← Ecclesiastes (10/12) → |
1. | ಸತ್ತ ನೊಣಗಳು ವೈದ್ಯನ ತೈಲವನ್ನು ದುರ್ವಾಸನೆಗೊಳಿಸುತ್ತವೆ; ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮತ್ತು ಘನಗಳಿಗೆ ಪ್ರಿಯ ನಾದವನನ್ನು ಕೆಡಿಸುತ್ತದೆ. |
2. | ಒಬ್ಬ ಜ್ಞಾನಿಯಾದ ಮನು ಷ್ಯನ ಹೃದಯವು ಅವನ ಬಲಗೈಯಲ್ಲಿರುತ್ತದೆ; ಆದರೆ ಒಬ್ಬ ಮೂರ್ಖನ ಹೃದಯವು ಅವನ ಎಡಗಡೆಯಿ ರುತ್ತದೆ. |
3. | ಹೌದು, ಮೂರ್ಖನು ಮಾರ್ಗದಲ್ಲಿ ನಡೆ ಯುವಾಗಲೂ ಸಹ ಅವನ ಜ್ಞಾನವು ಅವನನ್ನು ತಪ್ಪಿಸುತ್ತದೆ; ಅವನು ತಾನು ಮೂರ್ಖನೆಂದು ಪ್ರತಿಯೊಬ್ಬನಿಗೂ ಹೇಳುತ್ತಾನೆ. |
4. | ಆಳುವವನ ಆತ್ಮವು ನಿನಗೆ ವಿರುದ್ಧವಾಗಿ ಎದ್ದರೆ ನಿನ್ನ ಸ್ಥಳವನ್ನು ಬಿಡಬೇಡ; ತಾಳ್ಮೆಯು ಅಭ್ಯಂತರಗಳನ್ನು ತಡೆಯುತ್ತದೆ. |
5. | ಆಳುವ ವನ ಸಮ್ಮುಖದಿಂದ ಹೊರಟು ಬರುವ ತಪ್ಪಿನ ಹಾಗಿ ರುವ ಒಂದು ಕೇಡನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ. |
6. | ಮೂರ್ಖತನವು ಬಹಳ ಎತ್ತರವಾದ ಸ್ಥಳದಲ್ಲಿಡಲ್ಪಡುತ್ತದೆ. ಸಿರಿತನವು ಕೆಳಗಿನ ಸ್ಥಳದಲ್ಲಿ ಕೂತುಕೊಳ್ಳುವದು. |
7. | ನಾನು ಕುದುರೆಗಳ ಮೇಲೆ ಸೇವಕರನ್ನೂ ಮತ್ತು ಪ್ರಭುಗಳು ಸೇವಕರ ಹಾಗೆ ಭೂಮಿಯ ಮೇಲೆ ನಡೆಯುವದನ್ನೂ ನೋಡಿದ್ದೇನೆ. |
8. | ಯಾವನು ಕುಣಿಯನ್ನು ಅಗೆಯುವನೋ ಅದರಲ್ಲೇ ಅವನು ಬೀಳುವನು; ಯಾವನು ಬೇಲಿಯನ್ನು ಮುರಿ ಯುವನೋ ಅವನನ್ನು ಹಾವು ಕಚ್ಚುವದು. |
9. | ಯಾವನು ಕಲ್ಲುಗಳನ್ನು ಕೀಳುವನೋ ಅವುಗಳಿಂದ ಅವನು ನೋವುಪಡುವನು; ಯಾವನು ಕಟ್ಟಿಗೆ ಕಡಿಯುವನೋ ಅದರಿಂದ ಅವನು ಅಪಾಯಗೊಳ್ಳುವನು. |
10. | ಕಬ್ಬಿಣ ಮೊಂಡಾಗಿದ್ದು ಅದರ ಬಾಯಿಯನ್ನು ಮಸೆಯದಿ ದ್ದರೆ ಅವನು ತಪ್ಪದೆ ಹೆಚ್ಚು ಬಲವನ್ನು ಹಾಕಬೇಕು; ಜ್ಞಾನವು ಬದುಕಿಗೆ ಪ್ರಯೋಜನವಾಗಿದೆ. |
11. | ನಿಶ್ಚಯ ವಾಗಿ ಮಂತ್ರವಿಲ್ಲದೆ ಹಾವು ಕಚ್ಚುವದು. ಹಾಗೆಯೇ ಹರಟೆಯವನಲ್ಲಿ ಪ್ರಯೋಜನವಿಲ್ಲ. |
12. | ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ. |
13. | ಅವನ ಬಾಯಿಯು ಮಾತುಗಳು ಆರಂಭದಲ್ಲಿ ಮೂಢತನ ದವುಗಳಾಗಿವೆ; ಅವನ ಮಾತಿನ ಅಂತ್ಯವು ಕೆಟ್ಟ ಮೂರ್ಖತನವಾಗಿದೆ. |
14. | ಮೂಢನು ಸಹ ಮಾತು ಗಳನ್ನು ಹೆಚ್ಚಿಸುತ್ತಾನೆ; ಆದರೂ ಅವನು ಏನೆಂದು ಹೇಳಲು ಸಾಧ್ಯವಿಲ್ಲ. ಅವನ ತರುವಾಯ ಆಗುವದನ್ನು ಅವನಿಗೆ ತಿಳಿಸುವವರು ಯಾರು? |
15. | ಮೂರ್ಖನ ಕಷ್ಟವು ಅವರಲ್ಲಿ ಪ್ರತಿಯೊಬ್ಬನನ್ನು ದಣಿಸುತ್ತದೆ; ನಗರಕ್ಕೆ ಹೇಗೆ ಹೋಗಬೇಕೆಂದು ಅವನಿಗೆ ತಿಳಿಯದು. |
16. | ಓ ದೇಶವೇ, ಹುಡುಗನು ನಿನ್ನ ಅರಸನಾಗಿದ್ದರೆ ಮತ್ತು ನಿನ್ನ ಪ್ರಧಾನರು ಬೆಳಿಗ್ಗೆ ಊಟಮಾಡಿದ್ದರೆ ನಿನಗೆ ಅಯ್ಯೋ! |
17. | ಓ ದೇಶವೇ, ಶ್ರೇಷ್ಠರ ಮಗನು ನಿನ್ನ ಅರಸನಾದರೆ ಮತ್ತು ನಿನ್ನ ಪ್ರಭುಗಳು ತಕ್ಕಕಾಲಕ್ಕೆ ಸರಿಯಾಗಿ ಅಮಲಿಗಾಗಿ ಅಲ್ಲದೆ ಶಕ್ತಿಗಾಗಿ ಊಟ ಮಾಡಿದರೆ ನಿನಗೆ ಆಶೀರ್ವಾದವಾಗಲಿ. |
18. | ಹೆಚ್ಚು ಸೋಮಾರಿತನದಿಂದ ತೊಲೆಗಳು ಜಗ್ಗುತ್ತವೆ ಮತ್ತು ಜೋಲುಗೈಯಿಂದ ಮನೆಗಳು ಸೋರುವವು. |
19. | ನಗೆಗಾಗಿ ಔತಣ ಮಾಡುತ್ತಾರೆ. ದ್ರಾಕ್ಷಾರಸವು ಸಂತೋಷ ಪಡಿಸುತ್ತದೆ. ಹಣವು ಸಮಸ್ತಕ್ಕೂ ಉತ್ತರಕೊಡುತ್ತದೆ. |
20. | ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು. |
← Ecclesiastes (10/12) → |