← Acts (7/28) → |
1. | ಆಗ ಮಹಾಯಾಜಕನು--ಈ ವಿಷಯ ಗಳು ಹೌದೋ ಎಂದು ಕೇಳಿದನು. |
2. | ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ-- |
3. | ನೀನು ನಿನ್ನ ದೇಶವನ್ನೂ ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ನಿನಗೆ ತೋರಿ ಸುವ ದೇಶಕ್ಕೆ ಬರಬೇಕು ಎಂದು ಹೇಳಿದನು. |
4. | ಆಗ ಅಬ್ರಹಾಮನು ಕಲ್ದೀಯರ ದೇಶದೊಳಗಿಂದ ಬಂದು ಖಾರಾನಿನಲ್ಲಿ ವಾಸಮಾಡಿದನು; ತನ್ನ ತಂದೆಯು ಸತ್ತಮೇಲೆ ಅವನು ಅಲ್ಲಿಂದ ಹೊರಟು ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬಂದನು. |
5. | ಅಲ್ಲಿ ದೇವರು ಅವನಿಗೆ ಕಾಲಿಡುವಷ್ಟು ಸ್ವಾಸ್ತ್ಯವನ್ನು ಕೊಡ ಲಿಲ್ಲ; ಆದಾಗ್ಯೂ ಅವನಿಗೆ ಇನ್ನೂ ಮಗನು ಇಲ್ಲದಿರು ವಾಗ ಆ ದೇಶವನ್ನು ಅವನಿಗೂ ತರುವಾಯ ಅವನ ಸಂತತಿಗೂ ಸ್ವಾಸ್ಥ್ಯವಾಗಿ ಕೊಡುತ್ತೇನೆಂದು ವಾಗ್ದಾನ ಮಾಡಿದನು. |
6. | ಇದಲ್ಲದೆ ದೇವರು ಈ ರೀತಿ ಹೇಳಿ ದನು--ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿ ಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸ ರನ್ನಾಗಿ ಮಾಡಿಕೊಂಡು ನಾನೂರು ವರುಷಗಳ ತನಕ ಕ್ರೂರವಾಗಿ ನಡಿಸುವರು. |
7. | ಅವರು ದಾಸರಾಗಿ ಸೇವಿ ಸುವ ಜನಾಂಗಕ್ಕೆ ನಾನೇ ನ್ಯಾಯತೀರಿಸುವೆನು ಎಂದು ದೇವರು ಹೇಳಿದನು. ಆಮೇಲೆ ಅವರು ಹೊರಟು ಬಂದು ಈ ಸ್ಥಳದಲ್ಲಿ ನನ್ನನ್ನು ಸೇವಿಸುವರು ಎಂಬದೇ. |
8. | ಇದಲ್ಲದೆ ದೇವರು ಸುನ್ನತಿ ಎಂಬ ಒಡಂಬಡಿಕೆಯನ್ನು ಅವನಿಗೆ ಕೊಟ್ಟನು. ಹೀಗೆ ಅಬ್ರಹಾಮನಿಂದ ಇಸಾ ಕನು ಹುಟ್ಟಿದಾಗ ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿ ಮಾಡಿದನು. ಇಸಾಕನಿಂದ ಯಾಕೋಬನು ಹುಟ್ಟಿದನು. ಯಾಕೋಬನಿಂದ ಹನ್ನೆರಡು ಮಂದಿ ಮೂಲಪಿತೃಗಳು ಹುಟ್ಟಿದರು. |
9. | ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು |
10. | ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು. |
11. | ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು; ಆಗ ನಮ್ಮ ಪಿತೃ ಗಳಿಗೆ ಆಹಾರಕ್ಕೇನೂ ಸಿಕ್ಕಲಿಲ್ಲ. |
12. | ಆದರೆ ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಯಾಕೋ ಬನು ಕೇಳಿ ನಮ್ಮ ಪಿತೃಗಳನ್ನು ಮೊದಲನೆಯ ಸಾರಿ ಅಲ್ಲಿಗೆ ಕಳುಹಿಸಿದನು. |
13. | ಎರಡನೆಯ ಸಾರಿ ಯೋಸೇ ಫನು ತನ್ನ ಸಹೋದರರಿಗೆ ತನ್ನನ್ನು ತೋರ್ಪಡಿಸಿ ಕೊಂಡನು; ಆಗ ಯೋಸೇಫನ ವಂಶವು ಫರೋಹನಿಗೆ ತಿಳಿಯಬಂತು. |
14. | ಆಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ತನ್ನ ಎಲ್ಲಾ ಬಂಧು ಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಕರೆ ಯಿಸಿಕೊಂಡನು. |
