← Deuteronomy (7/34) → |
1. | ನೀನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಬರಮಾಡಿದಾಗ ಆತನು ನಿನಗಿಂತ ದೊಡ್ಡ ವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಅಂದರೆ ಹಿತ್ತಿಯರನ್ನೂ ಗಿರ್ಗಾಷಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗ ಗಳನ್ನು ನಿನ್ನ ಮುಂದೆ ಹೊರಡಿಸಿ |
2. | ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು. |
3. | ಇಲ್ಲವೆ ಅವರ ಸಂಗಡ ಮದುವೆಮಾಡಿ ಕೊಳ್ಳಬಾರದು; ನಿನ್ನ ಕುಮಾರ್ತೆಯನ್ನು ಅವನ ಮಗ ನಿಗೆ ಕೊಡಬಾರದು. ನಿನ್ನ ಕುಮಾರನಿಗೆ ಅವನ ಕುಮಾರ್ತೆಯನ್ನು ತಕ್ಕೊಳ್ಳಬಾರದು. |
4. | ಯಾಕಂದರೆ ಅವರು ಬೇರೆ ದೇವರುಗಳನ್ನು ನಿನ್ನ ಕುಮಾರರು ಸೇವಿಸುವ ಹಾಗೆ ನನ್ನಿಂದ ತೊಲಗಿಸಾರು. ಆಗ ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ನಿನ್ನನ್ನು ಬೇಗ ನಾಶಮಾಡಿಯಾನು. |
5. | ಅವರಿಗೆ ಮಾಡಬೇಕಾದ ದ್ದೇನಂದರೆ ಅವರ ಬಲಿಪೀಠಗಳನ್ನು ಒಡೆದುಹಾಕ ಬೇಕು; ಅವರ ವಿಗ್ರಹಗಳನ್ನು ಮುರಿದುಹಾಕಬೇಕು; ಅವರ ತೋಪುಗಳನ್ನು ಕಡಿದುಹಾಕಬೇಕು; ಅವರು ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು. |
6. | ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ. |
7. | ನೀವು ಎಲ್ಲಾ ಜನಗಳಿಗಿಂತ ಹೆಚ್ಚಾಗಿರುವ ಕಾರಣ ಕರ್ತನು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಗಳಿಗಿಂತ ಬಹಳ ಸ್ವಲ್ಪ. |
8. | ಕರ್ತನು ನಿಮ್ಮನ್ನು ಪ್ರೀತಿಸಿದ್ದರಿಂದಲೂ ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ಕಾಪಾಡುವದರಿಂದಲೂ ಕರ್ತನು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿನ್ನನ್ನು ದಾಸತ್ವದ ಮನೆಯಿಂದಲೂ ಐಗುಪ್ತದ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದನು. |
9. | ಹೀಗಿರುವದರಿಂದ ನಿನ್ನ ದೇವರಾದ ಕರ್ತನು ಆತನೇ ದೇವರು; ಆತನೇ ನಂಬಿಗಸ್ತನಾದ ದೇವರು; ಆತನು ತನ್ನನ್ನು ಪ್ರೀತಿಮಾಡಿ ತನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕರುಣೆಯನ್ನೂ ಸಾವಿರ ತಲೆಗಳ ವರೆಗೂ ಕಾಪಾಡಿ |
