← Deuteronomy (34/34) |
1. | ಆಗ ಮೋಶೆ ಮೋವಾಬಿನ ಬೈಲಿನಿಂದ ನೆಬೋ ಪರ್ವತಕ್ಕೆ ಯೆರಿಕೋವಿಗೆ ಎದುರಾಗಿರುವ ಪಿಸ್ಗಾದ ಶಿಖರಕ್ಕೆ ಏರಿ ಹೋದನು. ಅಲ್ಲಿ ಕರ್ತನು ಅವನಿಗೆ ದೇಶವನ್ನೆಲ್ಲಾ ದಾನಿನ ವರೆಗಿರುವ ಗಿಲ್ಯಾದನ್ನೂ |
2. | ಎಲ್ಲಾ ನಫ್ತಾಲಿಯನ್ನೂ ಸಮಸ್ತ ಎಫ್ರಾಯಾಮನ, ಮನಸ್ಸೆಯ ದೇಶವನ್ನೂ ಸಮುದ್ರದ ಕಟ್ಟಕಡೆಯ ವರೆಗಿರುವ ಸಮಸ್ತ ಯೆಹೂದ ದೇಶವನ್ನೂ |
3. | ದಕ್ಷಿಣವನ್ನೂ ಖರ್ಜೂರಗಳ ಪಟ್ಟಣ ವಾದ ಯೆರಿಕೋವಿನ ತಗ್ಗೆಂಬ ಬೈಲನ್ನೂ ಚೋಗ ರೂರಿನ ಪರ್ಯಂತರಕ್ಕೆ ತೋರಿಸಿದನು. |
4. | ಕರ್ತನು ಅವನಿಗೆ--ನಾನು ನಿನ್ನ ಸಂತತಿಗೆ ಕೊಡುತ್ತೇನೆಂದು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದ ದೇಶವು ಇದೇ. ಅದನ್ನು ನಿನಗೆ ತೋರಿಸಿದೆನು; ಆದರೆ ನೀನು ಅಲ್ಲಿಗೆ ದಾಟಿ ಸೇರುವದಿಲ್ಲ ಎಂದು ಹೇಳಿದನು. |
5. | ಕರ್ತನ ಮಾತಿನ ಹಾಗೆ ಕರ್ತನ ದಾಸನಾದ ಮೋಶೆಯು ಅಲ್ಲಿ ಮೋವಾಬಿನ ದೇಶದಲ್ಲಿ ಸತ್ತನು. |
6. | ಆತನು ಅವನನ್ನು ಮೋವಾಬಿನ ದೇಶದ ತಗ್ಗಿನಲ್ಲಿ ಬೇತ್ಪಯೋರಿಗೆ ಎದುರಾಗಿ ಹೂಣಿಟ್ಟನು; ಅವನ ಸಮಾಧಿ ಇಂದಿನ ವರೆಗೆ ಯಾರಿಗೂ ಗೊತ್ತಿಲ್ಲ. |
7. | ಮೋಶೆಯು ಸಾಯುವಾಗ ನೂರಿಪ್ಪತ್ತು ವರುಷದವ ನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ; ಅವನ ತ್ರಾಣ ಕುಂದಲಿಲ್ಲ. |
8. | ಇಸ್ರಾಯೇಲ್ ಮಕ್ಕಳು ಮೋವಾಬಿನ ಬೈಲಿನಲ್ಲಿ ಮೋಶೆಯ ನಿಮಿತ್ತ ಮೂವತ್ತು ದಿವಸ ಅತ್ತರು. ಈ ಪ್ರಕಾರ ಮೋಶೆಯ ನಿಮಿತ್ತವಾದ ಗೋಳಾಟದಲ್ಲಿ ಅಳುವ ದಿವಸಗಳು ಮುಗಿದವು. |
9. | ಇದಲ್ಲದೆ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದ್ದನು. ಯಾಕಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಇಸ್ರಾಯೇಲ್ ಮಕ್ಕಳು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮಾಡಿ ಅವನ ಮಾತು ಕೇಳಿದರು. |
10. | ಆದರೆ ಐಗುಪ್ತದೇಶದಲ್ಲಿ ಫರೋಹನಿಗೂ ಅವನ ಎಲ್ಲಾ ಸೇವಕರಿಗೂ ಅವನ ಎಲ್ಲಾ ದೇಶಕ್ಕೂ ಮಾಡಿ ದಕ್ಕೆ ಕರ್ತನು ಅವನನ್ನು ಕಳುಹಿಸಿದ ಸಮಸ್ತ ಗುರುತು ಗಳ ಮತ್ತು ಅದ್ಭುತಗಳ ವಿಷಯದಲ್ಲಿಯೂ |
11. | ಮೋಶೆ ಸಮಸ್ತ ಇಸ್ರಾಯೇಲಿನ ಮುಂದೆ ತೋರಿಸಿದ ಸಮಸ್ತ ಬಲವಾದ ಕೈಯ ಸಮಸ್ತ ಮಹಾಭಯದ ವಿಷಯ ದಲ್ಲಿಯೂ |
12. | ಕರ್ತನು ಮುಖಾಮುಖಿಯಾಗಿ ತಿಳಿದ ಮೋಶೆಯ ಹಾಗೆ ಮತ್ತೊಬ್ಬ ಪ್ರವಾದಿ ಇಸ್ರಾ ಯೇಲಿನಲ್ಲಿ ಏಳಲಿಲ್ಲ. |
← Deuteronomy (34/34) |