15. | ಹೀಗೆ ಯಾಕೋಬನು ಐಗುಪ್ತ ದೇಶಕ್ಕೆ ಇಳಿದು ಹೋದನು. ಅಲ್ಲಿ ಅವನೂ ನಮ್ಮ ಪಿತೃಗಳೂ ಮೃತಿಹೊಂದಿದರು. |
16. | ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ಅಬ್ರಹಾಮನು ಹಣಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು. |
17. | ಆದರೆ ದೇವರು ಅಬ್ರಹಾಮನಿಗೆ ಆಣೆಯಿಟ್ಟು ವಾಗ್ದಾನ ಮಾಡಿದ್ದ ಕಾಲವು ಹತ್ತಿರಕ್ಕೆ ಬರುತ್ತಿರುವಾಗ |
18. | ಯೋಸೇಫನನ್ನು ಅರಿಯದ ಬೇರೊಬ್ಬ ಅರಸನು ಆಳಿಕೆಗೆ ಬರುವ ವರೆಗೆ ಆ ಜನರು ಐಗುಪ್ತ ದೇಶದಲ್ಲಿ ಅಭಿವೃದ್ಧಿಯಾಗಿ ಹೆಚ್ಚಿದರು. |
19. | ಈ ಅರಸನೇ ನಮ್ಮ ಜನರಲ್ಲಿ ಕುಯುಕ್ತಿ ಮಾಡಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ ನಮ್ಮ ಪಿತೃಗಳನ್ನು ಕ್ರೂರವಾಗಿ ನಡಿಸಿದನು. |
20. | ಆ ಸಮಯ ದಲ್ಲೇ ಹುಟ್ಟಿದ ಮೋಶೆಯು ದಿವ್ಯ ಸುಂದರನಾಗಿದ್ದನು; ಅವನು ತನ್ನ ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು. |
21. | ಆಮೇಲೆ ಅವನನ್ನು ಹೊರಗೆ ಹಾಕಿ ದಾಗ ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು. |
22. | ಮೋಶೆಯು ಐಗುಪ್ತದೇಶದವರ ಸರ್ವಜ್ಞಾನವನ್ನು ಕಲಿತವನಾಗಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥ ನಾದನು. |
23. | ಅವನಿಗೆ ನಾಲ್ವತ್ತು ವರುಷ ವಯಸ್ಸು ತುಂಬಿದಾಗ ಹೋಗಿ ತನ್ನ ಸಹೋದರರಾದ ಇಸ್ರಾ ಯೇಲ್ಯರನ್ನು ನೋಡಬೇಕೆಂಬ ಆಶೆಯು ಅವನ ಹೃದ ಯದಲ್ಲಿ ಹುಟ್ಟಿತು. |
24. | ಅವರಲ್ಲಿ ಒಬ್ಬನಿಗೆ ಅನ್ಯಾಯ ವಾಗುವದನ್ನು ಅವನು ನೋಡಿ ಅವನಿಗೆ ಆಶ್ರಯ ಕೊಟ್ಟು ಐಗುಪ್ತ್ಯನನ್ನು ಹೊಡೆದು ಹಾಕಿ ಪೀಡಿಸಲ್ಪಡು ತ್ತಿದ್ದವನಿಗಾಗಿ ಮುಯ್ಯಿ ತೀರಿಸಿದನು. |
25. | ಯಾಕಂದರೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಮಾಡುತ್ತಾ ನೆಂಬದು ತನ್ನ ಸಹೋದರರಿಗೆ ತಿಳಿದು ಬರುವದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳುಕೊಳ್ಳಲಿಲ್ಲ. |
26. | ಮರುದಿನ ತಾವು ಹೊಡೆದಾಡಿ ಕೊಳ್ಳುತ್ತಿರುವಾಗ ಅವನು ಕಾಣಿಸಿಕೊಂಡು--ಅಯ್ಯಗಳಿರಾ, ನೀವು ಸಹೋದರರಲ್ಲವೇ; ನೀವೇಕೆ ಒಬ್ಬರಿಗೊಬ್ಬರು ಅನ್ಯಾ ಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಬೇಕೆಂದಿದ್ದನು. |
27. | ಆದರೆ ತನ್ನ ನೆರೆಯವನಿಗೆ ಅನ್ಯಾಯಮಾಡುತ್ತಿದ್ದವನು--ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು? |
28. | ನಿನ್ನೆ ಆ ಐಗುಪ್ತ್ಯನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿದ್ದೀಯೋ ಎಂದು ಹೇಳಿ ಅವನನ್ನು ನೂಕಿಬಿಟ್ಟನು. |
29. | ಈ ಮಾತನ್ನು ಕೇಳಿ ಮೋಶೆಯು ಓಡಿಹೋಗಿ ಮಿದ್ಯಾನ್ ದೇಶದಲ್ಲಿ ಪ್ರವಾಸಿಯಾದನು. ಅಲ್ಲಿ ಅವನಿಂದ ಇಬ್ಬರು ಕುಮಾರರು ಹುಟ್ಟಿದರು. |
