← 2Corinthians (9/13) → |
1. | ಪರಿಶುದ್ಧರಿಗೆ ಪರಿಚರ್ಯ ಮಾಡುವದನ್ನು ಕುರಿತು ನಿಮಗೆ ಬರೆಯುವದಕ್ಕೆ ನನಗೆ ಅವಶ್ಯವಿಲ್ಲ. |
2. | ನಿಮ್ಮ ಮನಸ್ಸು ಸಿದ್ದವಾಗಿದೆ ಎಂಬದು ನನಗೆ ಗೊತ್ತುಂಟು; ಒಂದು ವರುಷದ ಹಿಂದೆ ಅಕಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿ ದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ; ನಿಮ್ಮ ಆಸಕ್ತಿಯು ಬಹು ಜನರನ್ನು ಪ್ರೇರೇಪಿಸಿತು. |
3. | ಆದರೂ ನಾವು ನಿಮ್ಮನ್ನು ಹೊಗಳಿದ್ದು ವ್ಯರ್ಥವಾಗದೆ ನಾನು ಹೇಳಿದ ಪ್ರಕಾರವೇ ನೀವು ಸಿದ್ಧವಾಗಿರಬೇಕೆಂದು ಆ ಸಹೋದರರನ್ನು ಕಳುಹಿಸಿದ್ದೇನೆ. |
4. | ಸಿದ್ಧವಾಗಿರದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬದನ್ನು ಕಾಣುವಾಗ ನಮಗೆ ಇಂಥ ಭರವಸವಿದ್ದದ್ದಕ್ಕೆ ನಾವು ನಾಚಿಕೆಪಡಬೇಕಾದೀತು; |
5. | ಹೀಗಿರಲಾಗಿ ನೀವು ಕೊಡುತ್ತೇವೆಂದು ಮೊದಲು ಹೇಳಿದ ಔದಾರ್ಯ ದ್ರವ್ಯವನ್ನು ಸಿದ್ಧಪಡಿಸಬೇಕೆಂದು ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಅವರನ್ನು ಪ್ರೋತ್ಸಾಹಿಸುವದು ಅವಶ್ಯವೆಂದು ನನಗೆ ತೋಚಿತು, ಹೀಗೆ ಅದು ಸಂಕೋಚದಿಂದ ಬಾರದೆ ಔದಾರ್ಯವಾಗಿಯೇ ಸಿದ್ಧವಾಗುವದು. |
6. | ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ. |
7. | ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ. |
8. | ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ. |
9. | (ಬರೆದಿರುವ ಪ್ರಕಾರ--ಆತನು ಬಡವರಿಗೆ ಧಾರಾಳವಾಗಿ ಹಂಚಿಕೊಟ್ಟನು; ಆತನ ನೀತಿಯು ಸದಾಕಾಲವೂ ಇರುವದು ಎಂಬದೇ. |
10. | ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.) |
11. | ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು. |
12. | ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು. |
13. | ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು. |
14. | ಇದಲ್ಲದೆ ನಿಮ್ಮಲ್ಲಿ ರುವ ದೇವರ ಅಪಾರವಾದ ಕೃಪೆಯ ನಿಮಿತ್ತ ಅವರು ಪ್ರಾರ್ಥನೆ ಮಾಡುವವರಾಗಿ ನಿಮಗೋಸ್ಕರ ಹಂಬಲಿ ಸುತ್ತಾರೆ. |
15. | ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ. |
← 2Corinthians (9/13) → |