← 1Samuel (8/31) → |
1. | ಸಮುವೇಲನು ವೃದ್ಧನಾದಾಗ ಆಗಿದ್ದೇನಂದರೆ ತನ್ನ ಕುಮಾರರನ್ನು ಇಸ್ರಾ ಯೇಲಿಗೆ ನ್ಯಾಯಾಧಿಪತಿಗಳಾಗಿರುವದಕ್ಕೆ ಇಟ್ಟನು. |
2. | ಅವನ ಚೊಚ್ಚಲ ಮಗನ ಹೆಸರು ಯೋವೇಲ್, ಎರಡನೇ ಮಗನ ಹೆಸರು ಅಬೀಯ; ಇವರು ಬೇರ್ಷೆಬದಲ್ಲಿ ನ್ಯಾಯಾಧಿಪತಿಗಳಾಗಿದ್ದರು. |
3. | ಆದರೆ ಅವನ ಮಕ್ಕಳು ಅವನ ಮಾರ್ಗದಲ್ಲಿ ನಡೆಯದೆ ಲೋಭಕ್ಕಾಗಿ ಮಾರ್ಗತಪ್ಪಿ ಲಂಚವನ್ನು ತಕ್ಕೊಂಡು ನ್ಯಾಯವನ್ನು ತಪ್ಪಿಸಿದರು. |
4. | ಆಗ ಇಸ್ರಾಯೇಲ್ ಹಿರಿಯರೆಲ್ಲರೂ ಕೂಡಿಕೊಂಡು ರಾಮದಲ್ಲಿರುವ ಸಮುವೇಲನ ಬಳಿಗೆ ಬಂದು |
5. | ಅವನಿಗೆ-- ಇಗೋ, ನೀನು ವೃದ್ಧನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವದಿಲ್ಲ. ಈಗ ನ್ಯಾಯತೀರಿಸು ವದಕ್ಕೆ ಸಮಸ್ತ ಜನಾಂಗಗಳ ಹಾಗೆ ನಮಗೆ ಒಬ್ಬ ಅರಸನನ್ನು ನೇಮಿಸು ಅಂದರು. |
6. | ಆದರೆ--ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು ಎಂದು ಅವರು ಹೇಳಿದ ವಾರ್ತೆಯು ಸಮುವೇಲನಿಗೆ ಮನ ನೋಯಿಸುವಂತದ್ದಾಗಿತ್ತು. ಅವನು ಕರ್ತನಿಗೆ ಪ್ರಾರ್ಥನೆ ಮಾಡಿದನು. |
7. | ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ. |
8. | ನಾನು ಅವರನ್ನು ಐಗುಪ್ತದಿಂದ ಬರ ಮಾಡಿದ ದಿನ ಮೊದಲುಗೊಂಡು ಈ ದಿನದ ವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿ ಮಾಡಿದ ಸಮಸ್ತ ಕೃತ್ಯಗಳ ಪ್ರಕಾರ ನಿನಗೂ ಮಾಡು ತ್ತಾರೆ. |
9. | ಈಗ ಅವರ ಮಾತನ್ನು ಕೇಳು; ಆದರೆ ನೀನು ಅವರಿಗೆ ಕಟ್ಟಳೆಯನ್ನು ಕೊಟ್ಟು ಅವರನ್ನು ಆಳುವ ಅರಸನ ಅಧಿಕಾರವು ಎಂಥದ್ದೆಂಬದನ್ನು ತಿಳಿಸು ಅಂದನು. |
10. | ಆಗ ಸಮುವೇಲನು ಅರಸನನ್ನು ಕೇಳಿದ ಜನ ರಿಗೆ ಕರ್ತನ ವಾಕ್ಯಗಳನ್ನೆಲ್ಲಾ ಹೇಳಿದನು. |
11. | ನಿಮ್ಮನ್ನು ಆಳುವ ಅರಸನ ಅಧಿಕಾರ ಏನಂದರೆ--ಅವನು ನಿಮ್ಮ ಕುಮಾರರನ್ನು ತನಗೋಸ್ಕರ ತನ್ನ ರಥ ಸವಾರರಾ ಗಿಯೂ ರಾಹುತರಾಗಿಯೂ ತಕ್ಕೊಳ್ಳುವನು. |
