← 2Samuel (8/24) → |
1. | ಇದಾದ ಮೇಲೆ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ಅಣಗಿಸಿ ಅವರ ಕೈಯಿಂದ ಮೇತೆಗಮ್ಮವನ್ನು ತಕ್ಕೊಂಡನು. |
2. | ಇದಲ್ಲದೆ ಅವನು ಮೋವಾಬ್ಯರನ್ನು ಹೊಡೆದು ಅವರನ್ನು ಹಗ್ಗದಿಂದ ಅಳೆದು ನೆಲಕ್ಕೆ ಬೀಳಮಾಡಿದನು; ಅವರನ್ನು ಕೊಲ್ಲುವದಕ್ಕೆ ಎರಡು ದಾರಗಳಿಂದ, ಜೀವದಲ್ಲಿಡುವದಕ್ಕೆ ಒಂದು ಪೂರ್ಣ ವಾದ ಹಗ್ಗದಿಂದ ಅಳೆದನು. ಹಾಗೆಯೇ ಮೋವಾಬ್ಯರು ದಾವೀದನಿಗೆ ದಾಸರಾಗಿ ಅವನಿಗೆ ಕಪ್ಪವನ್ನು ತಂದರು. |
3. | ಇದಲ್ಲದೆ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನು ತನ್ನ ಮೇರೆಯನ್ನು ಕಟ್ಟಿ ಕೊಳ್ಳುವದಕ್ಕೆ ಹೋದಾಗ |
4. | ದಾವೀದನು ಯೂಫ್ರೇ ಟಿಸ್ ನದಿಯ ಬಳಿಯಲ್ಲಿ ಅವನಿಗಿದ್ದ ಸಾವಿರ ರಥ ಗಳನ್ನೂ ಏಳು ನೂರು ಕುದುರೆ ರಾಹುತರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಹಿಡಿದು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ದುಬಿಟ್ಟನು. |
5. | ಆದರೆ ದಮಸ್ಕದಲ್ಲಿರುವ ಅರಾಮ್ಯರು ಚೋಬದ ಅರಸನಾದ ಹದದೆಜೆರನಿಗೆ ಸಹಾಯಮಾಡುವದಕ್ಕೆ ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದು ಹಾಕಿದನು. |
6. | ತರುವಾಯ ಕಾವಲುದಂಡುಗಳನ್ನು ದಾವೀದನು ದಮಸ್ಕಕ್ಕೆ ಹೊಂದಿದ ಅರಾಮ್ಯದ ಠಾಣ ಗಳಲ್ಲಿ ಇಟ್ಟನು. ಹಾಗೆಯೇ ಅರಾಮ್ಯರು ದಾವೀದ ನಿಗೆ ದಾಸರಾಗಿ ಕಪ್ಪಗಳನ್ನು ತಂದರು; ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿ ದನು. |
7. | ಆದರೆ ದಾವೀದನು ಹದದೆಜೆರನ ಸೇವಕ ರಿಗಿದ್ದ ಬಂಗಾರದ ಡಾಲುಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು. |
8. | ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಅರಸನಾದ ದಾವೀದನು ಅತ್ಯ ಧಿಕವಾಗಿ ಹಿತ್ತಾಳೆಯನ್ನು ತೆಗೆದುಕೊಂಡು ಬಂದನು. |
9. | ದಾವೀದನು ಹದದೆಜೆರನ ಎಲ್ಲಾ ಸೈನ್ಯವನ್ನು ಹೊಡೆದನೆಂದು ಹಮಾತಿನ ಅರಸನಾದ ತೋವು ಕೇಳಿದಾಗ |
10. | ಅವನು ದಾವೀದನನ್ನು ವಂದಿಸುವ ದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮ ನನ್ನು ಕಳುಹಿಸಿದನು; ಯಾಕಂದರೆ ತೋವಿಗೂ ಹದ ದೆಜೆರನಿಗೂ ವಿರೋಧವಾಗಿ ಯುದ್ಧಮಾಡಿದಾಗ ದಾವೀದನು ಅವನನ್ನು ಹೊಡೆದಿದ್ದನು; ಹದದೆಜೆರನಿಗೆ ತೋವು ಸಂಗಡ ಯುದ್ಧಗಳಿದ್ದವು. ಯೋರಾಮನು ಬೆಳ್ಳಿ ಬಂಗಾರ ಹಿತ್ತಾಳೆಯ ಪಾತ್ರೆಗಳನ್ನೂ ತನ್ನೊಂದಿಗೆ ತಂದನು. |
11. | ಇವುಗಳನ್ನು ಅರಸನಾದ ದಾವೀದನು ವಶಮಾಡಿಕೊಂಡು ಅರಾಮ್ಯರೂ ಮೋವಾಬ್ಯರೂ ಅಮ್ಮೋನನ ಮಕ್ಕಳೂ ಫಿಲಿಷ್ಟಿಯರೂ ಅಮಾಲೇಕ್ಯರೂ ಎಂಬ ಸಕಲ ಜನಾಂಗಗಳಿಂದ ತೆಗೆದು |
12. | ಪ್ರತಿಷ್ಠೆ ಮಾಡಿದ ಬೆಳ್ಳಿ ಬಂಗಾರದ ಸಂಗಡಲೂ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಲ್ಲಿ ಕೊಳ್ಳೆ ಇಟ್ಟದರ ಸಂಗಡಲೂ ಕರ್ತನಿಗೆ ಪ್ರತಿಷ್ಠೆಮಾಡಿ ಇಟ್ಟನು. |
13. | ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂತಿರುಗಿದಾಗ ಹೆಸರುಗೊಂಡನು. |
14. | ಎದೋಮಿ ನಲ್ಲಿ ಕಾವಲುದಂಡುಗಳನ್ನು ಇಟ್ಟನು. ಎಲ್ಲಾ ಎದೋಮಿ ನಲ್ಲಿ ಅವನು ಕಾವಲುದಂಡುಗಳನ್ನು ಇಟ್ಟದ್ದರಿಂದ ಎದೋಮ್ಯರೆಲ್ಲರೂ ದಾವೀದನಿಗೆ ದಾಸರಾದರು. ದಾವೀದನು ಹೋದಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿದನು. |
15. | ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು. |
16. | ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕನಾ ಗಿದ್ದನು. |
17. | ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜ ಕರಾಗಿದ್ದರು; ಸೆರಾಯನು ಮಂತ್ರಿಯಾಗಿದ್ದನು. |
18. | ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು. |
← 2Samuel (8/24) → |