3John (1/1) |
1. | ಹಿರಿಯನಾದ ಸತ್ಯದಲ್ಲಿ ಬಹಳವಾಗಿ ಪ್ರೀತಿಸುವ ಗಾಯನಿಗೆ-- |
2. | ಪ್ರಿಯನೇ, ನಿನ್ನ ಆತ್ಮವು ಅಭಿವೃದಿ ಹೊಂದಿರುವ ಪ್ರಕಾರವೇ ಎಲ್ಲಾ ವಿಷಯಗಳಿಗಿಂತ ನೀನು ಸ್ವಸ್ಥನಾಗಿದ್ದು ಕ್ಷೇಮಹೊಂದಿ ಅಭಿವೃದ್ಧಿಯಾಗ ಬೇಕೆಂದು ನಾನು ಅಪೇಕ್ಷಿಸುತ್ತೇನೆ. |
3. | ಸಹೋದರರು ಬಂದಾಗ ನಿನ್ನಲ್ಲಿರುವ ಸತ್ಯವನ್ನು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು. |
4. | ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವ ದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ. |
5. | ಪ್ರಿಯನೇ, ಸಹೋದರರಿಗೂ ಪರಿಚಯವಿಲ್ಲದವ ರಿಗೂ ನೀನು ಮಾಡುವದನ್ನೆಲ್ಲಾ ನಂಬಿಗಸ್ತನಾಗಿ ಮಾಡುತ್ತೀ. |
6. | ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ಭಕ್ತಿಪೂರ್ವಕವಾಗಿ ಸಾಗ ಕಳುಹಿಸಿದರೆ ನೀನು ಒಳ್ಳೇದು ಮಾಡುತ್ತೀ. |
7. | ಯಾಕಂದರೆ ಅವರು ಆತನ ಹೆಸರಿನ ನಿಮಿತ್ತವಾಗಿ ಹೊರಟು ಹೋಗಿದ್ದಾರೆ; ಅನ್ಯಜನಗಳಿಂದ ಏನೂ ತೆಗೆದುಕೊಳ್ಳುವವರಲ್ಲ. |
8. | ಆದದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ. |
9. | ಸಭೆಗೆ ನಾನು ಬರೆದಿದ್ದೆನು; ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮನ್ನು ಅಂಗೀಕರಿಸುವದಿಲ್ಲ. |
10. | ಆದಕಾರಣ ನಾನು ಬಂದರೆ ಅವನು ಮಾಡುವ ಕೃತ್ಯಗಳನ್ನು ಜ್ಞಾಪಕ ಮಾಡುವೆನು. ಅವನು ಹರಟೆ ಕೊಚ್ಚುವವನಾಗಿ ನಮ ವಿಷಯದಲ್ಲಿ ಕೆಟ್ಟಕೆಟ್ಟ ಮಾತುಗಳನ್ನಾಡುತ್ತಾನೆ. ಇವೂ ಸಾಲದೆ ಸಹೋದರರನ್ನು ಸೇರಿಸಿಕೊಳ್ಳಬೇಕೆಂದಿ ರುವವರಿಗೆ ಅಡ್ಡಿ ಮಾಡುತ್ತಾ ತಾನೂ ಅವರನ್ನು ಸೇರಿಸಿಕೊಳ್ಳ |
11. | ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೇದನ್ನು ಅನುಸರಿಸು; ಒಳ್ಳೇದನ್ನು ಮಾಡುವವನು ದೇವರಿಗೆ ಸಂಬಂಧಪಟ್ಟವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ. |
12. | ದೇಮೇತ್ರಿ ಯನು ಎಲ್ಲರಿಂದಲೂ ಸತ್ಯದಿಂದಲೂ ಒಳ್ಳೇ ಸಾಕ್ಷಿ ಹೊಂದಿದ್ದಾನೆ. ಹೌದು, ನಾವು ಸಹ ಸಾಕ್ಷಿ ಹೇಳುವವ ರಾಗಿದ್ದೇವೆ, ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ. |
13. | ನಾನು ಬರೆಯತಕ್ಕ ಅನೇಕ ವಿಷಯಗಳಿದ್ದವು; ಆದರೆ ಮಸಿ ಲೇಖಣಿಗಳಿಂದ ನಿನಗೆ ಬರೆಯುವದಕ್ಕೆ ನನಗಿಷ್ಟವಿಲ್ಲ. |
14. | ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ; ಆಗ ಮುಖಾಮುಖಿಯಾಗಿ ನಾವು ಮಾತನಾಡುವೆವು. ನಿನಗೆ ಶಾಂತಿ ಇರಲಿ. ನಮ್ಮ ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಸ್ನೇಹಿತರನು ಹೆಸರ್ಹೆಸರಾಗಿ ವಂದಿಸು. |
3John (1/1) |