← 2Samuel (6/24) → |
1. | ದಾವೀದನು ಇಸ್ರಾಯೇಲಿನಲ್ಲಿ ಆಯಲ್ಪಟ್ಟ ಮೂವತ್ತು ಸಾವಿರ ಜನರನ್ನು ಕೂಡಿಸಿ ಕೊಂಡು ಎದ್ದು ತನ್ನ ಸಂಗಡ ಇದ್ದ ಎಲ್ಲಾ ಜನರನ್ನು ಕರಕೊಂಡು |
2. | ಕೆರೂಬಿಗಳ ಮಧ್ಯದಲ್ಲಿ ವಾಸವಾಗಿ ರುವ ಸೈನ್ಯಗಳ ಕರ್ತನೆಂಬ ಹೆಸರುಳ್ಳ ದೇವರ ಮಂಜೂ ಷವನ್ನು ಯೆಹೂದದ ಬಾಳಾದಿಂದ ತರುವದಕ್ಕೆ ಹೊರಟನು. |
3. | ಆಗ ಅವರು ಗಿಬ್ಯದಲ್ಲಿರುವ ಅಬೀನಾ ದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು ಹೊಸ ಬಂಡಿಯ ಮೇಲೆ ಏರಿಸಿದರು. |
4. | ಅಬೀನಾದಾಬನ ಮಕ್ಕಳಾದ ಉಜ್ಜನೂ ಅಹಿಯೋವನೂ ಆ ಹೊಸ ಬಂಡಿಯನ್ನು ನಡಿಸಿದರು. ಗಿಬ್ಯ ದಲ್ಲಿದ್ದ ಅಬೀನಾದಾಬನ ಮನೆಯೊಳಗಿಂದ ಅದನ್ನು ಹೊರಗೆ ತಂದು ಅವರು ಅದರ ಸಂಗಡ ಹೋಗು ತ್ತಿರುವಾಗ ಅಹಿಯೋವನು ಮಂಜೂಷದ ಮುಂದೆ ನಡೆದನು. |
5. | ದಾವೀದನೂ ಇಸ್ರಾಯೇಲ್ ಮನೆ ಯವರೆಲ್ಲರೂ ತುರಾಯಿ ಮರದಿಂದ ಮಾಡಲ್ಪಟ್ಟ ಸಕಲ ವಾದ್ಯಗಳಾದ ಕಿನ್ನರಿಗಳನ್ನೂ ವೀಣೆಗಳನ್ನೂ ದಮ್ಮಡಿಗಳನ್ನೂ ಸ್ವರಮಂಡಲಗಳನ್ನೂ ತಾಳಗಳನ್ನೂ ಕರ್ತನ ಮುಂದೆ ಬಾರಿಸಿಕೊಂಡು ಹೋದರು. |
6. | ಅವರು ನಾಕೋನನ ಕಣದ ಬಳಿಗೆ ಬಂದಾಗ ಉಜ್ಜನು ದೇವರ ಮಂಜೂಷವನ್ನು ಹಿಡಿಯುವದಕ್ಕೆ ತನ್ನ ಕೈಚಾಚಿ ಅದನ್ನು ಹಿಡಿದನು. ಯಾಕಂದರೆ ಎತ್ತುಗಳು ಎಡವಿದವು. |
7. | ಆಗ ಕರ್ತನ ಕೋಪವು ಉಜ್ಜನ ಮೇಲೆ ಉರಿಯಿತು; ದೇವರು ಅವನ ಅಪ ರಾಧಕ್ಕೋಸ್ಕರ ಅವನನ್ನು ಹೊಡೆದನು; ಅಲ್ಲಿ ಅವನು ದೇವರ ಮಂಜೂಷದ ಬಳಿಯಲ್ಲಿ ಸತ್ತನು. |
8. | ಕರ್ತನು ಉಜ್ಜನನ್ನು ಹರಿದುಬಿಟ್ಟಿದ್ದರಿಂದ ದಾವೀದನು ವ್ಯಥೆ ಗೊಂಡು ಆ ಸ್ಥಳಕ್ಕೆ ಇಂದಿನ ವರೆಗೂ ಪೆರೆಚುಜ್ಜಾ ಎಂದು ಹೆಸರಿಟ್ಟನು. |
9. | ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ಕರ್ತನ ಮಂಜೂಷವು ನನ್ನ ಬಳಿಗೆ ಬರುವದು ಹೇಗೆ ಅಂದನು. |
10. | ದಾವೀದನು ಕರ್ತನ ಮಂಜೂಷವನ್ನು ತಾನು ದಾವೀದನ ಪಟ್ಟಣಕ್ಕೆ ತರಲು ಮನಸ್ಸಿಲ್ಲದೆ ಗತ್ ಊರಿನ ಒಬೇದೆದೋಮನ ಮನೆಗೆ ಹೊತ್ತುಕೊಂಡು ಹೋದನು. |
11. | ಕರ್ತನ ಮಂಜೂ ಷವು ಗತ್ ಊರಿನ ಒಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇದ್ದದ್ದರಿಂದ ಕರ್ತನು ಒಬೇದೆ ದೋಮನನ್ನೂ ಅವನ ಮನೆಯವರೆಲ್ಲರನ್ನೂ ಆಶೀರ್ವದಿಸಿದನು. |
12. | ದೇವರ ಮಂಜೂಷದ ನಿಮಿತ್ತ ಕರ್ತನು ಒಬೇ ದೆದೋಮನ ಮನೆಯನ್ನೂ ಅವನಿಗೆ ಉಂಟಾದ ದ್ದೆಲ್ಲವನ್ನೂ ಆಶೀರ್ವದಿಸಿದ್ದಾನೆಂದು ಅರಸನಾದ ದಾವೀದನಿಗೆ ತಿಳಿಸಲ್ಪಟ್ಟಿತು. ಆಗ ದಾವೀದನು ಹೊರಟು ಹೋಗಿ ದೇವರ ಮಂಜೂಷವನ್ನು ಒಬೇ ದೆದೋಮನ ಮನೆಯಿಂದ ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು. |
