← 2Samuel (22/24) → |
1. | ಕರ್ತನು ದಾವೀದನನ್ನು ಅವನ ಎಲ್ಲಾ ಶತ್ರುಗಳ ಕೈಯೊಳಗಿಂದಲೂ ಸೌಲನ ಕೈಯೊಳಗಿಂದಲೂ ಬಿಡಿಸಿದ ದಿವಸದಲ್ಲಿ ಅವನು ಕರ್ತನನ್ನು ಕುರಿತು ಈ ಹಾಡಿನ ಮಾತುಗಳನ್ನು ಹೇಳಿದನು. ಏನಂದರೆ-- |
2. | ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸುವವನೂ ಆಗಿದ್ದಾನೆ. |
3. | ನನ್ನ ಬಂಡೆಯಾದ ದೇವರಲ್ಲಿ ನಾನು ಭರವಸ ವಿಡುವೆನು; ಆತನು ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ಉನ್ನತ ಗೋಪುರವೂ ನನ್ನ ಆಶ್ರಯವೂ ನನ್ನ ರಕ್ಷಕನೂ ಆಗಿದ್ದಾನೆ. ನೀನು ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುತ್ತೀ. |
4. | ಸ್ತುತಿಗೆ ಯೋಗ್ಯನಾದ ಕರ್ತ ನನ್ನು ನಾನು ಕೂಗುತ್ತೇನೆ; ಹೀಗೆ ನಾನು ನನ್ನ ಶತ್ರು ಗಳೊಳಗಿಂದ ರಕ್ಷಿಸಲ್ಪಡುತ್ತೇನೆ. |
5. | ಮರಣದಲೆಗಳು ನನ್ನನ್ನು ಆವರಿಸಿಕೊಂಡವು; ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು; |
6. | ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ಉರ್ಲುಗಳು ನನ್ನನ್ನು ಎದುರುಗೊಂಡವು; |
7. | ನನ್ನ ಇಕ್ಕಟ್ಟಿನಲ್ಲಿ ಕರ್ತ ನನ್ನು ಕರೆದೆನು; ನನ್ನ ದೇವರನ್ನು ಕರೆದೆನು. ಆತನು ತನ್ನ ಮಂದಿರದೊಳಗಿಂದ ನನ್ನ ಶಬ್ದವನ್ನು ಕೇಳಿದನು; ನನ್ನ ಮೊರೆಯು ಆತನ ಕಿವಿಗೆ ಮುಟ್ಟಿತು. |
8. | ಆಗ ಭೂಮಿಯು ಕದಲಿ ಕಂಪಿಸಿತು; ಆಕಾಶದ ಅಸ್ತಿವಾರಗಳು ನಡುಗಿ ಕದಲಿದವು; ಯಾಕಂದರೆ ಆತನು ಕೋಪ ಗೊಂಡನು. |
9. | ಆತನ ಮೂಗಿನಿಂದ ಹೊಗೆ ಏರಿತು, ಆತನ ಬಾಯಿಯೊಳಗಿಂದ ಬೆಂಕಿ ಹೊರಟು ದಹಿಸಿತು; ಕೆಂಡಗಳು ಅದರಿಂದ ಉರಿದವು. |
10. | ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು; |
11. | ಆತನು ಕೆರೂಬಿಯ ಮೇಲೆ ಕೂತು ಹಾರಿದನು, ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿ ಕೊಂಡನು. |