30. | ನಾಲ್ವತ್ತು ವರುಷ ತುಂಬಿದ ಮೇಲೆ ಸೀನಾಯಿ ಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು. |
31. | ಮೋಶೆಯು ಅದನ್ನು ಕಂಡು ಆ ನೋಟಕ್ಕೆ ಆಶ್ಚರ್ಯಪಟ್ಟು ನೋಡಬೇಕೆಂದು ಹತ್ತಿರಕ್ಕೆ ಬಂದನು. |
32. | ಆಗ--ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ಹೇಳುವ ಕರ್ತನ ಧ್ವನಿಯು ಅವನಿಗಾಯಿತು. ಆಗ ಮೋಶೆಯು ನಡುಗುತ್ತಾ ಅದನ್ನು ನೋಡುವದಕ್ಕೆ ಧೈರ್ಯವಿಲ್ಲ ದವನಾದನು. |
33. | ಕರ್ತನು ಅವನಿಗೆ--ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿ. |
34. | ನಾನು ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವದಕ್ಕೆ ಇಳಿದು ಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತ ದೇಶಕ್ಕೆ ಕಳುಹಿಸುತ್ತೇನೆ, ಬಾ ಎಂದು ಹೇಳಿದನು. |
35. | ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು. |
36. | ಅವನು ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರ ದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದ ಮೇಲೆ ಅವರನ್ನು ನಡೆಸಿಕೊಂಡು ಬಂದನು. |
37. | ನಿಮ್ಮ ದೇವರಾದ ಕರ್ತನು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಒಬ್ಬ ಪ್ರವಾದಿಯನ್ನು ನಿಮ ಗಾಗಿ ಎಬ್ಬಿಸುವನು; ನೀವು ಆತನ ಮಾತಿಗೆ ಕಿವಿಗೊಡ ಬೇಕೆಂದು ಇಸ್ರಾಯೇಲ್ ಜನರಿಗೆ ಹೇಳಿದ ಆ ಮೋಶೆಯು ಇವನೇ. |
38. | ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು. |
39. | ಆದರೆ ನಮ ಪಿತೃಗಳು ಅವನ ಮಾತುಗಳಿಗೆ ವಿಧೇಯರಾಗದೆ ಅವನನ್ನು ತಳ್ಳಿಬಿಟ್ಟು ತಮ್ಮ ಹೃದಯಗಳಲ್ಲಿ ಹಿಂದಕ್ಕೆ ಐಗುಪ್ತದ ಕಡೆಗೆ ತಿರುಗಿಕೊಂಡು |
40. | ಅವರು ಆರೋನ ನಿಗೆ--ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ; ಆದದರಿಂದ ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ದೇವರು ಗಳನ್ನು ನಮಗೆ ಮಾಡಿಕೊಡು ಎಂದು ಹೇಳಿದರು. |
41. | ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನರ್ಪಿಸಿ ತಮ್ಮ ಸ್ವಂತ ಕೈಗಳಿಂದ ಮಾಡಿದ ಕೆಲಸಗಳಲ್ಲಿ ಉಲ್ಲಾಸಪಟ್ಟರು. |
42. | ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರಗಣ ವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ-- ಓ ಇಸ್ರಾಯೇಲ್ ಮನೆತನದವರೇ, ನೀವು ಅರಣ್ಯದಲ್ಲಿ ನಾಲ್ವತ್ತು ವರುಷ ಪ್ರಾಣಿಗಳನ್ನು ಕೊಂದು ಬಲಿಗಳನ್ನು ನನಗೆ ಅರ್ಪಿಸುತ್ತಿದ್ದಿರೆ |
43. | ಹೌದು, ನೀವು ಪೂಜಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನು ರೊಂಫಾ ದೇವತೆಯ ನಕ್ಷತ್ರವನ್ನೂ ಹೊತ್ತುಕೊಂಡು ಹೋದಿರಿ. ಆದದರಿಂದ ನಾನು ನಿಮ್ಮನ್ನು ಬಾಬೆಲಿನ ಆಚೆಗೆ ಅಟ್ಟಿಬಿಡುವೆನು ಎಂಬದು. |
