← Colossians (4/4) |
1. | ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ಸೇವಕರಿಗೆ ನ್ಯಾಯವಾದದ್ದನ್ನೂ ಸಮ ವಾದದ್ದನ್ನೂ ಕೊಡಿರಿ. |
2. | ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಕೃತಜ್ಞತಾಸ್ತುತಿಯೊಂದಿಗೆ ಎಚ್ಚರವಾಗಿರ್ರಿ. |
3. | ನಾವು ಕ್ರಿಸ್ತನ ಮರ್ಮವನ್ನು ಮಾತನಾಡುವಂತೆ ದೇವರು ಅನುಕೂಲವಾದ ಬಾಗಲನ್ನು ನಮಗೆ ತೆರೆಯುವ ಹಾಗೆ ನಮಗೋಸ್ಕರವೂ ಪ್ರಾರ್ಥಿಸಿರಿ; ಇದಕ್ಕೋಸ್ಕರವೇ ನಾನು ಸೆರೆಯಲ್ಲಿದ್ದೇನಲ್ಲಾ; |
4. | ನಾನು ಅದನ್ನು ಹೇಳಬೇಕಾದ ರೀತಿಯಲ್ಲಿ ಪ್ರಕಟಿಸುವಂತೆ ಅನುಗ್ರಹ ಮಾಡಬೇಕೆಂದು ಬೇಡಿಕೊಳ್ಳಿರಿ; |
5. | ಸಮಯ ವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳ ವರಾಗಿ ನಡೆದುಕೊಳ್ಳಿರಿ. |
6. | ನಿಮ್ಮ ಸಂಭಾಷಣೆ ಯಾವಾ ಗಲೂ ಕೃಪೆಯುಳ್ಳದ್ದಾಗಿಯೂ ಉಪ್ಪಿನಿಂದ ರುಚಿಯಾದ ದ್ದಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರ ಹೇಳಬೇಕೋ ಅದನ್ನು ತಿಳುಕೊಳ್ಳುವಿರಿ. |
7. | ಪ್ರಿಯ ಸಹೋದರನೂ ನಂಬಿಗಸ್ತನಾದ ಸೇವ ಕನೂ ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ಸ್ಥಿತಿಯನ್ನೆಲ್ಲಾ ನಿಮಗೆ ತಿಳಿಸುವನು. |
8. | ಅದೇ ರೀತಿಯಲ್ಲಿ ಅವನು (ತುಖಿಕನು) ನಿಮ್ಮ ಸ್ಥಿತಿಯನ್ನು ತಿಳುಕೊಂಡು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ |
9. | ನಿಮ್ಮಲ್ಲಿ ಒಬ್ಬನಾಗಿರುವ ನಂಬಿಗಸ್ತನೂ ಪ್ರಿಯ ಸಹೋದರನೂ ಆದ ಒನೇ ಸಿಮನ ಜೊತೆಯಲ್ಲಿ ಅವನನ್ನು ನಾನು ಕಳುಹಿಸಿದ್ದೇನೆ; ಅವರು ಇಲ್ಲಿ ನಡೆಯುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು. |
10. | ನನ್ನ ಜೊತೆಸೆರೆಯವನಾದ ಅರಿಸ್ತಾರ್ಕನೂ ಬಾರ್ನಬನ ಸಹೋದರಿಯ ಮಗನಾದ ಮಾರ್ಕನೂ (ಮಾರ್ಕನ) ವಿಷಯದಲ್ಲಿ ನೀವು ಅಪ್ಪಣೆ ಹೊಂದಿದ್ದೀರಲ್ಲಾ; ಅವನು ನಿಮ್ಮ ಬಳಿಗೆ ಬಂದರೆ ಸೇರಿಸಿಕೊಳ್ಳಿರಿ. |
11. | ಯೂಸ್ತನೆನಿಸಿಕೊಳ್ಳುವ ಯೇಸುವೂ ನಿಮ್ಮನ್ನು ವಂದಿಸುತ್ತಾರೆ. ಇವರು ಸುನ್ನತಿಯವರಾಗಿ ದ್ದಾರೆ. ದೇವರ ರಾಜ್ಯಕ್ಕಾಗಿ ಇವರು ಮಾತ್ರ ನನ್ನ ಜೊತೆಗೆಲಸದವರಾಗಿದ್ದು ನನಗೆ ಆದರಣೆಯಾಗಿದ್ದಾರೆ. |
12. | ನಿಮ್ಮಲ್ಲಿ ಒಬ್ಬನಾದ ಕ್ರಿಸ್ತನ ಸೇವಕನಾಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ಪರಿಪೂರ್ಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ಇವನು ನಿಮಗೋಸ್ಕರ ಕಷ್ಟಪಟ್ಟು ಪ್ರಾರ್ಥನೆಗಳಲ್ಲಿ ಹೋರಾಡುತ್ತಾನೆ. |
13. | ನಿಮ್ಮ ವಿಷಯ ವಾಗಿಯೂ ಲವೊದಿಕೀಯರ ವಿಷಯವಾಗಿಯೂ ಹಿರಿಯಾಪೊಲಿಯರ ವಿಷಯವಾಗಿಯೂ ಅವನು ಬಹು ಆಸಕ್ತಿಯುಳ್ಳವನಾಗಿದ್ದಾನೆಂದು ಅವನ ವಿಷಯ ದಲ್ಲಿ ನಾನು ಸಾಕ್ಷಿ ಹೇಳುತ್ತೇನೆ. |
14. | ಪ್ರಿಯ ವೈದ್ಯನಾಗಿ ರುವ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ. |
15. | ಲವೊದಿಕೀಯದಲ್ಲಿರುವ ಸಹೋದರ ರಿಗೂ ನುಂಫನಿಗೂ ಅವನ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ. |
16. | ನಿಮ್ಮಲ್ಲಿ ಈ ಪತ್ರಿಕೆಯನ್ನು ಓದಿಸಿಕೊಂಡ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಓದಿಸಿರಿ; ಹಾಗೆಯೇ ಲವೊದಿಕೀಯ ದಿಂದ ಪತ್ರಿಕೆಯನ್ನು ತರಿಸಿ ನೀವು ಓದಿಕೊಳ್ಳಿರಿ. |
17. | ಅರ್ಖಿಪ್ಪನಿಗೆ--ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ. |
18. | ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್. |
← Colossians (4/4) |