13. | ಕರ್ತನ ಮಂಜೂಷ ವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ ಅವನು ಎತ್ತುಗಳನ್ನೂ ಕೊಬ್ಬಿದ ಪಶು ಗಳನ್ನೂ ಬಲಿಯಾಗಿ ಕೊಟ್ಟನು. |
14. | ಇದಲ್ಲದೆ ದಾವೀ ದನು ನಾರಿನ ಎಫೋದನ್ನು ಧರಿಸಿಕೊಂಡು ತನ್ನ ಪೂರ್ಣ ಬಲದಿಂದ ಕರ್ತನ ಮುಂದೆ ನಾಟ್ಯವಾ ಡಿದನು. |
15. | ಈ ಪ್ರಕಾರ ದಾವೀದನೂ ಇಸ್ರಾಯೇಲ್ ಮನೆಯವರೆಲ್ಲರೂ ಕರ್ತನ ಮಂಜೂಷವನ್ನು ಆರ್ಭಟ ದಿಂದಲೂ ತುತೂರಿಯ ಶಬ್ದದಿಂದಲೂ ಬರಮಾಡಿ ದರು. |
16. | ಆದರೆ ಕರ್ತನ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ ಸೌಲನ ಮಗಳಾದ ವಿಾಕಲಳು ಕಿಟಿಕಿಯಿಂದ ನೋಡಿ ಅರಸನಾದ ದಾವೀ ದನು ಕರ್ತನ ಮುಂದೆ ಜಿಗಿಯುತ್ತಾ ನಾಟ್ಯವಾಡು ವದನ್ನು ಕಂಡು ತನ್ನ ಹೃದಯದಲ್ಲಿ ಅವನನ್ನು ತಿರಸ್ಕ ರಿಸಿದಳು. |
17. | ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. |
18. | ದಾವೀದನು ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಸೈನ್ಯಗಳ ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ ಜನರಿಗೆಲ್ಲಾ ಅಂದರೆ ಇಸ್ರಾಯೇಲಿನ ಸಮೂಹಕ್ಕೆಲ್ಲಾ |
19. | ಸ್ತ್ರೀ ಪುರುಷರಲ್ಲಿ ಒಬ್ಬೊಬ್ಬರಿಗೆ ಒಂದು ರೊಟ್ಟಿ ತುಂಡನ್ನೂ ಒಂದು ದೊಡ್ಡ ತುಂಡು ಮಾಂಸವನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ಕೊಟ್ಟನು. ತರುವಾಯ ಜನರೆ ಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು. |
20. | ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವದಕ್ಕೆ ಹೋದಾಗ ಸೌಲನ ಮಗಳಾದ ವಿಾಕಲಳು ದಾವೀದನಿಗೆ ಎದುರಾಗಿ ಬಂದು--ನಿಷ್ಪ್ರ ಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ ಹಾಗೆಯೇ ಈಹೊತ್ತು ತನ್ನ ಸೇವಕರ ದಾಸಿಗಳ ಕಣ್ಣುಮುಂದೆ ತನ್ನ ವಸ್ತ್ರ ಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಈ ಹೊತ್ತು ಎಷ್ಟು ಘನಪಟ್ಟನು ಅಂದಳು. |
21. | ಆದರೆ ದಾವೀದನು ವಿಾಕಳಿಗೆ--ನಿನ್ನ ತಂದೆಗಿಂತಲೂ ಅವನ ಮನೆಯವರೆಲ್ಲರಿಗಿಂತಲೂ ನನ್ನನ್ನು ಕರ್ತನು ತನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿ ನೇಮಿಸುವೆನು ಎಂದು ಆದುಕೊಂಡ ಕರ್ತನ ಸಮ್ಮು ಖದ ಮುಂದೆಯೇ ಆಯಿತು. |
22. | ನಾನು ಕರ್ತನ ಮುಂದೆ ಆಡುವೆನು. ಇನ್ನೂ ಇದಕ್ಕಿಂತ ಅಲ್ಪನಾಗಿ ಇರುವೆನು; ನಿನ್ನ ದೃಷ್ಟಿಯಲ್ಲಿ ನೀಚನಾಗಿರುವೆನು.ಆದರೆ ನೀನು ಹೇಳಿದ ದಾಸಿಗಳಿಂದ ನಿಶ್ಚಯವಾಗಿ ಘನವನ್ನು ಹೊಂದುವೆನು ಅಂದನು. |
23. | ಆದದರಿಂದ ಸೌಲನ ಮಗಳಾದ ವಿಾಕಲಳು ತನ್ನ ಮರಣದ ದಿವಸದ ವರೆಗೂ ಮಕ್ಕಳಿಲ್ಲದವಳಾಗಿದ್ದಳು. |
← 2Samuel (6/24) → |