← 2Samuel (5/24) → |
1. | ಇದಾದ ಮೇಲೆ ಇಸ್ರಾಯೇಲ್ ಗೋತ್ರ ಗಳೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ. |
2. | ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು. |
3. | ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು. |
4. | ದಾವೀದನು ಆಳಲು ಪ್ರಾರಂಭಿಸಿದಾಗ ಮೂವತ್ತು ವರುಷದವ ನಾಗಿದ್ದನು; ಅವನು ನಾಲ್ವತ್ತು ವರುಷ ಆಳಿದನು. |
5. | ಅವನು ಹೆಬ್ರೋನಿನಲ್ಲಿ ಯೆಹೂದ ಜನರ ಮೇಲೆ ಏಳುವರೆ ವರುಷ ಆಳಿದನು. ಯೆರೂಸಲೇಮಿನಲ್ಲಿ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಎಲ್ಲಾ ಯೆಹೂ ದದ ಜನರ ಮೇಲೆಯೂ ಮೂವತ್ತುಮೂರು ವರುಷ ಆಳಿದನು. |
6. | ಆಗ ಅರಸನೂ ಅವನ ಜನರೂ ದೇಶದ ನಿವಾಸಿ ಗಳಾದ ಯೆಬೂಸಿಯರು ಒಳಗೆ ಯೆರೂಸಲೇಮಿಗೆ ಬಂದರು. ದಾವೀದನು ಇದರಲ್ಲಿ ಬರಲಾರನೆಂದು ಅವರು ನೆನಸಿ ದಾವೀದನಿಗೆ--ನೀನು ಕುರುಡರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು ನೀನು ಇಲ್ಲಿಗೆ ಬರಲಾರಿ ಅಂದರು. |
7. | ಆದಾಗ್ಯೂ ದಾವೀದನು ಚೀಯೋನಿನ ಕೋಟೆಯನ್ನು ಹಿಡುಕೊಂಡನು. ಅದೇ ದಾವೀದನ ಪಟ್ಟಣವು. |
8. | ಆ ದಿವಸದಲ್ಲಿ ದಾವೀದನುಕಂದಕವನ್ನು ದಾಟಿ ಯೆಬೂಸಿಯರನ್ನು ಅಂದರೆ ದಾವೀದನ ಪ್ರಾಣ ದ್ವೇಷಿಗಳಾದ ಕುಂಟರನ್ನೂ ಕುರು ಡರನ್ನೂ ಹೊಡೆಯುವವನು (ಮುಖ್ಯಸ್ಥನೂ ಅಧಿ ಪತಿಯೂ ಆಗಿರುವನು) ಎಂದು ಹೇಳಿದ್ದನು. ಅದಕ್ಕೆ ಅವರು--ಕುರುಡರೂ ಕುಂಟರೂ ಮನೆಯೊಳಗೆ ಬರಕೂಡದು ಅಂದರು. |
9. | ದಾವೀದನು ಕೋಟೆಯಲ್ಲಿ ವಾಸಮಾಡಿ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ದಾವೀದನು ಮಿಲ್ಲೋವಿನ ಸುತ್ತಲಾಗಿ ಪ್ರಾರಂಭಿಸಿ ಒಳಪಾರ್ಶ್ವದಲ್ಲಿ ಇರುವದನ್ನು ಕಟ್ಟಿಸಿದನು. |
10. | ಹೀಗೆ ಯೇ ದಾವೀದನು ದಿನದಿನಕ್ಕೆ ದೊಡ್ಡವನಾಗುತ್ತಾ ಇದ್ದನು; ಸೈನ್ಯಗಳ ದೇವರಾದ ಕರ್ತನು ಅವನ ಸಂಗಡ ಇದ್ದನು. |
11. | ಆಗ ತೂರಿನ ಅರಸನಾದ ಹೀರಾ ಮನು ದಾವೀದನ ಬಳಿಗೆ ದೂತರನ್ನೂ ದೇವದಾರು ಮರಗಳನ್ನೂ ಬಡಿಗೆಯವರನ್ನೂ ಶಿಲ್ಪಿಗಳನ್ನೂ ಕಳು ಹಿಸಿದನು. ಅವರು ದಾವೀದನಿಗೆ ಮನೆಯನ್ನು ಕಟ್ಟಿ ದರು. |
12. | ದಾವೀದನು ತನ್ನನ್ನು ಕರ್ತನು ಇಸ್ರಾಯೇ ಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದನೆಂದೂ ತನ್ನ ಜನವಾದ ಇಸ್ರಾಯೇಲಿನ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದನೆಂದೂ ತಿಳಿದುಕೊಂಡನು. |
13. | ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ ಯೆರೂಸಲೇಮಿನಿಂದ ಇನ್ನೂ ಕೆಲವು ಮಂದಿ ಉಪಪತ್ನಿಯರನ್ನೂ ಹೆಂಡತಿಯರನ್ನೂ ಮಾಡಿಕೊಂಡನು; ದಾವೀದನಿಗೆ ಇನ್ನೂ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು. |
14. | ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು ಯಾವವೆಂದರೆ; ಶಮ್ಮೂವ ಶೊಬಾಬ್ ನಾತಾನ್ |
15. | ಸೊಲೊಮೋನ್ ಇಬ್ಹಾರ್ |
16. | ಎಲೀಷೂವ ನೆಫೆಗ್ ಯಾಫೀಯ ಎಲೀಷಾಮ ಎಲ್ಯಾದ ಎಲೀಫೆ ಲೆಟ್ ಇವರೇ. |
17. | ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಲು ಅಭಿಷೇಕಮಾಡಿದ್ದಾರೆಂದು ಫಿಲಿಷ್ಟಿ ಯರು ಕೇಳಿದಾಗ ಅವರೆಲ್ಲರು ದಾವೀದನನ್ನು ಹುಡುಕು ವದಕ್ಕೆ ಬಂದರು. ಅದನ್ನು ದಾವೀದನು ಕೇಳಿ ಗಡಿ ಸ್ಥಳಕ್ಕೆ ಹೋದನು. |
18. | ಆದರೆ ಫಿಲಿಷ್ಟಿಯರು ಬಂದು ರೆಫಾಯಾಮ್ ತಗ್ಗಿನಲ್ಲಿ ಇಳುಕೊಂಡರು. |
19. | ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು. |
20. | ಆದಕಾರಣ ದಾವೀದನು ಬಾಳ್ಪೆರಾಚೀಮಿಗೆ ಬಂದು ಅಲ್ಲಿ ಅವರನ್ನು ಹೊಡೆದು--ನೀರು ಕಟ್ಟೆ ಒಡೆದು ಹರಿಯುವ ಹಾಗೆ ಕರ್ತನು ನನ್ನ ಮುಂದೆ ನನ್ನ ಶತ್ರುಗಳ ಮೇಲೆ ಹರಿದು ಬಿದ್ದಿದ್ದಾನೆ ಎಂದು ಹೇಳಿ ಆ ಸ್ಥಳಕ್ಕೆ ಬಾಳ್ಪೆರಾಚೀಮ್ ಎಂದು ಹೆಸರಿ ಟ್ಟನು. |
21. | ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟುಹೋದದರಿಂದ ದಾವೀದನೂ ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು. |
22. | ಫಿಲಿಷ್ಟಿಯರು ತಿರಿಗಿ ಬಂದು ರೆಫಾಯಾಮ್ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು. |
23. | ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು. |
24. | ಹಿಪ್ಪಲಿ ಗಿಡಗಳ ಶಿಖರಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗ ಚೇತರಿಸಿಕೊಳ್ಳ ಬೇಕು. ಯಾಕಂದರೆ ಆಗಲೇ ಕರ್ತನು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಡು ವನು ಅಂದನು. |
25. | ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು. |
← 2Samuel (5/24) → |