10. | ತನ್ನನ್ನು ಹಗೆ ಮಾಡುವವರಿಗೆ ಮುಖಾಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸಿ ಅವರನ್ನು ನಾಶಮಾಡುತ್ತಾನೆ; ಆತನು ತನ್ನನ್ನು ಹಗೆಮಾಡುವವರಿಗೆ ತಡಮಾಡದೆ ಮುಖಾ ಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ ಎಂದು ತಿಳಿದುಕೋ. |
11. | ಹೀಗಿರುವದರಿಂದ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆಜ್ಞೆ ನಿಯಮ ನ್ಯಾಯಗಳನ್ನು ಕೈಕೊಳ್ಳಬೇಕು. |
12. | ನೀವು ಈ ನ್ಯಾಯಗಳನ್ನು ಕೇಳಿ ಕಾಪಾಡಿ ನಡೆದು ಕೊಂಡರೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗ ಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನೂ ಕರುಣೆ ಯನ್ನೂ ನಿನಗೋಸ್ಕರ ನೆರವೇರಿಸುವನು. |
13. | ಆತನು ನಿನ್ನನ್ನು ಪ್ರೀತಿಮಾಡಿ ಆಶೀರ್ವದಿಸಿ ಹೆಚ್ಚಿಸುವನು; ನಿನಗೆ ಕೊಡುತ್ತೇನೆಂದು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನ ಗರ್ಭದ ಫಲ ವನ್ನೂ ಭೂಮಿಯ ಹುಟ್ಟುವಳಿಯನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಪಶುಗಳನ್ನೂ ನಿನ್ನ ಕುರಿಮಂದೆಗಳನ್ನೂ ಆಶೀರ್ವದಿಸುವನು. |
14. | ಎಲ್ಲಾ ಜನಗಳಿಗಿಂತಲೂ ನೀನು ಆಶೀರ್ವದಿಸಲ್ಪಟ್ಟವನಾ ಗಿರುವಿ; ನಿಮ್ಮೊಳಗೆ ಸ್ತ್ರೀಯರಲ್ಲಾಗಲಿ ಪುರುಷರ ಲ್ಲಾಗಲಿ ಪಶುಗಳಲ್ಲಾಗಲಿ ಬಂಜೆತನವು ಇರುವದಿಲ್ಲ. |
15. | ಕರ್ತನು ಎಲ್ಲಾ ರೋಗಗಳನ್ನು ನಿನ್ನಿಂದ ತೆಗೆದು ಬಿಡುವನು; ನಿನಗೆ ತಿಳಿದಿರುವ ಐಗುಪ್ತದ ಕೆಟ್ಟ ರೋಗಗಳನ್ನೆಲ್ಲಾ ನಿನ್ನ ಮೇಲೆ ಬರಮಾಡದೆ ನಿನ್ನನ್ನು ಹಗೆಮಾಡುವವರೆಲ್ಲರ ಮೇಲೆ ಅವುಗಳನ್ನು ಬರ ಮಾಡುವನು. |
16. | ನಿನ್ನ ದೇವರಾದ ಕರ್ತನು ನಿನಗೆ ಒಪ್ಪಿಸುವ ಜನಗಳನ್ನೆಲ್ಲಾ ನೀನು ಸಂಹರಿಸಿಬಿಡುವಿ; ಅವರ ಮೇಲೆ ನೀನು ಕಟಾಕ್ಷವಿಡಬಾರದು; ಇಲ್ಲವೆ ಅವರ ದೇವರು ಗಳನ್ನು ಸೇವಿಸಬಾರದು; ಅದು ನಿನಗೆ ಉರುಲಾ ಗುವದು. |
