ ಅಂದರು. |
12. | ಉಳಿದ ಮನುಷ್ಯರು ಸತ್ತುಹೋಗದೆ ಗಡ್ಡೆವ್ಯಾಧಿಯಿಂದ ಬಾಧಿಸಲ್ಪಟ್ಟರು; ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು. |
← 1Samuel (5/31) → |