← 1Thessalonians (5/5) |
1. | ಸಹೋದರರೇ, ಈ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯು ವದು ಅವಶ್ಯವಿಲ್ಲ. |
2. | ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ. |
3. | ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು. |
4. | ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ. |
5. | ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆ ಯವರೂ ಅಲ್ಲ. |
6. | ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ. |
7. | ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮ ಲೇರುತ್ತಾರೆ. |
8. | ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ. |
9. | ಯಾಕಂದರೆ ದೇವರು ನಮ್ಮನ್ನು ಕೋಪಕ್ಕೆ ಗುರಿಯಾಗುವಂತೆ ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದುವಂತೆ ನೇಮಿಸಿದನು. |
10. | ನಾವು ಎಚ್ಚರವಾಗಿ ದ್ದರೂ ಸರಿಯೇ, ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು. |
11. | ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿ ಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ. |
12. | ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು ನಿಮಗೆ ಬುದ್ಧಿಹೇಳುತ್ತಾರೋ ಅವರನ್ನು ಲಕ್ಷಿಸಿರಿ. |
13. | ಇದಲ್ಲದೆ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿ ಯಿಂದ ಬಹಳವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ; ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರ್ರಿ. |
14. | ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ. |
15. | ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿ ಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತ ವನ್ನು ಮಾಡುವವರಾಗಿರ್ರಿ. |
16. | ಯಾವಾಗಲೂ ಸಂತೋಷಿಸಿರಿ; |
17. | ಎಡೆಬಿಡದೆ ಪ್ರಾರ್ಥನೆ ಮಾಡಿರಿ. |
18. | ಎಲ್ಲಾದರಲ್ಲಿಯೂ ಕೃತಜ್ಞತಾ ಸ್ತುತಿ ಮಾಡಿರಿ; ಯಾಕಂದರೆ ಇದೇ ನಿಮ್ಮ ವಿಷಯ ವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ. |
19. | ಆತ್ಮನನ್ನು ನಂದಿಸಬೇಡಿರಿ; 20ಪ್ರವಾದನೆಗಳನ್ನು ಹೀನೈಸಬೇಡಿರಿ; |
20. | ಪ್ರವಾದನೆಗಳನ್ನು ಹೀನೈಸಬೇಡಿರಿ; |
21. | ಆದರೆ ಎಲ್ಲವನ್ನು ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ. |
22. | ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ. |
23. | ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ. |
24. | ನಿಮ್ಮನ್ನು ಕರೆಯು ವಾತನು ನಂಬಿಗಸ್ತನು. ಆತನು ತನ್ನ ಕಾರ್ಯವನ್ನು ಸಾಧಿಸುವನು. |
25. | ಸಹೋದರರೇ, ನಮಗೋಸ್ಕರ ಪ್ರಾರ್ಥನೆ ಮಾಡಿರಿ. |
26. | ಪವಿತ್ರವಾದ ಮುದ್ದಿಟ್ಟು ಸಹೋದರ ರೆಲ್ಲರನ್ನೂ ವಂದಿಸಿರಿ. |
27. | ಈ ಪತ್ರಿಕೆಯನ್ನು ಪರಿಶುದ್ಧ ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನಿಂದ ಆಜ್ಞಾಪಿಸುತ್ತೇನೆ. |
28. | ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್. |
← 1Thessalonians (5/5) |