44. | ಸಾಕ್ಷೀಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದಾತನು ಅವನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸ ಬೇಕೆಂದು ನೇಮಿಸಿದ್ದನು. |
45. | ತರುವಾಯ ಬಂದ ನಮ್ಮ ಪಿತೃಗಳು ಸಹ ತಮ್ಮ ಮುಂದೆ ದೇವರು ಹೊರಡಿಸಿದ ಅನ್ಯಜನಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಂಡಾಗ ಯೆಹೋಶುವನ ಕೂಡ ಆ ಗುಡಾರವನ್ನು ತಂದರು. ಅದು ದಾವೀದನ ಕಾಲದ ವರೆಗೂ ಅಲ್ಲೇ ಇತ್ತು. |
46. | ದಾವೀದನು ದೇವರ ಸನ್ನಿಧಾನದಲ್ಲಿ ದಯೆ ಹೊಂದಿ ಯಾಕೋಬನ ದೇವರಿಗೋಸ್ಕರ ಆಲಯ ವನ್ನು ಕಟ್ಟಬೇಕೆಂದು ಅಪೇಕ್ಷಿಸಿದನು. |
47. | ಆದರೆ ಸೊಲೊಮೋನನು ಆತನಿಗೋಸ್ಕರ ಮನೆಯನ್ನು ಕಟ್ಟಿಸಿದನು. |
48. | ಆದರೂ ಮಹೋನ್ನತನು ಕೈಯಿಂದ ಕಟ್ಟಿದ ಆಲಯಗಳಲ್ಲಿ ವಾಸಮಾಡುವಾತನಲ್ಲ. ಯಾಕಂದರೆ-- |
49. | ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಪೀಠ, ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ಇಲ್ಲವೆ ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವದು? |
50. | ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತಲ್ಲಾ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಪ್ರವಾದಿಯು ನುಡಿದಿದ್ದಾನೆ. |
51. | ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ. |
52. | ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ. |
53. | ದೇವದೂತರ ಮೂಲಕ ನೇಮಕವಾದ ನ್ಯಾಯ ಪ್ರಮಾಣವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸಲಿಲ್ಲ ಎಂದು ಹೇಳಿದನು. |
54. | ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು. |
55. | ಆದರೆ ಅವನು ಪವಿತ್ರಾತ್ಮಭರಿತನಾಗಿ ಪರಲೋಕ ದೊಳಗೆ ದೃಷ್ಟಿಸಿ ನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು-- |
56. | ಆಗೋ, ಪರಲೋಕವು ತೆರೆದಿರುವದನ್ನೂ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರು ವದನ್ನೂ ನಾನು ನೋಡುತ್ತೇನೆ ಎಂದು ಹೇಳಿದನು. |
57. | ಆದರೆ ಅವರು ಮಹಾಶಬ್ದದಿಂದ ಕೂಗಿ ತಮ್ಮ ಕಿವಿಗಳನ್ನು ಮುಚ್ಚಿಕೊಂಡು ಒಮ್ಮನಸ್ಸಿನಿಂದ ಅವನ ಮೇಲೆ ಬಿದ್ದು |
58. | ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು. |
59. | ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ, |
60. | ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು. |
← Acts (7/28) → |