← Amos (2/9) → |
1. | ಕರ್ತನು ಹೀಗೆ ಹೇಳುತ್ತಾನೆ--ಮೋವಾಬಿನ ಮೂರು ಮತ್ತು ನಾಲ್ಕರ ಅಪರಾಧ ಗಳ ನಿಮಿತ್ತವಾಗಿ ನಾನು ಅದಕ್ಕಾಗುವ ದಂಡನೆಯಿಂದ ತಪ್ಪಿಸುವದಿಲ್ಲ; ಅವನು ಎದೋಮಿನ ಅರಸನ ಎಲುಬುಗಳನ್ನು ಸುಟ್ಟು ಸುಣ್ಣ ಮಾಡಿದ್ದಾನೆ. |
2. | ನಾನು ಮೋವಾಬಿನ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ. ಅದು ಕೆರೀಯೋತಿನ ಅರಮನೆಗಳನ್ನು ನುಂಗಿಬಿಡು ವದು. ಮೋವಾಬು ಆರ್ಭಟದ ಸಂಗಡವೂ ತುತೂ ರಿಯ ಧ್ವನಿಯ ಸಂಗಡವೂ ಗಲಿಬಿಲಿಯಲ್ಲಿ ಸಾಯು ವದು. |
3. | ನಾನು ಅದರ ಮಧ್ಯದಿಂದ ನ್ಯಾಯಾಧಿಪತಿ ಯನ್ನು ಕಡಿದುಹಾಕುವೆನು. ಎಲ್ಲಾ ಪ್ರಧಾನರುಗಳನ್ನು ಅಲ್ಲಿ ಅವನೊಂದಿಗೆ ಕೊಲ್ಲುವೆನೆಂದು ಕರ್ತನು ಹೇಳುತ್ತಾನೆ. |
4. | ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ಅದಕ್ಕಾಗುವ ದಂಡನೆಯನ್ನು ತಪ್ಪಿಸುವದಿಲ್ಲ; ಅವರು ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳುಗಳೇ ಇವರನ್ನು ತಪ್ಪಿಗಸ್ತರನ್ನಾಗಿ ಮಾಡಿವೆ. |
5. | ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು; ಅದು ಯೆರೂಸಲೇಮಿನ ಅರಮನೆ ಗಳನ್ನು ನುಂಗಿ ಬಿಡುವದು. |
6. | ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅವರನ್ನು ದಂಡನೆಯಿಂದ ತಪ್ಪಿಸುವದಿಲ್ಲ. ಅವರು ನೀತಿವಂತರನ್ನು ಬೆಳ್ಳಿಗೆ ಬಡವರನ್ನು ಕೆರಗಳ ಜೋಡಿಗೆ ಮಾರಿದರು. |
7. | ಅವರು ಬಡವರ ತಲೆಯ ಮೇಲಿರುವ ಭೂಮಿಯ ಧೂಳನ್ನು ಆಶಿಸಿ ದೀನರ ಮಾರ್ಗವನ್ನು ತಪ್ಪಿಸುತ್ತಾರೆ; ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಗೊಳಿಸುವದಕ್ಕೆ ತಂದೆ ಮಗ ಇಬ್ಬರೂ ಒಬ್ಬ ಯೌವನಸ್ಥಳ ಬಳಿಗೆ ಹೋಗುತ್ತಾರೆ. |
8. | ಅವರು ಅಡ ಇಟ್ಟ ವಸ್ತ್ರಗಳ ಮೇಲೆ ಪ್ರತಿಯೊಂದು ಬಲಿಪೀಠಗಳ ಬಳಿಯಲ್ಲೂ ಮಲಗುತ್ತಾರೆ ಮತ್ತು ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿ ಯುತ್ತಾರೆ. ಬಳಿಯಲ್ಲೂ ಮಲಗುತ್ತಾರೆ ಮತ್ತು ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿ ಯುತ್ತಾರೆ. |
9. | ಆದಾಗ್ಯೂ ನಾನು ಅಮೋರಿಯನನ್ನು ಅವರ ಮುಂದೆ ನಾಶಮಾಡಿದೆನು; ಅವನ ಎತ್ತರವು ದೇವದಾರುಗಳ ಎತ್ತರದಷ್ಟಿತ್ತು. ಅವನು ಓಕ್ ಮರದ ಹಾಗೆ ಬಲವಾಗಿದ್ದನು. ಆದರೂ ನಾನು ಅವನ ಮೇಲೆ ಫಲವನ್ನೂ ಕೆಳಗಿನ ಬೇರುಗಳನ್ನೂ ನಾಶ ಮಾಡಿದೆನು. |
10. | ನಾನೇ ಐಗುಪ್ತದೇಶದಿಂದ ಕರೆ ತಂದೆನು. ನೀವು ಅಮೋರಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು ನಿಮ್ಮನ್ನು ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿನು. |
11. | ನಾನು ನಿಮ್ಮ ಕುಮಾರ ರಲ್ಲಿ ಪ್ರವಾದಿಗಳನ್ನು ನಿಮ್ಮ ಯೌವನಸ್ಥರಲ್ಲಿ ನಾಜೀರರನ್ನು ಎಬ್ಬಿಸಿದೆನು. ಓ ಇಸ್ರಾಯೇಲಿನ ಮಕ್ಕಳೇ, ಇದು ಹೀಗಲ್ಲವೋ ಎಂದು ಕರ್ತನು ಹೇಳುತ್ತಾನೆ. |
12. | ಆದರೆ ನೀವು ನಾಜೀರರಿಗೆ ಕುಡಿ ಯಲು ದ್ರಾಕ್ಷಾರಸವನ್ನು ಕೊಟ್ಟಿರಿ; ಪ್ರವಾದಿಗಳಿಗೆಪ್ರವಾದಿಸಬೇಡಿರೆಂದು ಆಜ್ಞಾಪಿಸಿದಿರಿ. |
13. | ಇಗೋ, ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು. |
14. | ಆದ ದರಿಂದ ತ್ವರೆಯಾಗಿ ಓಡುವವನು ನಾಶವಾಗುವನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು; ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು. |
15. | ಬಿಲ್ಲು ಹಿಡಿಯುವವನು ನಿಲ್ಲನು; ಪಾದ ತ್ವರಿತನು ತಪ್ಪಿಸಿಕೊಳ್ಳನು, ಅಶ್ವಾರೂಢನು ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳನು. |
16. | ಶೂರರಲ್ಲಿ ಧೈರ್ಯ ಹೃದಯ ವುಳ್ಳವನು ಆ ದಿನದಲ್ಲಿ ಬೆತ್ತಲೆಯಾಗಿ ಓಡಿ ಹೋಗುವನು ಎಂದು ಕರ್ತನು ಹೇಳುತ್ತಾನೆ. |
← Amos (2/9) → |