2John (1/1) |
1. | ಆಯಲ್ಪಟ್ಟವಳಾದ ಅಮ್ಮನವರಿಗೂ ಆಕೆಯ ಮಕ್ಕಳಿಗೂ ಹಿರಿಯನಾದ--ಸತ್ಯದಲ್ಲಿ ನಿಮ್ಮನ್ನು ಪ್ರೀತಿಸುತ್ತೇನೆ; ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ. |
2. | ಯಾಕಂದರೆ ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿಯೇ ನಿಮ್ಮನ್ನು ಪ್ರೀತಿಸುತ್ತಾರೆ. |
3. | ತಂದೆಯಾದ ದೇವರಿಂದಲೂ ಆ ತಂದೆಯ ಮಗನಾಗಿರುವ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯು ಕರುಣೆಯು ಮತ್ತು ಶಾಂತಿಯು ಸತ್ಯ ದಲ್ಲಿಯೂ ಪ್ರೀತಿಯಲ್ಲಿಯೂ ನಿಮ್ಮೊಂದಿಗಿರಲಿ. |
4. | ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು. |
5. | ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿನಗೆ ಬರೆಯದೆ ಮೊದಲಿನಿಂದಲೂ ನಮಗೆ ಇದ್ದ ಆಜ್ಞೆ ಯನ್ನು ನಿನಗೆ ಬರೆಯುವವನಾಗಿ--ನಾವು ಒಬ್ಬರ ನ್ನೊಬ್ಬರು ಪ್ರೀತಿಸುವವರಾಗಿರಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. |
6. | ಆತನ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಪ್ರೀತಿ; ಪ್ರೀತಿಯಲ್ಲಿ ನಡೆಯ ಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ಅಪ್ಪಣೆಯಾಗಿದೆ. |
7. | ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ. |
8. | ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ. |
9. | ಕ್ರಿಸ್ತನ ಬೋಧನೆಯಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿ ಸುವವನಿಗೆ ದೇವರಿಲ್ಲ; ಕ್ರಿಸ್ತನ ಬೋಧನೆಯಲ್ಲಿ ನೆಲೆ ಗೊಂಡಿರುವವನಿಗೆ ತಂದೆಯೂ ಮಗನೂ ಇದ್ದಾರೆ. |
10. | ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ. |
11. | ಅವನಿಗೆ ವಂದನೆ ಎಂದು ಹೇಳುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ. |
12. | ನಿಮಗೆ ಬರೆಯುವದಕ್ಕೆ ನನಗೆ ಅನೇಕ ವಿಷಯಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆಯುವದಕ್ಕೆ ನನಗೆ ಮನಸ್ಸಿಲ್ಲ. ಆದರೆ ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾ ಮುಖಿಯಾಗಿ ಮಾತನಾಡುವೆನೆಂದು ನಂಬುತ್ತೇನೆ; ಆಗ ನಮ್ಮ ಸಂತೋಷವು ಪರಿಪೂರ್ಣವಾಗುವದು. |
13. | ಆಯಲ್ಪಟ್ಟ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ. ಆಮೆನ್. |
2John (1/1) |