← 2Peter (3/3) |
1. | ಪ್ರಿಯರೇ, ನಿಮಗೀಗ ಬರೆಯುವದು ಎರಡನೆಯ ಪತ್ರಿಕೆ. ಈ ಎರಡು ಪತ್ರಿಕೆ ಗಳಲ್ಲಿಯೂ ಜ್ಞಾಪಕಕೊಟ್ಟು ನಿಮ್ಮ ನಿರ್ಮಲವಾದ ಮನಸ್ಸನ್ನು ಪ್ರೇರಿಸಿದ್ದೇನೆ. |
2. | ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ಅಪೊಸ್ತಲರಾದ ನಮ್ಮ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕ ಮಾಡಿಕೊಳ್ಳಬೇಕು. |
3. | ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು-- |
4. | ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆ ಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳ ಬೇಕು. |
5. | ಅವರು ಇದನ್ನು ಬೇಕೆಂದು ತಿಳಿಯಲಾರರು; ಅದೇನಂದರೆ ಪೂರ್ವದಲ್ಲಿದ್ದ ಆಕಾಶಗಳೂ ನೀರಿನ ಹೊರಗೆ ಮತ್ತು ನೀರಿನ ಒಳಗೆ ನಿಂತಿರುವ ಭೂಮಿಯೂ ದೇವರ ವಾಕ್ಯದಿಂದ ಉಂಟಾಗಿ |
6. | ಆ ನೀರುಗಳಿಂದಲೇ ಆ ಕಾಲದಲ್ಲಿದ್ದ ಲೋಕವು ಜಲಪ್ರಳಯದಲ್ಲಿ ನಾಶ ವಾಯಿತು. |
7. | ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು. |
8. | ಆದರೆ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ತಿಳಿಯದವರಾಗಿರಬೇಡಿರಿ. |
9. | ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ |
10. | ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು. |
11. | ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದ ರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು. |
12. | ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ? |
13. | ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು. |
14. | ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ. |
15. | ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು. |
16. | ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯ ಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಿಕೆಗಳಲ್ಲಿರುವ ಕೆಲವು ವಿಷಯಗಳು ತಿಳಿಯುವದಕ್ಕೆ ಕಷ್ಟವಾಗಿವೆ. ವಿದ್ಯಾಹೀನರೂ ಚಪಲಚಿತ್ತರೂ ಮಿಕ್ಕಾದ ಬರಹಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತವ |
17. | ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವದರಿಂದ ದುಷ್ಟರ ತಪ್ಪಿನಂತೆ ನಡಿಸ ಲ್ಪಟ್ಟು ನಿಮ್ಮ ಸ್ಥಿರಮನಸ್ಸನ್ನು ಬಿಟ್ಟು ಭ್ರಷ್ಠರಾಗದಂತೆ ಎಚ್ಚರಿಕೆಯಾಗಿರ್ರಿ. |
18. | ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್. |
← 2Peter (3/3) |