← Acts (22/28) → |
1. | ಜನರೇ, ಸಹೋದರರೇ, ತಂದೆಗಳೇ, ನಾನು ಈಗ ನಿಮಗೆ ಮಾಡುವ ನನ್ನ ಪ್ರತಿವಾದವನ್ನು ಕೇಳಿರಿ. |
2. | (ಅವನು ತಮ್ಮೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ್ದನ್ನು ಅವರು ಕೇಳಿ ಮತ್ತೂ ನಿಶ್ಶಬ್ದ ವಾದರು). ಆಗ ಅವನು-- |
3. | ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ |
4. | ನಾನು ಈ ಮಾರ್ಗವನ್ನು ಹಿಡಿದ ಗಂಡಸರನ್ನೂ ಹೆಂಗಸರನ್ನೂ ಬಂಧಿಸಿ ಸೆರೆಮನೆ ಯೊಳಗೆ ಹಾಕಿಸುತ್ತಾ ಅವರನ್ನು ಕೊಲ್ಲುವ ಮಟ್ಟಿಗೂ ಹಿಂಸಿಸಿದೆನು. |
5. | ಇದಕ್ಕೆ ಮಹಾಯಾಜಕನೂ ಹಿರೀಸಭೆ ಯವರೆಲ್ಲರೂ ನನಗೆ ಸಾಕ್ಷಿಗಳಾಗಿದ್ದಾರೆ. ಇವರಿಂದಲೇ ಅಲ್ಲಿದ್ದ ಸಹೋದರರಿಗೆ ನಾನು ಪತ್ರಗಳನ್ನು ಪಡೆದು ದಮಸ್ಕದಲ್ಲಿದ್ದವರನ್ನು ಬಂಧಿಸಿ ಯೆರೂಸಲೇಮಿಗೆ ತಂದು ಶಿಕ್ಷಿಸುವದಕ್ಕಾಗಿ ನಾನು ಅಲ್ಲಿಗೆ ಹೋದೆನು. |
6. | ತರುವಾಯ ನಾನು ಪ್ರಯಾಣಮಾಡುತ್ತಾ ಸುಮಾರು ಮಧ್ಯಾಹ್ನದ ಸಮಯದಲ್ಲಿ ದಮಸ್ಕದ ಹತ್ತಿರ ಬಂದಾಗ ಫಕ್ಕನೆ ಆಕಾಶದಿಂದ ಒಂದು ದೊಡ್ಡ ಬೆಳಕು ನನ್ನ ಸುತ್ತಲೂ ಹೊಳೆಯಿತು. |
7. | ಆಗ ನಾನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸಿಸುತ್ತೀ? ಎಂದು ಹೇಳುವ ಧ್ವನಿಯನ್ನು ಕೇಳಿದೆನು. |
8. | ಅದಕ್ಕೆ ನಾನು ಪ್ರತ್ಯುತ್ತರವಾಗಿ--ಕರ್ತನೇ, ನೀನು ಯಾರು ಎಂದು ಕೇಳಿದಾಗ ಆತನು--ನೀನು ಹಿಂಸಿಸುತ್ತಿರುವ ನಜರೇತಿನ ಯೇಸುವೇ ನಾನು ಎಂದು ನನಗೆ ಹೇಳಿದನು. |
9. | ಆಗ ನನ್ನೊಂದಿಗಿದ್ದವರು ನಿಜವಾಗಿಯೂ ಆ ಬೆಳಕನ್ನು ನೋಡಿ ಭಯಪಟ್ಟರು; ಆದರೆ ನನ್ನೊಂದಿಗೆ ಮಾತನಾಡಿದ ಆತನ ಧ್ವನಿಯನ್ನು ಅವರು ಕೇಳಲಿಲ್ಲ. |
10. | ನಾನು--ಕರ್ತನೇ, ನಾನೇನು ಮಾಡಬೇಕು ಎಂದು ಕೇಳಿದೆನು; ಅದಕ್ಕೆ ಕರ್ತನು ನನಗೆ--ನೀನೆದ್ದು ದಮಸ್ಕದೊಳಕ್ಕೆ ಹೋಗು; ನಿನಗೆ ನೇಮಿಸಲ್ಪ ಟ್ಟವುಗಳೆಲ್ಲವು ಅಲ್ಲಿ ನಿನಗೆ ತಿಳಿಸಲ್ಪಡುವವು ಎಂದು ಹೇಳಿದನು. |
