← 2Corinthians (3/13) → |
1. | ನಮ್ಮನ್ನು ನಾವೇ ತಿರಿಗಿ ಹೊಗಳಿಕೊಳ್ಳು ವದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡಕೊಳ್ಳ ಬೇಕೋ? |
2. | ನಮ್ಮನ್ನು ನಾವೇ ತಿರಿಗಿ ಹೊಗಳಿಕೊಳ್ಳು ವದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡಕೊಳ್ಳ ಬೇಕೋ? |
3. | ನೀವು ಕ್ರಿಸ್ತನು ನಮ್ಮ ಕೈಯಿಂದ ಬರೆಯಿಸಿ ಕೊಟ್ಟ ಪತ್ರಿಕೆಯಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಆದರೆ ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಹಲಿಗೆಗಳ ಮೇಲೆಯಲ್ಲ, ಮನುಷ್ಯನ ಹೃದಯವೆಂಬ ಹಲಿಗೆಗಳ ಮೇಲೆ ಬರೆದದ್ದು. |
4. | ಇಂಥ ಭರವಸವು ಕ್ರಿಸ್ತನ ಮೂಲಕವೇ ದೇವರ ಮುಂದೆ ನಮಗುಂಟು. |
5. | ನಮ್ಮಿಂದಲೇ ಏನಾದರೂ ಉಂಟಾಯಿ ತೆಂದು ಆಲೋಚಿಸಿಕೊಳ್ಳುವದಕ್ಕೆ ನಮ್ಮಷ್ಟಕ್ಕೆ ನಾವೇ ಸಮರ್ಥರೆಂತಲ್ಲ; ನಮಗಿರುವ ಸಾಮರ್ಥ್ಯವು ದೇವರಿಂದಲೇ ಬಂದದ್ದು; |
6. | ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ. |
7. | ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು. |
8. | ಹೀಗಿದ್ದ ಮೇಲೆ ಆತ್ಮ ಸಂಬಂಧವಾದ ಸೇವೆಯು ಎಷ್ಟೋ ಹೆಚ್ಚಾಗಿ ಪ್ರಭಾವದಿಂದಿರುವದಲ್ಲವೇ? |
9. | ಅಪರಾಧ ನಿರ್ಣಯದ ಸೇವೆಯು ಪ್ರಭಾವದಿಂದಿರುವದಾದರೆ ನೀತಿಯ ಸೇವೆಯು ಎಷ್ಟೋ ಅಧಿಕವಾದ ಪ್ರಭಾವವುಳ್ಳದ್ದಾಗಿರಬೇಕು. |
10. | ಈಗ ಅತ್ಯಧಿಕವಾದ ಪ್ರಭಾವವುಳ್ಳದ್ದು ಬಂದದ್ದರಿಂದ ಪ್ರಭಾವವಾಗಿದ್ದದ್ದು ಈ ವಿಷಯದಲ್ಲಿ ಪ್ರಭಾವ ವಿಲ್ಲದ್ದಾಯಿತು. |
11. | ಇಲ್ಲದೆ ಹೋಗುವಂಥದ್ದು ಪ್ರಭಾವ ವುಳ್ಳದ್ದಾಗಿದ್ದರೆ ಇರುವಂಥದ್ದು ಬಹು ಹೆಚ್ಚಾಗಿ ಪ್ರಭಾವವುಳ್ಳದ್ದಾಗಿರಬೇಕಲ್ಲವೇ? |
12. | ನಮಗೆ ಇಂಥ ನಿರೀಕ್ಷೆ ಇರುವಲ್ಲಿ ನಾವು ಅತಿ ಸ್ಪಷ್ಟವಾಗಿ ಮಾತನಾಡುತ್ತೇವೆ. |
13. | ಗತಿಸಿಹೋಗು ವದರ ಅಂತ್ಯವನ್ನು ಇಸ್ರಾಯೇಲ್ಯರು ದೃಷ್ಟಿಸಿ ನೋಡಲಾರದಂತೆ ತನ್ನ ಮುಖದ ಮೇಲೆ ಮುಸುಕು ಹಾಕಿಕೊಳ್ಳುವ ಮೋಶೆಯ ಹಾಗೆ ಅಲ್ಲ. |
14. | ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ. |
15. | ಆದರೆ ಈ ದಿನದವರೆಗೂ ಮೋಶೆಯ ಗ್ರಂಥಪಾರಾಯಣವು ಆಗುವಾಗೆಲ್ಲಾ ಮುಸುಕು ಅವರ ಹೃದಯದ ಮೇಲೆ ಇರುತ್ತದೆ. |
16. | ಆದಾಗ್ಯೂ ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವದು. |
17. | ಕರ್ತನು ಆ ಆತ್ಮನೇ ಆಗಿದ್ದಾನೆ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು. |
18. | ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ. |
← 2Corinthians (3/13) → |