17. | ಈ ಜನಾಂಗಗಳು ನನಗಿಂತ ಹೆಚ್ಚಾದವರಾ ಗಿದ್ದಾರೆ, ನಾನು ಹೇಗೆ ಅವರನ್ನು ವಶಮಾಡಿಕೊಳ್ಳಲಿ ಎಂದು ನಿನ್ನ ಹೃದಯದಲ್ಲಿ ಅಂದುಕೊಂಡು |
18. | ನೀನು ಅವರಿಗೆ ಭಯಪಡಬೇಡ; ನಿನ್ನ ದೇವರಾದ ಕರ್ತನು ಫರೋಹನಿಗೂ ಎಲ್ಲಾ ಐಗುಪ್ತಕ್ಕೂ ಮಾಡಿದ್ದನು |
19. | ನಿನ್ನ ಕಣ್ಣುಗಳು ನೋಡಿದ ದೊಡ್ಡ ಉಪದ್ರವ ಗಳನ್ನೂ ನಿನ್ನ ದೇವರಾದ ಕರ್ತನು ನಿನ್ನನ್ನು ಹೊರಗೆ ಬರಮಾಡಿದಾಗ ಉಂಟಾದ ಗುರುತುಗಳನ್ನೂ ಅದ್ಭುತ ಗಳನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ನೀನು ಚೆನ್ನಾಗಿ ಜ್ಞಾಪಕಮಾಡಿಕೊಳ್ಳಬೇಕು. ನೀನು ಯಾವ ಜನಗಳಿಗೆ ಭಯಪಡುತ್ತೀಯೋ ಆ ಜನಗಳಿ ಗೆಲ್ಲಾ ನಿನ್ನ ಕರ್ತನಾದ ದೇವರು ಹಾಗೆಯೇ ಮಾಡು ವನು. |
20. | ಇದಲ್ಲದೆ ಉಳಿದವರೂ ನಿನಗೆ ಮರೆಯಾಗಿ ಉಳುಕೊಂಡವರೂ ನಾಶವಾಗುವ ತನಕ ನಿನ್ನ ದೇವ ರಾದ ಕರ್ತನು ಕಡಜದ ಹುಳವನ್ನು ಅವರಲ್ಲಿ ಕಳುಹಿ ಸುವನು. |
21. | ಅವರಿಗೆ ಹೆದರಬೇಡ, ನಿನ್ನ ದೇವರಾದ ಕರ್ತನು ಭಯಂಕರನಾದ ದೊಡ್ಡ ದೇವರಾಗಿ ನಿನ್ನ ಮಧ್ಯದಲ್ಲಿದ್ದಾನೆ. |
22. | ನಿನ್ನ ದೇವರಾದ ಕರ್ತನು ಆ ಜನಾಂಗಗಳನ್ನು ನಿನ್ನ ಮುಂದೆ ಸ್ವಲ್ಪ ಸ್ವಲ್ಪವಾಗಿ ಹೊರಗೆ ಹಾಕುವನು. ಅಡವಿಯ ಮೃಗಗಳು ನಿನ್ನ ಮೇಲೆ ಹೆಚ್ಚದ ಹಾಗೆ ಅವರನ್ನು ತ್ವರೆಯಾಗಿ ಸಂಹರಿಸಬಾರದು. |
23. | ಆದರೂ ನಿನ್ನ ದೇವರಾದ ಕರ್ತನು ಅವುಗಳನ್ನು ನಿನಗೆ ಒಪ್ಪಿಸಿಬಿಡುವನು; ಅವರು ನಾಶವಾಗುವ ತನಕ ಅತ್ಯಧಿಕವಾಗಿ ಅವರನ್ನು ಸಂಹರಿಸುವನು. |
24. | ಅವರ ಅರಸುಗಳನ್ನು ನಿನಗೆ ಒಪ್ಪಿಸುವನು. ನೀನು ಅವರ ಹೆಸರನ್ನು ಆಕಾಶದ ಕೆಳಗೆ ಇಲ್ಲದ ಹಾಗೆ ನಾಶಮಾಡುವಿ; ನೀನು ಅವರನ್ನು ನಿರ್ಮೂಲ ಮಾಡುವ ತನಕ ಒಬ್ಬನಾದರೂ ನಿನ್ನ ಮುಂದೆ ನಿಲ್ಲಲಾರನು. |
25. | ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು; ಅವುಗಳ ಮೇಲಿರುವ ಬೆಳ್ಳಿ ಬಂಗಾರವನ್ನು ಆಶಿಸಿ ನೀನು ತಕ್ಕೊಳ್ಳಬಾರದು; ಅದು ನಿನಗೆ ಉರ್ಲಾ ದೀತು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ. |
26. | ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ. |
← Deuteronomy (7/34) → |