11. | ಆ ಬೆಳಕಿನ ಪ್ರಭಾವದ ನಿಮಿತ್ತವಾಗಿ ನನ್ನ ಕಣ್ಣು ಕಾಣಲಾರದೆ ಇದ್ದಾಗ ನನ್ನ ಜೊತೆಯಲ್ಲಿ ದ್ದವರು ನನ್ನ ಕೈ ಹಿಡಿದು ಕರಕೊಂಡು ಹೋದದ್ದರಿಂದ ನಾನು ದಮಸ್ಕಕ್ಕೆ ಬಂದೆನು. |
12. | ಅಲ್ಲಿ ವಾಸಿಸುತ್ತಿದ್ದ ಅನನೀಯ ಎಂಬ ಒಬ್ಬ ಮನುಷ್ಯನು ಎಲ್ಲಾ ಯೆಹೂದ್ಯರಿಂದ ಒಳ್ಳೆಯವನೆಂದು ಸಾಕ್ಷಿಪಡೆದು ನ್ಯಾಯಪ್ರಮಾಣದ ಪ್ರಕಾರ ಭಕ್ತಿಯುಳ್ಳವನಾಗಿದ್ದನು. |
13. | ಅವನು ನನ್ನ ಬಳಿಗೆ ಬಂದು ನಿಂತು--ಸಹೋದರನಾದ ಸೌಲನೇ, ನಿನ್ನ ದೃಷ್ಟಿಯನ್ನು ಹೊಂದು ಎಂದು ಹೇಳಿದನು. ಅದೇ ಗಳಿಗೆಯಲ್ಲಿ ನಾನು ಅವನನ್ನು ನೋಡಿದೆನು. |
14. | ಆಗ ಅವನು--ನಮ್ಮ ಪಿತೃಗಳ ದೇವರ ಚಿತ್ತವನ್ನು ನೀನು ತಿಳುಕೊಳ್ಳು ವಂತೆಯೂ ಆ ನೀತಿವಂತನನ್ನು ನೋಡುವಂತೆಯೂ ಆತನ ಬಾಯಿಂದ ಬಂದ ಸ್ವರವನ್ನು ಕೇಳುವಂತೆಯೂ ಆತನು ನಿನ್ನನ್ನು ಆರಿಸಿಕೊಂಡಿದ್ದಾನೆ. |
15. | ನೀನು ನೋಡಿ ಕೇಳಿದವುಗಳ ವಿಷಯವಾಗಿ ಎಲ್ಲಾ ಮನುಷ್ಯ ರಿಗೆ ಆತನ ಸಾಕ್ಷಿಯಾಗಿರುವಿ. |
16. | ಈಗ ನೀನು ತಡಮಾಡುವದು ಯಾಕೆ? ಎದ್ದು ಬಾಪ್ತಿಸ್ಮ ಮಾಡಿಸಿ ಕೊಂಡು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ ನಿನ್ನ ಪಾಪಗಳನ್ನು ತೊಳೆದುಕೋ ಎಂದು ಹೇಳಿದನು. |
17. | ಇದಾದ ಮೇಲೆ ನಾನು ಯೆರೂಸಲೇಮಿಗೆ ತಿರಿಗಿ ಬಂದು ದೇವಾಲಯದಲ್ಲಿ ಪ್ರಾರ್ಥಿಸುತ್ತಾ ಪರವಶ ನಾಗಿದ್ದೆನು; ಆಗ-- |
18. | ನೀನು ತ್ವರೆಪಟ್ಟು ಯೆರೂಸ ಲೇಮಿನಿಂದ ಬೇಗನೆ ಹೊರಟು ಹೋಗು; ನನ್ನ ವಿಷಯವಾದ ಸಾಕ್ಷಿಯನ್ನು ಅವರು ಅಂಗೀಕರಿಸುವದಿಲ್ಲ ಎಂದು ನನಗೆ ಹೇಳಿದಾತನನ್ನು ನಾನು ಕಂಡೆನು. |
19. | ಅದಕ್ಕೆ ನಾನು--ಕರ್ತನೇ, ಪ್ರತಿಯೊಂದು ಸಭಾ ಮಂದಿರದಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸಿ ಹೊಡೆದೆನೆಂದು ಅವರಿಗೆ ತಿಳಿದದೆ; |
20. | ಹತಸಾಕ್ಷಿಯಾದ ಸ್ತೆಫನನ ರಕ್ತವು ಸುರಿಯಲ್ಪಟ್ಟಿದ್ದಾಗ ನಾನು ಸಹ ಹತ್ತಿರ ನಿಂತು ಅವನ ಸಾವಿಗೆ ಒಪ್ಪಿದವನಾಗಿ ಅವನನ್ನು ಕೊಂದವರ ವಸ್ತ್ರವನ್ನು ಕಾಯುತ್ತಿದ್ದೆನು ಎಂದು ಹೇಳಿದೆನು. |
21. | ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು. |
22. | ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು. |
23. | ಅವರು ಕೂಗಾಡಿ ತಮ್ಮ ವಸ್ತ್ರಗಳನ್ನು ಕಿತ್ತುಹಾಕುತ್ತಾ ಧೂಳನ್ನು ಗಾಳಿಗೆ ತೂರುತ್ತಿದ್ದಾಗ |
24. | ಯಾವದಕ್ಕಾಗಿ ಅವರು ಅವನಿಗೆ ವಿರೋಧವಾಗಿ ಕೂಗಿಕೊಂಡರೆಂಬದನ್ನು ಮುಖ್ಯ ನಾಯಕನು ತಿಳುಕೊಳ್ಳುವಂತೆ ಅವನನ್ನು ಕೋಟೆ ಯೊಳಕ್ಕೆ ತರಬೇಕೆಂದು ಆಜ್ಞಾಪಿಸಿ ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಅಪ್ಪಣೆಕೊಟ್ಟನು; |
25. | ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು. |
26. | ಆಗ ಶತಾಧಿಪತಿಯು ಅದನ್ನು ಕೇಳಿ ಅಲ್ಲಿಂದ ಹೋಗಿ ಮುಖ್ಯ ನಾಯಕನಿಗೆ--ನೀನು ಮಾಡುವದರಲ್ಲಿ ಎಚ್ಚರಿಕೆಯಾಗಿರು; ಈ ಮನುಷ್ಯನು ರೋಮ್‌ನವನು ಎಂದು ಹೇಳಿದನು. |
27. | ಆಗ ಮುಖ್ಯ ನಾಯಕನು ಬಂದು ಅವನಿಗೆ--ನೀನು ರೋಮ್‌ನವನೋ? ನನಗೆ ಹೇಳು ಎಂದು ಕೇಳಿದ್ದಕ್ಕೆ ಅವನು--ಹೌದು ಅಂದನು. |
28. | ಅದಕ್ಕೆ ಮುಖ್ಯ ನಾಯಕನು ಪ್ರತ್ಯುತ್ತರವಾಗಿ--ನಾನು ಬಹಳ ಹಣ ಕೊಟ್ಟು ಪೌರತ್ವವನ್ನು ಪಡೆದುಕೊಂಡಿರುವೆನು ಅಂದನು. ಅದಕ್ಕೆ ಪೌಲನು--ನಾನಾದರೋ ಹುಟ್ಟು ಪೌರತ್ವನು ಎಂದು ಹೇಳಿದನು. |
29. | ಆಗ ಅವನನ್ನು ವಿಚಾರಿಸಬೇಕೆಂದಿದ್ದವರು ಕೂಡಲೆ ಅವನನ್ನು ಬಿಟ್ಟು ಹೋದರು; ಇದಲ್ಲದೆ ಆ ಮುಖ್ಯನಾಯಕನು ಸಹ ತಾನು ಬಂಧಿಸಿದವನು ರೋಮ್‌ನವನೆಂದು ತಿಳಿದು ಭಯಪಟ್ಟನು. |
30. | ಅವನ ಮೇಲೆ ಯೆಹೂದ್ಯರು ತಪ್ಪು ಹೊರಿಸಿದ ನಿಜವಾದ ವಿಷಯವನ್ನು ತಿಳಿಯಬೇಕೆಂದು ಅಪೇಕ್ಷಿಸಿ ಮುಖ್ಯ ನಾಯಕನು ಮರುದಿನ ಅವನ ಬೇಡಿಗಳನ್ನು ಬಿಚ್ಚಿ ಪ್ರಧಾನಯಾಜಕರೂ ಆಲೋಚನಾ ಸಭೆಯವ ರೆಲ್ಲರೂ ಸೇರಿಬರಬೇಕೆಂದು ಅಪ್ಪಣೆ ಕೊಟ್ಟ ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದ |
← Acts (22/28) → |