← Deuteronomy (12/34) → |
1. | ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿನ್ನ ಪಿತೃಗಳ ದೇವರಾದ ಕರ್ತನು ಕೊಡುವ ದೇಶದಲ್ಲಿ ನೀವು ಭೂಮಿಯ ಮೇಲೆ ಬದುಕುವ ದಿವಸಗಳಲ್ಲೆಲ್ಲಾ ಲಕ್ಷಿಸಿ ಮಾಡತಕ್ಕ ನಿಯಮ ನ್ಯಾಯಗಳು ಇವೇ. |
2. | ನೀವು ಸ್ವಾಧೀನಮಾಡಿಕೊಳ್ಳುವ ಜನಾಂಗ ಗಳು ತಮ್ಮ ದೇವರುಗಳಿಗೆ ಎತ್ತರವಾದ ಬೆಟ್ಟಗಳ ಮೇಲೆಯೂ ಗುಡ್ಡಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಸೇವೆಮಾಡಿದ ಸ್ಥಳಗಳನ್ನು, ನೀವು ಪೂರ್ಣವಾಗಿ ನಾಶಮಾಡಬೇಕು. |
3. | ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ ಅವರ ಸ್ತಂಭಗಳನ್ನು ಒಡೆದು ಅವರ ತೋಪುಗಳನ್ನು ಬೆಂಕಿಯಿಂದ ಸುಟ್ಟು ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ನಾಶಮಾಡಬೇಕು. |
4. | ನೀವು ನಿಮ್ಮ ಕರ್ತನಾದ ದೇವರಿಗೆ ಹಾಗೆ ಮಾಡ ಬೇಡಿರಿ. |
5. | ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು. |
6. | ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು. |
7. | ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು. |
8. | ನಾವು ಈಗ ಇಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ದೃಷ್ಟಿಯಲ್ಲಿ ತೋರುವ ಪ್ರಕಾರ ಮಾಡುವಂತೆ ನೀವು ಮಾಡಬೇಡಿರಿ. |
9. | ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ವಿಶ್ರಾಂತಿಗೂ ಸ್ವಾಸ್ತ್ಯಕ್ಕೂ ನೀವು ಇನ್ನೂ ಸೇರಲಿಲ್ಲ; |
10. | ಆದರೆ ನೀವು ಯೊರ್ದನನ್ನು ದಾಟಿದ ಮೇಲೆ ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ ಆತನು ಸುತ್ತಲಿ ರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ ನಿಮಗೆ ವಿಶ್ರಾಂತಿ ಕೊಟ್ಟ ಮೇಲೆ |
11. | ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು. |
12. | ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ. |
13. | ನೀನು ಕಂಡ ಎಲ್ಲಾ ಸ್ಥಳಗಳಲ್ಲಿ ನಿನ್ನ ದಹನ ಬಲಿಗಳನ್ನು ಅರ್ಪಿಸದ ಹಾಗೆ ನೋಡಿಕೋ; |
14. | ಕರ್ತನು ನಿನ್ನ ಗೋತ್ರಗಳಲ್ಲಿ ಒಂದನ್ನು ಆದು ಕೊಳ್ಳುವ ಸ್ಥಳದಲ್ಲೇ ನಿನ್ನ ದಹನಬಲಿಗಳನ್ನು ಅರ್ಪಿಸಬೇಕು; ಅಲ್ಲೇ ನಾನು ನಿನಗೆ ಆಜ್ಞಾಪಿಸು ವದನ್ನೆಲ್ಲಾ ಮಾಡಬೇಕು. |
15. | ಆದರೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಆಶೀರ್ವಾದದ ಪ್ರಕಾರ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ನಿನ್ನ ಎಲ್ಲಾ ಬಾಗಲುಗಳಲ್ಲಿ ಕೊಯ್ದು ತಿನ್ನಬಹುದು; ಜಿಂಕೆ ಕಡವೆ ಗಳ ಹಾಗೆಯೇ ಶುದ್ಧನೂ ಅಶುದ್ಧನೂ ಅದನ್ನು ತಿನ್ನ ಬಹುದು. |
16. | ರಕ್ತವನ್ನು ಮಾತ್ರ ತಿನ್ನಬೇಡಿರಿ, ಅದನ್ನು ನೀರಿನಂತೆ ನೆಲಕ್ಕೆ ಚೆಲ್ಲಬೇಕು. |
17. | ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳ ಚೊಚ್ಚಲಾದವುಗಳನ್ನೂ ನೀನು ಮಾಡುವ ಎಲ್ಲಾ ಪ್ರಮಾಣಗಳನ್ನೂ ಉಚಿತ ವಾದ ಕಾಣಿಕೆಗಳನ್ನೂ ಕೈ ಎತ್ತುವ ಅರ್ಪಣೆಯನ್ನೂ ನಿನ್ನ ಬಾಗಲುಗಳಲ್ಲಿ ತಿನ್ನಬೇಡ. |
18. | ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು. |
19. | ನೀನು ಭೂಮಿಯ ಮೇಲೆ ಜೀವಿಸುವ ವರೆಗೆ ಲೇವಿಯನನ್ನು ಬಿಟ್ಟುಬಿಡದ ಹಾಗೆ ನೋಡಿಕೋ. |
20. | ನಿನ್ನ ದೇವರಾದ ಕರ್ತನು ನಿನಗೆ ವಾಗ್ದಾನ ಮಾಡಿದ ಹಾಗೆ ನಿನ್ನ ಮೇರೆಯನ್ನು ವಿಸ್ತಾರಮಾಡು ವಾಗ ನೀನು--ನನ್ನ ಪ್ರಾಣವು ಮಾಂಸವನ್ನು ತಿನ್ನ ಬೇಕೆಂದು ನಾನು ಆಶೆಪಡುವದರಿಂದ ನಾನು ಮಾಂಸ ವನ್ನು ತಿನ್ನುವೆನು ಎಂದು ಹೇಳಿ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ತಿನ್ನಬಹುದು; |
21. | ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ಕರ್ತನು ನಿನಗೆ ಕೊಟ್ಟ ಪಶು ಕುರಿಗಳನ್ನು ನಾನು ನಿನಗೆ ಆಜ್ಞಾಪಿಸಿದಂತೆ ಕೊಯ್ದು ನಿನ್ನ ಬಾಗಲುಗಳಲ್ಲಿ ನಿನಗೆ ಮನಸ್ಸಿದ್ದಷ್ಟು ಉಣ್ಣಬಹುದು. |
22. | ಆದರೆ ಜಿಂಕೆ ಕಡವೆಗಳನ್ನು ಉಣ್ಣುವ ಹಾಗೆ ಅದನ್ನು ಉಣ್ಣಬೇಕು. ಶುದ್ಧನೂ ಅಶುದ್ಧನೂ ಕೂಡ ಅದೇ ರೀತಿಯಲ್ಲಿ ಅದನ್ನು ತಿನ್ನಲಿ. |
23. | ರಕ್ತವನ್ನು ಮಾತ್ರ ತಿನ್ನದ ಹಾಗೆ ಜಾಗ್ರತೆ ಯಾಗಿರು; ಯಾಕಂದರೆ ರಕ್ತವು ಪ್ರಾಣವೇ, ಮತ್ತು ಪ್ರಾಣವನ್ನು ಮಾಂಸದ ಸಂಗಡ ತಿನ್ನಬೇಡ. |
24. | ಅದನ್ನು ತಿನ್ನದೆ ನೀರಿನಂತೆ ಭೂಮಿಯ ಮೇಲೆ ಹೊಯ್ಯಬೇಕು. |
25. | ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡುವದರಿಂದ ನಿನಗೂ ನಿನ್ನ ಮುಂದಿರುವ ಮಕ್ಕಳಿಗೂ ಒಳ್ಳೇದಾಗುವ ಹಾಗೆ ಅದನ್ನು ತಿನ್ನಬೇಡ. |
26. | ನಿನಗಿರುವ ಪರಿಶುದ್ಧವಾದವುಗಳನ್ನೂ ನಿನ್ನ ಪ್ರಮಾಣಗಳನ್ನೂ ಮಾತ್ರ ಕರ್ತನು ಆದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಬರಬೇಕು. |
27. | ಆಗ ನಿನ್ನ ದಹನ ಬಲಿಗಳನ್ನೂ ಮಾಂಸವನ್ನೂ ರಕ್ತವನ್ನೂ ನಿನ್ನ ದೇವ ರಾದ ಕರ್ತನ ಬಲಿಪೀಠದ ಮೇಲೆ ಅರ್ಪಿಸಬೇಕು; ಆದರೆ ನಿನ್ನ ಬಲಿಗಳ ರಕ್ತವನ್ನು ನಿನ್ನ ದೇವರಾದ ಕರ್ತನ ಬಲಿಪೀಠದ ಮೇಲೆ ಹೊಯ್ಯಬೇಕು; ಅವುಗಳ ಮಾಂಸವನ್ನು ತಿನ್ನಬೇಕು. |
28. | ನೀನು ನಿನ್ನ ದೇವರಾದ ಕರ್ತನ ಮುಂದೆ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡುವದರಿಂದ ನಿನಗೂ ನಿನ್ನ ಮುಂದೆ ಇರುವ ನಿನ್ನ ಮಕ್ಕಳಿಗೂ ಎಂದೆಂದಿಗೂ ಒಳ್ಳೇದಾಗುವ ಹಾಗೆ ನಾನು ನಿನಗೆ ಆಜ್ಞಾಪಿಸುವ ಈ ಮಾತುಗಳನ್ನೆಲ್ಲಾ ಕೇಳಿ ಕಾಪಾಡು. |
29. | ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ಆ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ನಿನ್ನ ಮುಂದೆ ಕಡಿದು ಬಿಡುವಾಗ, ನೀನು ಅವುಗಳನ್ನು ಜಯಿಸಿ ಅವುಗಳ ದೇಶದಲ್ಲಿ ವಾಸಮಾಡುವಾಗ |
30. | ಅವು ನಿನ್ನ ಮುಂದೆ ನಾಶವಾದ ಮೇಲೆ ನೀನು ಅವುಗಳನ್ನು ಅನುಸರಿಸಿ ಬಲೆಯಲ್ಲಿ ಸಿಕ್ಕಿಬೀಳದ ಹಾಗೆಯೂ--ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಸೇವಿಸಿದವೋ ನಾನೂ ಹಾಗೆ ಮಾಡುತ್ತೇನೆಂದು ಹೇಳಿ ಅವರ ದೇವರುಗಳನ್ನು ಕುರಿತು ವಿಚಾರಿಸದ ಹಾಗೆಯೂ ನೋಡಿಕೋ. |
31. | ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ. |
32. | ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ. |
← Deuteronomy (12/34) → |