← 2Corinthians (5/13) → |
1. | ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು. |
2. | ಪರಲೋಕದಲ್ಲಿರುವ ನಮ್ಮ ಮನೆಯನ್ನು ನಾವು ಧರಿಸಿಕೊಳ್ಳಬೇಕೆಂದು ಆಸಕ್ತಿಯಿಂದ ಅಪೇಕ್ಷಿಸುವರಾಗಿ ಇದರಲ್ಲಿ ನರಳುತ್ತೇವೆ. |
3. | ಹೀಗೆ ನಾವು ಧರಿಸಿಕೊಂಡಿ ರುವದಾದರೆ ನಾವು ಬೆತ್ತಲೆಯಾಗಿ ಕಂಡುಬರುವದಿಲ್ಲ. |
4. | ಯಾಕಂದರೆ ಈ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿಹೋಗಬೇಕೆಂತಲ್ಲ; ಆದರೆ ಜೀವವು ಮರ್ತ್ಯ ವನ್ನು ನುಂಗುವಂತೆ ಅದನ್ನು ಮೇಲೆ ಧರಿಸಿ ಕೊಳ್ಳಬೇಕೆಂದು ನಾವು ಇಚ್ಚಿಸುತ್ತೇವೆ. |
5. | ಅದಕ್ಕಾಗಿಯೇ ನಮ್ಮನ್ನು ಸಿದ್ಧಮಾಡಿದ ದೇವರು ತಾನೇ ನಮಗೆ ಆತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ. |
6. | ಹೀಗಿರುವದರಿಂದ ಶರೀರದ ಮನೆಯಲ್ಲಿರುವ ವರೆಗೂ ನಾವು ಕರ್ತನಿಗೆ ದೂರವಾಗಿದ್ದೇವೆಂದು ಬಲ್ಲವರಾಗಿ ನಾವು ಯಾವಾಗಲೂ ಭರವಸವುಳ್ಳವ ರಾಗಿದ್ದೇವೆ; |
7. | (ನಾವು ನೋಡುವವರಾಗಿ ನಡೆಯದೆ ನಂಬುವವರಾಗಿಯೇ ನಡೆಯುತ್ತೇವೆ). |
8. | ನಾವು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವದು ಉತ್ತಮವೆಂದು ಆಶಿಸಿ ಭರವಸವುಳ್ಳವರಾಗಿದ್ದೇವೆ. |
9. | ಆದದರಿಂದ ನಾವು (ದೇಹವೆಂಬ ಮನೆಯಲ್ಲಿದ್ದರೂ ಸರಿಯೇ) ಅದನ್ನು ಬಿಟ್ಟಿ ದ್ದರೂ ಸರಿಯೇ, ಆತನನ್ನು ಮೆಚ್ಚಿಸುವವರಾಗಿರಬೇಕೆಂದು ನಾವು ಪ್ರಯಾಸ ಪಡುತ್ತೇವೆ. |
10. | ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು. |
11. | ನಾವು ಕರ್ತನ ಭಯವನ್ನು ಅರಿತವರಾದ ಕಾರಣ ಮನುಷ್ಯರನ್ನು ಒಡಂಬಡಿಸುತ್ತೇವೆ; ಆದರೆ ನಾವು ದೇವರಿಗೂ ನಿಮ್ಮ ಮನಸ್ಸಾಕ್ಷಿಗಳಿಗೂ ತೋರಿ ಬಂದಿದ್ದೇವೆಂದು ನಾನು ಭರವಸವುಳ್ಳವನಾಗಿದ್ದೇನೆ. |
12. | ನಾವು ನಮ್ಮನ್ನು ತಿರಿಗಿ ನಿಮ್ಮ ಮುಂದೆ ಹೊಗಳಿ ಕೊಳ್ಳುವದಿಲ್ಲ; ಆದರೆ ಯಾರು ಹೃದಯದ ವಿಷಯದಲ್ಲಿ ಹೊಗಳಿಕೊಳ್ಳದೆ ತೋರಿಕೆಯ ವಿಷಯದಲ್ಲಿ ಮಾತ್ರ ಹೊಗಳಿಕೊಳ್ಳುತ್ತಾರೋ ಅವರಿಗೆ ಪ್ರತ್ಯುತ್ತರ ಹೇಳು ವದಕ್ಕೆ ನಿಮಗೆ ಆಧಾರವಿರಬೇಕೆಂದು ನಮ್ಮ ವಿಷಯ ದಲ್ಲಿ ಹೆಚ್ಚಳಪಡುವದಕ್ಕೆ ನಿಮಗೆ |
13. | ನಮಗೆ ಬುದ್ದಿಪರವಶವಾಗಿದ್ದರೆ ಅದು ದೇವರಿಗಾಗಿ ಇರುತ್ತದೆ; ಇಲ್ಲವೆ ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ನಿಮಿತ್ತವಾಗಿ ಇರುತ್ತದೆ. |
14. | ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ. |
15. | ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ತಿರಿಗಿ ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು. |
16. | ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ, |
17. | ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು. |
18. | ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ. |
19. | ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ. |
20. | ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ. |
21. | ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು. |
← 2Corinthians (5/13) → |