← Acts (28/28) |
1. | ಅವರು ಪಾರಾದಾಗ ಆ ದ್ವೀಪದ ಹೆಸರು ಮೆಲೀತೆ ಎಂದು ತಿಳಿದು ಕೊಂಡರು. |
2. | ಅಲ್ಲಿಯ ಅನಾಗರಿಕ ಜನರು ನಮಗೆ ತೋರಿಸಿದ ದಯೆಯು ಅಪಾರವಾಗಿತ್ತು; ಆ ಸಮಯ ದಲ್ಲಿ ಮಳೆಯೂ ಚಳಿಯೂ ಇದ್ದದರಿಂದ ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು. |
3. | ಪೌಲನು ಕಟ್ಟಿಗೆಯ ಹೊರೆಯನ್ನು ಕೂಡಿಸಿ ಬೆಂಕಿಯ ಮೇಲೆ ಹಾಕಿದಾಗ ಆ ಕಾವಿನ ದೆಸೆಯಿಂದ ಒಂದು ವಿಷ ಸರ್ಪವು ಹೊರಗೆ ಬಂದು ಅವನ ಕೈಯನ್ನು ಬಿಗಿಯಾಗಿ ಸುತ್ತಿಕೊಂಡಿತು. |
4. | ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು. |
5. | ಆಗ ಅವನು ಆ ಜಂತನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಯಾವ ಅಪಾಯವೂ ಅವನಿಗೆ ಆಗಲಿಲ್ಲ. |
6. | ಹೇಗಿದ್ದರೂ ಅವನು ಬಾತುಹೋದಾನು ಇಲ್ಲವೆ ಅಕಸ್ಮಾತ್ತಾಗಿ ಸತ್ತುಬಿದ್ದಾನು ಎಂದು ಅವರು ನೋಡಿಕೊಂಡೇ ಇದ್ದರು; ಬಹಳ ಹೊತ್ತಿನವರೆಗೂ ಅವರು ನೋಡಿದ ಮೇಲೆ ಯಾವ ಅಪಾಯವೂ ಅವನಿಗೆ ಬಾರದೆ ಇರುವದನ್ನು ಕಂಡು ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿಕೊಂಡು ಅವನೊಬ್ಬ ದೇವರೆಂ |
7. | ಅದೇ ಸ್ಥಳದಲ್ಲಿ ಪೊಪ್ಲಿಯ ಎಂಬ ಆ ದ್ವೀಪದ ಮುಖ್ಯಸ್ಥನಿಗೆ ಆಸ್ತಿ ಇತ್ತು; ಅವನು ನಮ್ಮನ್ನು ಸೇರಿಸಿಕೊಂಡು ಮೂರು ದಿವಸ ಆದರದಿಂದ ಸತ್ಕರಿಸಿ ದನು. |
8. | ಇದಾದ ಮೇಲೆ ಪೊಪ್ಲಿಯನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಬಿದ್ದುಕೊಂಡಿ ದ್ದಾಗ ಪೌಲನು ಒಳಗೆ ಪ್ರವೇಶಿಸಿ ಪ್ರಾರ್ಥನೆ ಮಾಡಿ ಅವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ಸ್ವಸಮಾಡಿದನು. |
9. | ಇದಾದ ಮೇಲೆ ಆ ದ್ವೀಪದಲ್ಲಿ ರೋಗಗಳಿದ್ದ ಬೇರೆಯವರೂ ಬಂದು ಸ್ವಸ್ಥರಾದರು. |
10. | ಅವರು ಸಹ ನಮ್ಮನ್ನು ಬಹಳವಾಗಿ ಗೌರವಿಸಿ ಸನ್ಮಾನಿಸಿದರು; ನಾವು ಹೊರಟಾಗ ನಮಗೆ ಅವಶ್ಯ ವಾದವುಗಳನ್ನು ತಂದು ಹಡಗಿನಲ್ಲಿಟ್ಟರು. |
11. | ಮೂರು ತಿಂಗಳಾದ ಮೇಲೆ ಆ ದ್ವೀಪದಲ್ಲಿ ಶೀತಕಾಲ ಕಳೆದ ನಂತರ ಅಶ್ವಿನೀ ದೇವತೆಯ ಚಿನ್ಹೆ ಇದ್ದ ಅಲೆಕ್ಸಾಂದ್ರಿಯದ ಹಡಗನ್ನು ಹತ್ತಿ ನಾವು ಹೊರಟೆವು. |
12. | ತರುವಾಯ ಸುರಕೂಸಿಗೆ ಸೇರಿ ನಾವು ಅಲ್ಲಿ ಮೂರು ದಿವಸಗಳು ಇದ್ದೆವು. |
13. | ಅಲ್ಲಿಂದ ನಾವು ಸುತ್ತಿಕೊಂಡು ರೇಗಿಯಕ್ಕೆ ಬಂದೆವು; ಒಂದು ದಿವಸವಾದ ಮೇಲೆ ದಕ್ಷಿಣದ ಗಾಳಿಯು ಬೀಸಿದಾಗ ಮರುದಿನ ನಾವು ಪೊತಿಯೋಲಕ್ಕೆ ಸೇರಿದೆವು. |
14. | ಅಲ್ಲಿ ನಾವು ಸಹೋದರರನ್ನು ನೋಡಿದಾಗ ಅವರು ನಮ್ಮನ್ನು ಏಳು ದಿವಸ ತಮ್ಮೊಂದಿಗೆ ಇರಬೇಕೆಂದು ಬೇಡಿಕೊಂಡರು; ಹೀಗೆ ನಾವು ರೋಮ್ ಕಡೆಗೆ ಹೊರಟೆವು. |
15. | ಅಲ್ಲಿದ್ದ ಸಹೋದರರು ನಮ್ಮ ವಿಷಯ ವಾಗಿ ಕೇಳಿ ನಮ್ಮನ್ನು ಸಂಧಿಸುವದಕ್ಕಾಗಿ ಅಪ್ಪಿಯ ಪೇಟೆ ಮತ್ತು ತ್ರಿಛತ್ರದ ವರೆಗೆ ಬಂದಾಗ ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರಮಾಡಿ ಧೈರ್ಯ ಗೊಂಡನು. |
