← 2Chronicles (3/36) → |
1. | ಆಗ ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ ಕರ್ತನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ದಾವೀದನು ಸಿದ್ಧಮಾಡಿದ ಯೆಬೂಸಿ ಯನಾದ ಒರ್ನಾನನ ಕಣದಲ್ಲಿ ಕರ್ತನ ಆಲಯವನ್ನು ಕಟ್ಟಲು ಪ್ರಾರಂಭಿಸಿದನು. |
2. | ಅವನು ತನ್ನ ಆಳಿಕೆಯ ನಾಲ್ಕನೇ ವರುಷದ ಎರಡನೇ ತಿಂಗಳಿನ ಎರಡನೇ ದಿವಸದಲ್ಲಿ ಕಟ್ಟುವದಕ್ಕೆ ಆರಂಭಿಸಿದನು. |
3. | ದೇವರ ಆಲಯವನ್ನು ಕಟ್ಟುವದಕ್ಕೆ ಸೊಲೊಮೋನನು ಹಾಕಿ ಸಿದ ಅಸ್ತಿವಾರಗಳು ಏನಂದರೆ ಮೊದಲಿನ ಅಳತೆಯ ಪ್ರಕಾರವಾಗಿ ಅದರ ಉದ್ದ ಅರವತ್ತು ಮೊಳವು ಅಗಲ ಇಪ್ಪತ್ತು ಮೊಳವು. |
4. | ಮುಂದೆ ಇರುವ ದ್ವಾರಾಂಗಳ ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು. ಮತ್ತು ನೂರ ಇಪ್ಪತ್ತು ಮೊಳ ಎತ್ತರವಾಗಿತ್ತು. ಅವನು ಅದನ್ನು ಒಳಗಡೆ ಶುದ್ಧ ಬಂಗಾರದಿಂದ ಹೊದಿಗಿಸಿದನು. |
5. | ಅವನು ದೊಡ್ಡ ಆಲಯವನ್ನು ತುರಾಯಿ ಮರಗಳಿಂದ ಮುಚ್ಚಿ ಅದನ್ನು ಶುದ್ಧ ಬಂಗಾರದಿಂದ ಹೊದಿಸಿ ಅದರ ಮೇಲೆ ಖರ್ಜೂರದ ಗಿಡಗಳನ್ನೂ ಸರಪಣಿಗಳನ್ನೂ ಕೆತ್ತಿಸಿ ದನು. |
6. | ಸೌಂದರ್ಯದ ನಿಮಿತ್ತವಾಗಿ ಅಮೂಲ್ಯ ವಾದ ಕಲ್ಲುಗಳಿಂದ ಆ ಆಲಯವನ್ನು ಮುಚ್ಚಿದನು. ಅದರ ಬಂಗಾರವು ಪರ್ವಯಿಮಿನ ಬಂಗಾರವು. |
7. | ಆಲಯದ ತೊಲೆಗಳನ್ನೂ ಸ್ತಂಭಗಳನ್ನೂ ಗೋಡೆ ಗಳನ್ನೂ ಬಾಗಲುಗಳನ್ನೂ ಅವನು ಬಂಗಾರದಿಂದ ಹೊದಿಸಿ ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನ್ನು ಕೆತ್ತಿಸಿದನು. |
8. | ಇದಲ್ಲದೆ ಅತಿಪರಿಶುದ್ಧವಾದ ಆಲಯವನ್ನು ಮಾಡಿದನು; ಅದರ ಉದ್ದವು ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ; ಅಗಲ ಇಪ್ಪತ್ತು ಮೊಳವಾಗಿ ಇತ್ತು. ಅವನು ಅದನ್ನು ಆರು ನೂರು ತಲಾಂತುಗಳ ಶುದ್ಧ ಬಂಗಾರದಿಂದ ಹೊದಿಸಿದನು. |
9. | ಅದರ ಮೊಳೆ ಗಳು ಐವತ್ತು ಶೇಕೆಲುಗಳ ತೂಕ ಬಂಗಾರದ್ದಾಗಿದ್ದವು. ಹಾಗೆಯೇ ಮೇಲಿನ ಕೊಠಡಿಗಳನ್ನು ಬಂಗಾರದಿಂದ ಹೊದಿಸಿದನು. |