12. | ಕೆಲ ವರು ಅವನ ರಥಗಳ ಮುಂದೆ ಓಡುವರು. ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿ ಗಳಾಗಿಯೂ ತನ್ನ ಭೂಮಿಯನ್ನು ಉಳುವವರಾ ಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ತನ್ನ ರಥದ ಸಾಮಾನು ಗಳನ್ನು ಮಾಡುವವರಾಗಿಯೂ ನೇಮಿಸುವನು. |
13. | ಇದಲ್ಲದೆ ಅವನು ನಿಮ್ಮ ಕುಮಾರ್ತೆಯರನ್ನು ತೈಲ ಗಾರ್ತಿಗಳಾಗಿಯೂ ಅಡಿಗೆ ಮಾಡುವವರಾಗಿಯೂ ರೊಟ್ಟಿಸುಡುವವರಾಗಿಯೂ ಇಟ್ಟುಕೊಳ್ಳುವನು. |
14. | ಅವನು ಉತ್ತಮವಾದ ನಿಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಇಪ್ಪೇ ತೋಪುಗಳನ್ನೂ ತೆಗೆದು ಕೊಂಡು ತನ್ನ ಸೇವಕರಿಗೆ ಕೊಡುವನು. |
15. | ನಿಮ್ಮ ಧಾನ್ಯಗಳಲ್ಲಿಯೂ ದ್ರಾಕ್ಷೇ ಫಲಗಳಲ್ಲಿಯೂ ಹತ್ತರಲ್ಲಿ ಒಂದನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಸೇವಕರಿಗೂ ಕೊಡುವನು. |
16. | ನಿಮ್ಮ ದಾಸದಾಸಿಯ ರನ್ನೂ ಉತ್ತಮ ಯೌವನಸ್ಥರನ್ನೂ ನಿಮ್ಮ ಕತ್ತೆಗಳನ್ನೂ ತಕ್ಕೊಂಡು ತನ್ನ ಕೆಲಸಕ್ಕೆ ಇಡುವನು. |
17. | ಇದಲ್ಲದೆ ಅವನು ನಿಮ್ಮ ಕುರಿಗಳಲ್ಲಿ ಹತ್ತರಲ್ಲಿ ಒಂದನ್ನು ಆದು ಕೊಳ್ಳುವನು; ನೀವು ಅವನಿಗೆ ದಾಸರಾಗುವಿರಿ. |
18. | ನೀವು ನಿಮಗೆ ಆದುಕೊಂಡ ನಿಮ್ಮ ಅರಸನ ನಿಮಿತ್ತ ಆ ದಿವಸದಲ್ಲಿ ಕೂಗುವಿರಿ; ಆದರೆ ಆ ದಿವಸದಲ್ಲಿ ಕರ್ತನು ನಿಮಗೆ ಕಿವಿಗೊಡುವದಿಲ್ಲ. |
19. | ಆದರೂ ಜನರು ಸಮುವೇಲನ ಮಾತನ್ನು ಕೇಳಲ್ಲೊಲ್ಲದೆ ಅವರು--ಹಾಗಲ್ಲ; ನಮ್ಮ ಮೇಲೆ ಅರಸನು ಇರಬೇಕು; ನಾವು ಸಕಲ ಜನಾಂಗಗಳ ಹಾಗೆ ಇರಬೇಕು; |
20. | ನಮ್ಮ ಅರಸನು ನಮಗೆ ನ್ಯಾಯತೀರಿಸುವನು; ಅವನು ನಮ್ಮ ಮುಂದೆ ಹೊರಟು ನಮ್ಮ ಯುದ್ಧಗಳನ್ನು ನಡಿಸುವನು ಅಂದರು. |
21. | ಸಮುವೇಲನು ಜನರ ಮಾತುಗಳನ್ನೆಲ್ಲಾ ಕೇಳಿ ಅವುಗಳನ್ನು ಕರ್ತನಿಗೆ ಹೇಳಿದನು. |
22. | ಆದರೆ ಕರ್ತನು ಸಮುವೇಲನಿಗೆ--ಅವರ ಮಾತನ್ನು ಕೇಳಿ ಅವರಿಗೆ ಅರಸನನ್ನು ನೇಮಿಸು ಅಂದನು. ಆಗ ಸಮುವೇಲನು ಇಸ್ರಾಯೇಲ್ ಜನರಿಗೆ--ನಿಮ್ಮ ನಿಮ್ಮ ಪಟ್ಟಣಗಳಿಗೆ ಹೋಗಿರಿ ಅಂದನು. |
← 1Samuel (8/31) → |