12. | ಕತ್ತಲನ್ನೂ ಕತ್ತಲಾದ ನೀರುಗಳನ್ನೂ ಆಕಾಶದ ಕಾರ್ಮೋಡಗಳನ್ನೂ ತನ್ನ ಸುತ್ತಲೂ ಡೇರೆ ಗಳಾಗಿ ಮಾಡಿಕೊಂಡನು. |
13. | ಆತನ ಮುಂದಿನ ಪ್ರಕಾಶದಿಂದ ಬೆಂಕಿಯ ಕೆಂಡಗಳು ಉರಿಯಲ್ಪಟ್ಟವು. |
14. | ಕರ್ತನು ಆಕಾಶದಿಂದ ಗುಡುಗಿದನು. ಮಹೋ ನ್ನತನು ತನ್ನ ಶಬ್ದವನ್ನು ಕೊಟ್ಟನು; |
15. | ತನ್ನ ಬಾಣ ಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; |
16. | ಮಿಂಚನ್ನು ಕಳುಹಿಸಿ ಅವರನ್ನು ಗಲಿಬಿಲಿ ಮಾಡಿ ದನು. ಆಗ ಕರ್ತನ ಗದರಿಕೆಯಿಂದಲೂ ಆತನ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ನೆಲೆ ಗಳು ಕಾಣಲ್ಪಟ್ಟವು; ಭೂಲೋಕದ ಅಸ್ತಿವಾರಗಳು ಬೈಲಾದವು. |
17. | ಮೇಲಿನಿಂದ ಕೈಚಾಚಿ ನನ್ನನ್ನು ಹಿಡಿದು, ವಿಸ್ತಾರವಾದ ನೀರುಗಳೊಳಗಿಂದ ನನ್ನನ್ನು ಎಳೆದನು. |
18. | ನನ್ನ ಬಲವುಳ್ಳ ಶತ್ರುವಿಗೂ ನನ್ನ ಹಗೆಯವರಿಗೂ ನನ್ನನ್ನು ತಪ್ಪಿಸಿದನು; |
19. | ಅವರು ನನಗಿಂತ ಬಲಿಷ್ಠ ರಾಗಿದ್ದರು. ನನ್ನ ಆಪತ್ತಿನ ದಿವಸದಲ್ಲಿ ನನಗೆ ಅಡ್ಡಿ ಯಾಗಿದ್ದರು; ಆದರೆ ಕರ್ತನು ನನಗೆ ಆಧಾರ ವಾಗಿದ್ದನು. |
20. | ನನ್ನನ್ನು ವಿಶಾಲ ಸ್ಥಳಕ್ಕೆ ಹೊರಗೆ ತಂದನು; ಆತನು ನನ್ನಲ್ಲಿ ಸಂತೋಷಪಟ್ಟದ್ದರಿಂದ ನನ್ನನ್ನು ತಪ್ಪಿಸಿಬಿಟ್ಟನು. |
21. | ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲುಕೊಟ್ಟನು. |
22. | ಕರ್ತನ ಮಾರ್ಗಗಳನ್ನು ಕೈಕೊಂಡೆನು; ನಾನು ನನ್ನ ದೇವರನ್ನು ತೊರೆದುಬಿಡುವ ದುಷ್ಟತ್ವಮಾಡಲಿಲ್ಲ. |
23. | ಆತನ ನ್ಯಾಯಗಳೆಲ್ಲಾ ನನ್ನ ಮುಂದೆ ಇದ್ದವು; ಆತನ ನಿಯಮ ಗಳನ್ನು ನನ್ನಿಂದ ಹೋಗಲಿಲ್ಲ. |
24. | ಆತನ ಮುಂದೆ ಸಂಪೂರ್ಣನಾಗಿದ್ದು ಅಕ್ರಮದಿಂದ ನನ್ನನ್ನು ತಪ್ಪಿಸಿ ಕಾಪಾಡಿಕೊಂಡೆನು. |
25. | ಆದದರಿಂದ ಕರ್ತನು ನನ್ನ ನೀತಿಯ ಪ್ರಕಾರವಾಗಿಯೂ ಆತನ ಕಣ್ಣುಗಳ ಮುಂದಿನ ನನ್ನ ಶುದ್ಧತ್ವದ ಪ್ರಕಾರವಾಗಿಯೂ ನನಗೆ ಬದಲುಕೊಟ್ಟನು. |
