← 2Corinthians (6/13) → |
1. | ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ. |
2. | (ಆತನು--ಅಂಗೀಕಾರದ ಸಮಯದಲ್ಲಿ ನಾನು ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯಮಾಡಿದೆನು ಎಂದು ಹೇಳುತ್ತಾನೆ; ಇಗೋ, ಈಗಲೇ ಆ ಅಂಗೀಕಾರದ ಸಮಯ; ಇಗೋ, ಈಗಲೇ ಆ ರಕ್ಷಣೆಯ ದಿನ). |
3. | ಸೇವೆಯು ದೂಷಿಸಲ್ಪಡದಂತೆ ಯಾವ ವಿಷಯ ದಲ್ಲಿಯೂ ನಿಂದೆಗೆ ಅವಕಾಶ ಕೊಡಬೇಡಿರಿ; |
4. | ಆದರೆ ಎಲ್ಲಾ ಸಂಗತಿಗಳಲ್ಲಿ ಹೆಚ್ಚು ತಾಳ್ಮೆಯಲ್ಲಿಯೂ ಸಂಕಟ ಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ |
5. | ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳ ಲ್ಲಿಯೂ ಪ್ರಯಾಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ದೇವರ ಸೇವಕರೆಂದು ನಮ್ಮನ್ನು ಸಮ್ಮತರಾಗ ಮಾಡಿಕೊಳ್ಳುತ್ತೇವೆ. |
6. | ಶುದ್ಧತೆಯಿಂದ, ಜ್ಞಾನದಿಂದ, ದೀರ್ಘಶಾಂತಿಯಿಂದ, ದಯೆಯಿಂದ, ಪವಿತ್ರಾತ್ಮನಿಂದ, ಕಪಟವಿಲ್ಲದ ಪ್ರೀತಿಯಿಂದ, |
7. | ಸತ್ಯವಾಕ್ಯದಿಂದ, ದೇವರ ಶಕ್ತಿಯಿಂದ, ಎಡಬಲಗೈ ಗಳಲ್ಲಿ ನೀತಿಯೆಂಬ ಆಯುಧಗಳಿಂದ, |
8. | ಮಾನ ಅವಮಾನಗಳಿಂದ, ಕೀರ್ತಿ ಅಪಕೀರ್ತಿಗಳಿಂದ, ಕೂಡಿದವರಾಗಿದ್ದು ಮೋಸಗಾರರೆನಿಸಿಕೊಂಡರೂ ಸತ್ಯವಂತರೂ |
9. | ಅಪರಿಚಿತರೆನಿಸಿಕೊಂಡರೂ ಪರಿಚಿತರೂ ಸಾಯುವವರಾಗಿ ತೋರಿದರೂ ಇಗೋ, ನಾವು ಬದುಕುವವರೂ ಆಗಿದ್ದೇವೆ; ಶಿಕ್ಷೆ ಹೊಂದುವ ವರಾಗಿದ್ದರೂ ಕೊಲ್ಲಲ್ಪಡದವರೂ |
10. | ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ. |
11. | ಓ ಕೊರಿಂಥದವರೇ, ನಮ್ಮ ಹೃದಯವು ವಿಶಾಲವಾಗಿರುವದರಿಂದ ನಾವು ನಿಮ್ಮೊಡನೆ ಧಾರಳವಾಗಿ ಮಾತನಾಡುತ್ತಾ ಇದ್ದೇವೆ; |
12. | ನಿಮ್ಮ ಮೇಲಿರುವ ನಮ್ಮ ಪ್ರೀತಿಯು ಸಂಕೋಚವಾದದ್ದಲ್ಲ, ನಮ್ಮ ವಿಷಯದಲ್ಲಿ ನಿಮ್ಮ ಪ್ರೀತಿಯೇ ಸಂಕೋಚ ವಾದದ್ದು. |
13. | ನಿಮ್ಮ ವಿಷಯದಲ್ಲಿ ನಮ್ಮ ಅಂತಃ ಕರುಣೆಯ ಫಲವಾಗಿ ನೀವು ನಿಮ್ಮ ಹೃದಯವನ್ನು ವಿಶಾಲಮಾಡಿಕೊಳ್ಳಿರಿ; (ನೀವು ನನ್ನ ಮಕ್ಕಳೆಂದು ನಾನು ಹೇಳುತ್ತೇನೆ). |
14. | ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು? |
15. | ಬೆಲಿಯಾಳನ ಕೂಡ ಕ್ರಿಸ್ತನಿಗೆ ಒಪ್ಪಂದವೇನು? ನಂಬದಿರುವವನ ಕೂಡ ನಂಬುವ ವನಿಗೆ ಪಾಲುಗಾರಿಕೆ ಏನು? |
16. | ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ. |
17. | ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ. |
18. | ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ. |
← 2Corinthians (6/13) → |