10. | ಅತಿಪರಿಶುದ್ಧವಾದ ಆಲಯದಲ್ಲಿ ವಿಚಿತ್ರ ಕೆಲಸವಾದ ಎರಡು ಕೆರೂಬಿಗಳ ಪ್ರತಿಮೆ ಗಳನ್ನು ಮಾಡಿಸಿ ಬಂಗಾರದಿಂದ ಹೊದಿಸಿದನು. |
11. | ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಉದ್ದವಾಗಿ ದ್ದವು. ಒಂದು ರೆಕ್ಕೆಯು ಐದು ಮೊಳವಾಗಿದ್ದು ಆಲ ಯದ ಗೋಡೆಯ ವರೆಗೆ ಮುಟ್ಟಿತ್ತು; ಮತ್ತೊಂದು ರೆಕ್ಕೆ ಐದು ಮೊಳವಾಗಿದ್ದು ಇನ್ನೊಂದು ಕೆರೂಬಿಯ ರೆಕ್ಕೆಯ ವರೆಗೂ ಮುಟ್ಟಿತ್ತು. |
12. | ಹಾಗೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಐದು ಮೊಳವಾಗಿದ್ದು ಆಲಯದ ಗೋಡೆಯ ವರೆಗೆ ಮುಟ್ಟಿತ್ತು; ಇನ್ನೊಂದು ರೆಕ್ಕೆಯು ಐದು ಮೊಳವಾಗಿದ್ದು ಬೇರೆ ಇರುವ ಕೆರೂಬಿಯ ರೆಕ್ಕೆಗೆ ಕೂಡಿ ಕೊಂಡಿತ್ತು. |
13. | ಈ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳಗಳ ವರೆಗೆ ಚಾಚಿಕೊಂಡವು; ಅವು ತಮ್ಮ ಕಾಲುಗಳ ಮೇಲೆ ನಿಂತವು; ಅವುಗಳ ಮುಖ ಗಳು ಒಳಪಾರ್ಶ್ವವಾಗಿದ್ದವು. |
14. | ತೆರೆಯನ್ನು ನೀಲ ಧೂಮ್ರ ರಕ್ತವರ್ಣಗಳಿಂದಲೂ ನಯವಾದ ನಾರಿನ ವಸ್ತ್ರದಿಂದಲೂ ಮಾಡಿಸಿ ಅದರಲ್ಲಿ ಕೆರೂಬಿಗಳನ್ನು ಮಾಡಿಸಿದನು. |
15. | ಇದಲ್ಲದೆ ಅವನು ಆಲಯದ ಮುಂದೆ ಮೂವ ತ್ತೈದು ಮೊಳ ಉದ್ದವಾದ ಎರಡು ಸ್ತಂಭಗಳನ್ನು ಮಾಡಿಸಿದನು; ಒಂದೊಂದರ ತುದಿಯ ಮೇಲೆ ಐದು ಮೊಳ ಉದ್ದ ಬೋದಿಗೆಯನ್ನು ಇಟ್ಟನು. |
16. | ಅವನು ದೈವೋಕ್ತಿಯ ಸ್ಥಾನದಲ್ಲಿರುವ ಹಾಗೆ ಸರಪಣಿಗಳನ್ನು ಮಾಡಿ ಸ್ತಂಭಗಳ ತುದಿಗಳ ಮೇಲೆ ಇಟ್ಟು ನೂರು ದಾಳಿಂಬರ ಹಣ್ಣುಗಳನ್ನು ಮಾಡಿ ಸರಪಣಿಗಳ ಮೇಲೆ ಇರಿಸಿದನು. |
17. | ಮಂದಿರದ ಮುಂದೆ ಆ ಸ್ತಂಭಗಳಲ್ಲಿ ಒಂದನ್ನು ಬಲಪಾರ್ಶ್ವದಲ್ಲಿಯೂ ಒಂದನ್ನು ಎಡ ಪಾರ್ಶ್ವದಲ್ಲಿಯೂ ನಿಲ್ಲಿಸಿದನು; ಬಲಪಾರ್ಶ್ವದಲ್ಲಿ ಇದ್ದ ಸ್ತಂಭಕ್ಕೆ ಯಾಕೀನ್ ಎಂದೂ ಎಡಪಾರ್ಶ್ವದಲ್ಲಿದ್ದ ಸ್ತಂಭಕ್ಕೆ ಬೋವಜ್ ಎಂದೂ ಹೆಸರಿಟ್ಟನು. |
← 2Chronicles (3/36) → |