26. | ಕೃಪೆಯುಳ್ಳವನಿಗೆ ಕೃಪೆಯುಳ್ಳವ ನಾಗಿರುವಿ; ಸಂಪೂರ್ಣನಾದ ಮನುಷ್ಯನಿಗೆ ಸಂಪೂರ್ಣನಾಗಿರುವಿ. |
27. | ಶುದ್ಧನಿಗೆ ಶುದ್ಧನಾಗಿರುವಿ, ಮೂರ್ಖನ ಸಂಗಡ ಹೋರಾಡುವಿ. |
28. | ನೀನು ದೀನರನ್ನು ರಕ್ಷಿಸುವಿ; ಗರ್ವಿಗಳನ್ನು ತಗ್ಗಿಸುವ ಹಾಗೆ ನಿನ್ನ ಕಣ್ಣುಗಳು ಅವರ ಮೇಲೆ ಅವೆ. |
29. | ಓ ಕರ್ತನೇ, ನನ್ನ ದೀಪವು ನೀನೇ; ಕರ್ತನು ನನ್ನ ಕತ್ತಲನ್ನು ಪ್ರಕಾಶಿಸುವಂತೆ ಮಾಡುವನು. |
30. | ನಿನ್ನಿಂದ ಸೈನ್ಯದ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದನು. |
31. | ದೇವರಾದರೋ, ಆತನ ಮಾರ್ಗವು ಸಂಪೂರ್ಣ ವಾದದ್ದು; ಕರ್ತನ ವಾಕ್ಯವು ಶೋಧಿಸಲ್ಪಟ್ಟದ್ದಾಗಿದೆ; ಆತನಲ್ಲಿ ಭರವಸವಿಡುವವರೆಲ್ಲರಿಗೆ ಗುರಾಣಿಯಾಗಿ ದ್ದಾನೆ. |
32. | ಕರ್ತನಲ್ಲದೆ ದೇವರು ಯಾರು? ನಮ್ಮ ದೇವರಲ್ಲದೆ ಬಂಡೆಯು ಯಾರು? |
33. | ದೇವರು ನನ್ನ ಬಲವೂ ನನ್ನ ಪರಾಕ್ರಮವೂ ಆಗಿದ್ದಾನೆ; ನನ್ನ ಮಾರ್ಗವನ್ನು ಸಂಪೂರ್ಣಮಾಡುತ್ತಾನೆ. |
34. | ನನ್ನ ಕಾಲುಗಳನ್ನು ಜಿಂಕೆಗಳ ಹಾಗೆ ಮಾಡಿ ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾನೆ. |
35. | ನನ್ನ ಕೈಗಳಿಗೆ ಯುದ್ಧ ಕಲಿಸುತ್ತಾನೆ. ನನ್ನ ತೋಳುಗಳು ಕಬ್ಬಿಣದ ಬಿಲ್ಲನ್ನು ಬೊಗ್ಗಿಸುತ್ತವೆ. |
36. | ನೀನು ನಿನ್ನ ರಕ್ಷಣೆಯ ಗುರಾಣಿ ಯನ್ನು ನನಗೆ ಕೊಟ್ಟೆ; ನಿನ್ನ ಸೌಮ್ಯತೆಯು ನನ್ನನ್ನು ಹೆಚ್ಚಿಸಿತು. |
37. | ನನ್ನ ಹೆಜ್ಜೆಗಳನ್ನು ನನ್ನ ಕೆಳಗೆ ವಿಶಾಲ ಮಾಡಿದ್ದರಿಂದ ನನ್ನ ಕಾಲುಗಳು ಜಾರಲಿಲ್ಲ. |
38. | ನನ್ನ ಶತ್ರುಗಳನ್ನು ಹಿಂದಟ್ಟಿ ಅವರನ್ನು ನಾಶಮಾಡಿದೆನು; ಅವರನ್ನು ಸಂಹರಿಸಿಬಿಡುವ ವರೆಗೂ ನಾನು ಹಿಂತಿರು ಗಲಿಲ್ಲ. |
39. | ಅವರನ್ನು ಸಂಹರಿಸಿಬಿಟ್ಟೆನು. ಗಾಯಮಾಡಿ ದೆನು. ಆದದರಿಂದ ಅವರು ಏಳದೆ ಹೋಗಿ, ನನ್ನ ಪಾದಗಳ ಕೆಳಗೆ ಬಿದ್ದರು. |
40. | ನೀನು ಯುದ್ದಕ್ಕೆ ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿದಿ; ನನ್ನ ಎದು ರಾಳಿಗಳನ್ನು ನನ್ನ ಕೆಳಗೆ ಅಧೀನಮಾಡಿದಿ. |