16. | ನಾವು ರೋಮ್ಗೆ ಬಂದಾಗ ಕಾವಲುಗಾರರ ನಾಯಕನಿಗೆ ಶತಾಧಿಪತಿಯು ಸೆರೆಯವರನ್ನು ಒಪ್ಪಿಸಿ ದನು; ಆದರೆ ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪೌಲನು ಪ್ರತ್ಯೇಕವಾಗಿ ಇರಬಹುದೆಂದು ಅಪ್ಪಣೆ ಹೊಂದಿದನು. |
17. | ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್ನವರ ಕೆ |
18. | ಅವರು ನನ್ನನ್ನು ಪರೀಕ್ಷಿಸಿ ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿ ದ್ದರು. |
19. | ಆದರೆ ಯೆಹೂದ್ಯರು ಅದಕ್ಕೆ ವಿರೋಧವಾಗಿ ಮಾತನಾಡಿದಾಗ ಕೈಸರನಿಗೆ ಹೇಳಿಕೊಳ್ಳುವಂತೆ ನಾನು ಒತ್ತಾಯ ಮಾಡಲ್ಪಟ್ಟೆನು; ಆದರೆ ನನ್ನ ಸ್ವದೇಶದವರ ಮೇಲೆ ತಪ್ಪು ಹೊರಿಸುವದಕ್ಕಾಗಿ ಅಲ್ಲ. |
20. | ಈ ಕಾರಣ ದಿಂದಲೇ ನಿಮ್ಮನ್ನು ನೋಡುವದಕ್ಕೂ ನಿಮ್ಮೊಂದಿಗೆ ಮಾತನಾಡುವದಕ್ಕೂ ನಾನು ನಿಮ್ಮನ್ನು ಕರೆಯಿಸಿದೆನು; ಇಸ್ರಾಯೇಲ್ಯರ ನಿರೀಕ್ಷೆಯ ನಿಮಿತ್ತವಾಗಿ ನಾನು ಈ ಸರಪಣಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು. |
21. | ಆಗ ಅವರು ಅವನಿಗೆ--ನಿನ್ನ ವಿಷಯವಾಗಿ ಯೂದಾಯದಿಂದ ನಮಗೆ ಯಾವ ಪತ್ರಗಳು ಬಂದಿಲ್ಲ, ಇಲ್ಲವೆ ಇಲ್ಲಿ ಬಂದ ಸಹೋದರರಲ್ಲಿ ಯಾವನೂ ನಿನ್ನ ವಿಷಯವಾಗಿ ಕೆಟ್ಟದ್ದೇನೂ ತೋರಿಸ ಲಿಲ್ಲ ಮತ್ತು ಹೇಳಲಿಲ್ಲ. |
22. | ಆದರೆ ನಿನ್ನ ಅಭಿಪ್ರಾಯ ವೇನೆಂದು ನಿನ್ನಿಂದಲೇ ಕೇಳುವದಕ್ಕೆ ನಾವು ಅಪೇಕ್ಷಿಸು ತ್ತೇವೆ; ಎಲ್ಲಾ ಕಡೆಯಲ್ಲಿಯೂ ಈ ಪಂಗಡದ ವಿಷಯ ದಲ್ಲಿ ಜನರು ವಿರುದ್ಧವಾಗಿ ಮಾತನಾಡುತ್ತಾರೆಂಬದು ನಮಗೆ ಗೊತ್ತದೆ ಎಂದು ಹೇಳಿದರು. |
23. | ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು. |
24. | ಅವನು ಹೇಳಿದ ಮಾತುಗಳನ್ನು ಕೆಲವರು ನಂಬಿ ದರು; ಆದರೆ ಕೆಲವರು ನಂಬದೆ ಹೋದರು. |
25. | ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ-- |
26. | ನೀವು ಕೇಳಿದರೂ ಕೇಳಿ ಗ್ರಹಿಸುವದಿಲ್ಲ; ನೋಡಿದರೂ ನೋಡಿ ಕಾಣುವದಿಲ್ಲ; |
27. | ಯಾಕಂದರೆ ಅವರು ತಮ್ಮ ಕಣ್ಣುಗಳಿಂದ ನೋಡಿ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದಂತೆಯೂ ನಾನು ಅವರನ್ನು ಸ್ವಸ್ಥ ಮಾಡ ದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಕೇಳುವದಕ್ಕೆ ಅವರ ಕಿವಿಗಳು ಮಂದವಾದವು; ಅವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ |
28. | ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು. |
29. | ಅವನು ಈ ಮಾತುಗಳ ನ್ನಾಡಿದಾಗ ಯೆಹೂದ್ಯರು ಹೊರಟುಹೊಗಿ ತಮ್ಮಲ್ಲಿ ತಾವು ಬಹಳವಾಗಿ ತರ್ಕಿಸಿಕೊಂಡರು. |
30. | ಪೌಲನು ತನ್ನ ಸ್ವಂತ ಬಾಡಿಗೆಯ ಮನೆಯಲ್ಲಿ ಪೂರಾ ಎರಡು ವರಷವಿದ್ದು ತನ್ನ ಬಳಿಗೆ ಬರುವವರ ನ್ನೆಲ್ಲಾ ಸೇರಿಸಿಕೊಂಡನು. |
31. | ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ. |
← Acts (28/28) |