← Amos (9/9) |
1. | ಕರ್ತನು ಯಜ್ಞವೇದಿಯ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನು ಹೇಳಿದ್ದೇ ನಂದರೆ--ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದು ಬಿಡು; ಅವರಲ್ಲಿ ಉಳಿದವರನ್ನು ನಾನು ಕೊಲ್ಲುವೆನು; ಅವರಲ್ಲಿ ಓಡಿ ಹೋಗುವವನು ಓಡಿಹೋಗಲಾಗು ವದಿಲ್ಲ; ಅವರಲ್ಲಿ ತಪ್ಪಿಸಿಕೊಳ್ಳುವವನು ತಪ್ಪಿಸಿಕೊಳ್ಳ ಲಾಗುವದಿಲ್ಲ. |
2. | ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು. |
3. | ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು. |
4. | ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋದರೂ ಅಲ್ಲಿಯೂ ನಾನು ಕತ್ತಿಗೆ ಅಪ್ಪಣೆ ಕೊಡುವೆನು; ಅದು ಅವರನ್ನು ಕೊಲ್ಲುವದು. ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು. |
5. | ಸೈನ್ಯಗಳ ದೇವರಾದ ಕರ್ತನೇ, ದೇಶವನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುವದು. ಅದರಲ್ಲಿ ವಾಸವಾಗಿರುವವರೆಲ್ಲರೂ ಗೋಳಾಡುವರು. ಅವೆಲ್ಲಾ ನದಿಯ ಹಾಗೆ ಪ್ರವಾಹದಂತೆ ಉಕ್ಕಿ, ಐಗುಪ್ತದ ಪ್ರವಾಹದಂತೆ ಉಕ್ಕಿ ಮುಳುಗಿ ಹೋಗುವದು. |
6. | ಆಕಾಶದಲ್ಲಿ ಉಪ್ಪರಿಗೆ ಗಳನ್ನು ಕಟ್ಟಿಕೊಂಡು ಭೂಮಿಯ ಮೇಲೆ ತಮ ತಂಡಗಳನ್ನು ಸ್ಥಾಪಿಸಿ ಸಮುದ್ರದ ನೀರನ್ನು ಕರೆದು ಅದನ್ನು ಭೂಮಿಯ ಮೇಲೆ ಒಯ್ಯುವಂತೆ ಮಾಡು ವವನು ಆತನೇ. ಆತನ ಹೆಸರು ಕರ್ತನು. |
7. | ಇಸ್ರಾಯೇಲಿನ ಮಕ್ಕಳೇ, ನೀವು ನನಗೆ ಐಥಿ ಯೋಪ್ಯರ ಮಕ್ಕಳ ಹಾಗಲ್ಲವೇ? ನಾನು ಇಸ್ರಾ ಯೇಲ್ಯರನ್ನು ಐಗುಪ್ತದಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ಬರಮಾಡಲಿಲ್ಲವೇ ಎಂದು ಕರ್ತನು ಹೇಳುತ್ತಾನೆ. |
8. | ಇಗೋ, ದೇವರಾದ ಕರ್ತನ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲಿವೆ; ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋ ಬಿನ ಮನೆತನದವರನ್ನು ನಾನು ನಿಜವಾಗಿ ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ. |
9. | ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ. |
10. | ಕೇಡು ನಮ್ಮನ್ನು ಹಿಂದಟ್ಟದು, ನಮ್ಮನ್ನು ತಡೆಯುವದಿಲ್ಲ ಎನ್ನುವ ನನ್ನ ಜನರಲ್ಲಿರುವ ಪಾಪಿಷ್ಠರು ಕತ್ತಿಯಿಂದ ಸಾಯುವರು. |
11. | ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು. |
12. | ಆಗ ಅವರು ಎದೋ ಮಿನ ಮಿಕ್ಕಭಾಗವನ್ನೂ ನನ್ನ ಹೆಸರಿನಿಂದ ಕರೆಯಲ್ಪ ಡುವ ಎಲ್ಲಾ ಅನ್ಯಜನಾಂಗಗಳನ್ನೂ ಸ್ವಾಧೀನಮಾಡಿ ಕೊಳ್ಳುವರೆಂದು ಇದನ್ನು ಮಾಡುವವನಾದ ಕರ್ತನು ಹೇಳುತ್ತಾನೆ. |
13. | ಕರ್ತನು ಹೇಳುವದೇನಂದರೆ--ಇಗೋ, ದಿನಗಳು ಬರುವವು, ಆಗ ಉಳುವವನು ಕೊಯ್ಯುವವನನ್ನೂ ದ್ರಾಕ್ಷೇ ಮಾರುವ ವನು ಬೀಜ ಬಿತ್ತುವವನನ್ನೂ ಹಿಂದಟ್ಟುವರು. ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವವು. ಗುಡ್ಡಗಳೆಲ್ಲಾ ಕರಗುವವು. |
14. | ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು. |
15. | ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ. |
← Amos (9/9) |