41. | ನನ್ನ ಶತ್ರುಗಳು ನನಗೆ ಬೆನ್ನು ಕೊಡುವಂತೆ ಮಾಡಿದಿ; ನಾನು ನನ್ನ ಹಗೆಯವರನ್ನು ಸಂಹರಿಸುವ ಹಾಗೆ ಮಾಡಿದ್ದಿ. |
42. | ಅವರು ನೋಡುತ್ತಿದ್ದರು, ಆದರೆ ರಕ್ಷಿಸು ವವನು ಯಾರು ಇರಲಿಲ್ಲ; ಕರ್ತನನ್ನು ನೋಡಿದರು, ಆದರೆ ಆತನು ಅವರಿಗೆ ಪ್ರತ್ಯುತ್ತರ ಕೊಡಲಿಲ್ಲ. |
43. | ಆಗ ನಾನು ಅವರನ್ನು ನೆಲದ ಧೂಳಿನ ಹಾಗೆ ಪುಡಿಪುಡಿಮಾಡಿದೆನು; ಬೀದಿಯ ಕೆಸರಿನ ಹಾಗೆ ಅವರನ್ನು ತುಳಿದು ಚದರುವಂತೆ ಮಾಡಿದೆನು. |
44. | ನೀನು ನನ್ನ ಜನರ ವಾಗ್ವಾದಗಳಿಂದ ನನ್ನನ್ನು ತಪ್ಪಿಸಿದ್ದೀ, ಜನಾಂಗಗಳಿಗೆ ತಲೆಯಾಗಿ ನನ್ನನ್ನು ಇರಿಸಿದ್ದೀ; ನಾನು ಅರಿಯದ ಜನರು ನನ್ನನ್ನು ಸೇವಿಸುವರು. |
45. | ದೇಶಾಂತ ದವರು ನನಗೆ ಅಧೀನರಾಗುವರು; ಕೇಳಿದ ಕೂಡಲೆ ನನಗೆ ವಿಧೇಯರಾಗುವರು. |
46. | ದೇಶಾಂತದವರು ಬಾಡಿಹೋಗುವರು; ತಮ್ಮನ್ನು ಮುಚ್ಚಿಕೊಂಡ ಸ್ಥಳ ಗಳಿಂದ ನಡುಗುತ್ತಾ ಬರುವರು. |
47. | ಕರ್ತನು ಜೀವಿತ ನಾಗಿದ್ದಾನೆ; ನನ್ನ ಬಂಡೆಗೆ ಸ್ತುತಿಯಾಗಲಿ; ನನ್ನ ರಕ್ಷಣೆಯ ಬಂಡೆಯಾದ ದೇವರು ಉನ್ನತನಾಗಲಿ. |
48. | ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ಜನರನ್ನು ನನಗೆ ಅಧೀನಪಡಿಸುತ್ತಾನೆ. |
49. | ಆತನು ನನ್ನ ಶತ್ರುಗಳಿಂದ ನನ್ನನ್ನು ಹೊರಗೆ ತರು ತ್ತಾನೆ. ನೀನು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀ; ಬಲಾತ್ಕಾರದ ಮನುಷ್ಯನಿಂದ ತಪ್ಪಿ ಸುತ್ತೀ. |
50. | ಆದದರಿಂದ ಓ ಕರ್ತನೇ, ನಾನು ಜನಾಂಗ ಗಳಲ್ಲಿ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಕೀರ್ತಿಸುವೆನು. |
51. | ಆತನು ತನ್ನ ಅರಸನಿಗೆ ರಕ್ಷಣೆಯ ಗೋಪುರವಾಗಿದ್ದಾನೆ; ತನ್ನ ಅಭಿಷಕ್ತನಾದ ದಾವೀದ ನಿಗೂ ಅವನ ಸಂತತಿಗೂ ಕೃಪೆಯನ್ನು ಯುಗಯುಗಕ್ಕೂ ಅನುಗ್ರಹಿಸುತ್ತಾನೆ. |
← 2Samuel (22/24) → |