← Deuteronomy (5/34) → |
1. | ಆಗ ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವರಿಗೆ--ಓ ಇಸ್ರಾಯೇಲೇ, ನಾನು ಈಹೊತ್ತು ನಿಮಗೆ ಹೇಳುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿರಿ; ಅವುಗಳನ್ನು ಕಲಿತು ಕೈಕೊಂಡು ನಡೆಯಬೇಕು. |
2. | ನಮ್ಮ ದೇವರಾದ ಕರ್ತನು ಹೋರೇ ಬಿನಲ್ಲಿ ನಮ್ಮ ಸಂಗಡ ಆ ಒಡಂಬಡಿಕೆಯನ್ನು ಮಾಡಿದನು. |
3. | ಕರ್ತನು ಆ ಒಡಂಬಡಿಕೆಯನ್ನು ನಮ್ಮ ಪಿತೃಗಳ ಸಂಗಡ ಅಲ್ಲ, ನಮ್ಮ ಸಂಗಡವೇ ಮಾಡಿದನು. ನಾವೆಲ್ಲರೂ ಈಹೊತ್ತು ಇಲ್ಲಿ ಜೀವಿತರಾಗಿದ್ದೇವೆ. |
4. | ಮುಖಾಮುಖಿಯಾಗಿ ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಮಾತನಾಡಿದನು. |
5. | (ಆ ಕಾಲದಲ್ಲಿ ನಾನು ಕರ್ತನ ವಾಕ್ಯವನ್ನು ನಿಮಗೆ ತಿಳಿಸುವ ಹಾಗೆ ಕರ್ತನಿಗೂ ನಿಮಗೂ ನಡುವೆ ನಿಂತಿದ್ದೆನು; ನೀವು ಆ ಬೆಂಕಿಗೆ ಭಯಪಟ್ಟು ಬೆಟ್ಟದ ಮೇಲೆ ಏರಲಿಲ್ಲ.) ಆತನು ಹೇಳಿದ್ದೇನಂದರೆ-- |
6. | ನಿನ್ನನ್ನು ಐಗುಪ್ತದೇಶದೊಳಗಿಂದ ಅಂದರೆ ದಾಸ ತ್ವದ ಮನೆಯೊಳಗಿಂದ ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಾನೇ. |
7. | ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು. |
8. | ಮೇಲಿನ ಆಕಾಶ ದಲ್ಲಾಗಲಿ ಕೆಳಗಿನ ಭೂಮಿಯಲ್ಲಾಗಲಿ ಭೂಮಿಯ ಕೆಳಗಿನ ನೀರುಗಳಲ್ಲಾಗಲಿ ಇರುವಂಥ ಯಾವ ದೊಂದರ ರೂಪದ ವಿಗ್ರಹವನ್ನು ನಿನಗೆ ಮಾಡಿ ಕೊಳ್ಳಬಾರದು, |
9. | ಅವುಗಳಿಗೆ ಅಡ್ಡಬೀಳಲೂಬಾರದು, ಸೇವಿಸಲೂಬಾರದು. ಯಾಕಂದರೆ ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆಮಾಡುವವರಲ್ಲಿ ಪಿತೃಗಳ ಅಕ್ರಮವನ್ನು ಮಕ್ಕಳ ಮೇಲೆ ಮೂರನೆಯ ನಾಲ್ಕನೆಯ ತಲಾಂತರದ ವರೆಗೆ ನ್ಯಾಯತೀರಿಸುತ್ತೇನೆ. |
10. | ಆದರೆ ನನ್ನನ್ನು ಪ್ರೀತಿ ಮಾಡಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಸಾವಿರಗಳ ವರೆಗೆ ಕರುಣೆ ತೋರಿಸುತ್ತೇನೆ. |
11. | ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬೇಡ; ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿಯೆಂದು ಎಣಿಸುವದಿಲ್ಲ. |
12. | ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದಂತೆ ಸಬ್ಬತ್ ದಿವಸವನ್ನು ಪರಿಶುದ್ಧಮಾಡುವದಕ್ಕೆ ಅದನ್ನು ಕಾಪಾಡು. |
13. | ಆರು ದಿವಸಗಳಲ್ಲಿ ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಬೇಕು. |
14. | ಏಳನೇ ದಿವಸವು ನಿನ್ನ ದೇವರಾದ ಕರ್ತನ ಸಬ್ಬತ್ ದಿವಸವೇ; ಅದ ರಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಎತ್ತೂ ಕತ್ತೆಯೂ ಎಲ್ಲಾಪಶುಗಳೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಯೂ ಯಾವ ಕೆಲಸ ವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು. |
15. | ನೀನು ಐಗುಪ್ತ ದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಹೊರಗೆ ಬರಮಾಡಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಕರ್ತನು ನಿನಗೆ ಸಬ್ಬತ್ ದಿವಸವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾನೆ. |
16. | ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ ನಿನ್ನ ತಾಯಿಯನ್ನೂ ಸನ್ಮಾನಿಸು. |
17. | ಕೊಲ್ಲಬೇಡ |
18. | ವ್ಯಭಿಚಾರ ಮಾಡಬೇಡ. |
19. | ಕದಿಯಬೇಡ. |
20. | ನಿನ್ನ ನೆರೆಯವನ ಮೇಲೆ ಸುಳ್ಳುಸಾಕ್ಷಿ ಹೇಳಬೇಡ. |
21. | ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ; ನೆರೆಯವನ ಮನೆಯನ್ನೂ ಅವನ ಹೊಲವನ್ನೂ ದಾಸ ದಾಸಿಯರನ್ನೂ ಪಶು ಕತ್ತೆಗಳನ್ನೂ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬೇಡ ಎಂದು ಹೇಳಿದನು. |
22. | ಈ ಮಾತುಗಳನ್ನು ಕರ್ತನು ಬೆಂಕಿಯ ಮೇಘದ ಕಾರ್ಗತ್ತಲೆಯ ಮಧ್ಯದಿಂದಲೂ ಮಹಾಶಬ್ದ ದಿಂದಲೂ ಬೆಟ್ಟದಲ್ಲಿ ನಿಮ್ಮ ಸಭೆಗೆಲ್ಲಾ ಹೇಳಿದನು; ಹೆಚ್ಚೇನೂ ಕೂಡಿಸಲಿಲ್ಲ. ಇವುಗಳನ್ನು ಆತನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟನು. |
23. | (ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ ನೀವು ಕತ್ತಲೆಯಿಂದ ಆ ಶಬ್ದವನ್ನು ಕೇಳಿ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ) |
24. | ಇಗೋ, ನಮ್ಮ ದೇವರಾದ ಕರ್ತನು ತನ್ನ ಮಹಿಮೆಯನ್ನೂ ತನ್ನ ಘನವನ್ನೂ ನಮಗೆ ತೋರಿಸಿದ್ದಾನೆ; ಆತನ ಶಬ್ದವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ; ದೇವರು ಮನುಷ್ಯರ ಸಂಗಡ ಮಾತ ನಾಡಲು ಅವರು ಬದುಕುತ್ತಾರೆಂದು ಈಹೊತ್ತು ನೋಡಿದ್ದೇವೆ. |
25. | ಹಾಗಾದರೆ ಈಗ ನಾವು ಯಾಕೆ ಸಾಯಬೇಕು? ಈ ಮಹಾಅಗ್ನಿಯು ನಿಶ್ಚಯವಾಗಿ ನಮ್ಮನ್ನು ದಹಿಸಿಬಿಡುವದು; ನಾವು ಇನ್ನೂ ನಮ್ಮ ದೇವರಾದ ಕರ್ತನ ಶಬ್ದವನ್ನು ಕೇಳಿದರೆ ಸಾಯುತ್ತೇವೆ. |
26. | ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳ ಗಿಂದ ಮಾತನಾಡುವ ಜೀವವುಳ್ಳ ದೇವರ ಶಬ್ದವನ್ನು ಕೇಳಿ ಬದುಕಿದರು? |
27. | ನೀನೇ ಸವಿಾಪಕ್ಕೆ ಹೋಗಿ ನಮ್ಮ ದೇವರಾದ ಕರ್ತನು ಹೇಳುವದನ್ನೆಲ್ಲಾ ಕೇಳಿ ನಮ್ಮ ದೇವರಾದ ಕರ್ತನು ನಿನಗೆ ಹೇಳಿದ್ದನ್ನೆಲ್ಲಾ ನೀನೇ ನಮಗೆ ಹೇಳು; ಆಗ ನಾವು ಕೇಳಿ ಅದನ್ನು ಮಾಡುವೆವು ಎಂದು ಹೇಳಿದಿರಿ. |
28. | ನೀವು ನನ್ನ ಹತ್ತಿರ ಮಾತನಾಡಿದಾಗ ಕರ್ತನು ನಿಮ್ಮ ಮಾತುಗಳ ಶಬ್ದವನ್ನು ಕೇಳಿ ನನಗೆ--ಈ ಜನರು ನಿನಗೆ ಹೇಳಿದ ಮಾತುಗಳ ಶಬ್ದವನ್ನು ಕೇಳಿ ದ್ದೇನೆ. ಅವರು ಹೇಳಿದ್ದೆಲ್ಲಾ ಒಳ್ಳೇದು. |
29. | ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು. |
30. | ನೀನು ಹೋಗಿ ಅವರಿಗೆ--ನಿಮ್ಮ ಡೇರೆಗಳಿಗೆ ತಿರುಗಿಕೊಳ್ಳಬೇಕು ಎಂದು ಹೇಳು. |
31. | ನೀನಾದರೋ ಇಲ್ಲಿ ನನ್ನ ಸಂಗಡ ನಿಂತು ಕೋ; ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞೆ ನಿಯಮ ನ್ಯಾಯ ಗಳನ್ನು ನಿನಗೆ ಹೇಳುವೆನು ಅಂದನು. |
32. | ಹೀಗಿರುವದರಿಂದ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದಂತೆ ಕೈಕೊಂಡು ನಡೆಯಬೇಕು; ಎಡಕ್ಕಾದರೂ ಬಲಕ್ಕಾದರೂ ತಿರುಗಬೇಡಿರಿ. |
33. | ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು. |
← Deuteronomy (5/34) → |