← 1Timothy (3/6) → |
1. | ಸಭಾಧ್ಯಕ್ಷನ ಉದ್ಯೋಗವನ್ನು ಪಡಕೊಳ್ಳ ಬೇಕೆಂದು ಆಶಿಸುವವನು ಒಳ್ಳೇ ಕೆಲಸ ವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ಸತ್ಯವಾದ ದ್ದಾಗಿದೆ. |
2. | ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು. |
3. | ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು. |
4. | ಪೂರ್ಣ ಗೌರವದಿಂದ ತನ್ನ ಮಕ್ಕಳನ್ನೂ ಅಧೀನದಲ್ಲಿ ಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವ ನಾಗಿರಬೇಕು. |
5. | (ಸ್ವಂತ ಮನೆಯವರನ್ನು ಆಳುವದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಮರಿ ಸುವನು)? |
6. | ಅವನು ಹೊಸಬನಾಗಿರಬಾರದು; ಅಂಥ ವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಒಳಗಾಗುವನು. |
7. | ಇದಲ್ಲದೆ ಅವನು ನಿಂದೆಗೆ ಗುರಿ ಯಾಗದಂತೆಯೂ ಸೈತಾನನ ಉರ್ಲಿಗೆ ಸಿಕ್ಕಿಬೀಳ ದಂತೆಯೂ ಹೊರಗಿನವರಿಂದ ಒಳ್ಳೇಸಾಕ್ಷಿಯನ್ನು ಹೊಂದಿದವನಾಗಿರತಕ್ಕದ್ದು. |
8. | ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳ ವರಾಗಿರಬೇಕು; ಅವರು ಎರಡು ನಾಲಿಗೆಯುಳ್ಳವರಾಗಿ ರಬಾರದು. ಹೆಚ್ಚು ದ್ರಾಕ್ಷಾರಸ ಕುಡಿಯುವವರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ |
9. | ನಂಬಿಕೆಯ ಮರ್ಮವನ್ನು ಶುದ್ಧ ಮನಸ್ಸಾಕ್ಷಿಯಲ್ಲಿ ಹಿಡಿದುಕೊಂಡವರಾಗಿರಬೇಕು. |
10. | ಇದಲ್ಲದೆ ಅವರು ಸಹ ಮೊದಲು ಪರೀಕ್ಷಿಸಲ್ಪಡಬೇಕು; ತರುವಾಯ ಅವರು ದೋಷರಹಿತರಾಗಿ ಕಂಡುಬಂದರೆ ಸಭಾ ಸೇವಕರ ಉದ್ಯೋಗವನ್ನು ನಡಿಸಲಿ. |
11. | ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು; ಚಾಡಿ ಹೇಳದವರೂ ಸ್ವಸ್ಥಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು. |
12. | ಸಭಾ ಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು. |
13. | ಸಭಾಸೇವಕರಾಗಿ ಚೆನ್ನಾಗಿ ಕೆಲಸಮಾಡಿದವರು ತಮಗೆ ಒಳ್ಳೇ ಪದವಿಯನ್ನೂ ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹು ಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ. |
14. | ಬೇಗನೆ ನಿನ್ನ ಬಳಿಗೆ ಬರುವನೆಂಬ ನಿರೀಕ್ಷೆಯಿಂದ ನಾನು ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ. |
15. | ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು. |
16. | ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ |
← 1Timothy (3/6) → |