← 2Timothy (3/4) → |
1. | ಆದರೆ ಕಡೇ ದಿವಸಗಳಲ್ಲಿ ಅಪಾಯಕರ ವಾದ ಕಾಲಗಳು ಬರುವವೆಂಬದನ್ನು ಸಹ ತಿಳಿದುಕೋ. |
2. | ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿ ಕೊಳ್ಳುವವರೂ ಲೋಭಿಗಳೂ ಬಡಾಯಿ ಕೊಚ್ಚುವ ವರೂ ಅಹಂಕಾರಿಗಳೂ ದೇವದೂಷಕರೂ ತಂದೆ ತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ ಅಶುದ್ಧರೂ |
3. | ಸ್ವಾಭಾವಿಕವಾದ ಮಮತೆಯಿಲ್ಲದವರೂ ಒಪ್ಪಂದವನ್ನು ಮುರಿಯುವವರೂ ಸುಳ್ಳಾಗಿ ದೂರು ವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯವರನ್ನೂ ಹೀನೈಸುವವರೂ |
4. | ದ್ರೋಹಿಗಳೂ ದುಡಿಕಿನವರೂ ಉಬ್ಬಿಕೊಂಡವರೂ ದೇವರಿಗಿಂತ ಹೆಚ್ಚಾಗಿ ಭೋಗಗಳನ್ನೇ ಪ್ರೀತಿಸುವವರೂ |
5. | ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು. |
6. | ಮನೆ ಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಛೆಗಳಿಂದ ನಡಿಸಲ್ಪಟ್ಟವರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳು ವವರೂ ಇವರೊಳಗೆ ಸೇರಿದವರೇ. |
7. | ಇವರು ಯಾವಾಗಲೂ ಕಲಿಯುತ್ತಿದ್ದರೂ ಸತ್ಯದ ಪರಿಜ್ಞಾನ ವನ್ನು ಹೊಂದಲಾರದವರು. |
8. | ಯನ್ನಯಂಬ್ರ ಎಂಬ ವರು ಮೋಶೆಯನ್ನು ವಿರೋಧಿಸಿದಂತೆಯೇ ಇವರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಇದಲ್ಲದೆ ಇವರು ಬುದ್ಧಿಗೆಟ್ಟವರೂ ಭ್ರಷ್ಟರೂ ಆಗಿದ್ದಾರೆ. |
9. | ಆದರೆ ಇವರು ಇನ್ನು ಮುಂದುವರಿಯಲಾರರು; ಈ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪರಿಷ್ಕಾರವಾಗಿ ತಿಳಿದು ಬಂದ ಪ್ರಕಾರ ಇವರದೂ ತಿಳಿದುಬರುವದು. |
10. | ನೀನಾದರೋ ನನ್ನ ಬೋಧನೆ ನಡತೆ ಉದ್ದೇಶ ನಂಬಿಕೆ ದೀರ್ಘ ಶಾಂತಿ ಪ್ರೀತಿ ಸೈರಣೆ ಇವುಗಳನೂ |
11. | ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬ ದನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು. |
12. | ಹೌದು, ಕ್ರಿಸ್ತ ಯೇಸುವಿನಲ್ಲಿ ಭಕ್ತಿ ಯುಳ್ಳವರಾಗಿ ಜೀವಿಸುವದಕ್ಕೆ ಮನಸ್ಸು ಮಾಡುವವ ರೆಲ್ಲರೂ ಹಿಂಸೆಗೊಳಗಾಗುವರು. |
13. | ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು. |
14. | ನೀನಾದರೋ ಕಲಿತು ದೃಢವಾಗಿ ನಂಬಿದವುಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬದನ್ನು ಆಲೋಚಿಸು. |
15. | ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ. |
16. | ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ. |
17. | ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು. |
← 2Timothy (3/4) → |