← Ecclesiastes (2/12) → |
1. | ನಾನು ನನ್ನ ಹೃದಯದಲ್ಲಿ--ಹೋಗು, ನಾನು ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು; ಆದಕಾರಣ ಸುಖವನ್ನು ಅನುಭವಿಸು ಎಂದು ಅಂದುಕೊಂಡೆನು. ಇಗೋ, ಇದು ಕೂಡ ವ್ಯರ್ಥವೇ. |
2. | ನಗೆಯ ವಿಷಯವಾಗಿ--ಇದು ಹುಚ್ಚು ಎಂದೂ ಸಂತೋಷದ ವಿಷಯವಾಗಿ--ಇದೇನು ಮಾಡುತ್ತದೆ ಎಂದೂ ನಾನು ಹೇಳಿದೆನು. |
3. | ಜ್ಞಾನದಿಂದ ನನ್ನ ಹೃದಯವನ್ನು ಇನ್ನು ಸಂತೋಷಪಡಿಸುವದಕ್ಕಾಗಿ ದ್ರಾಕ್ಷಾರಸಕ್ಕೆ ನನ್ನನ್ನು ನಾನು ಒಪ್ಪಿಸಿ ಕೊಳ್ಳುವಂತೆಯೂ ಆಕಾಶದ ಕೆಳಗೆ ತಮ್ಮ ಜೀವ ಮಾನದಲ್ಲೆಲ್ಲಾ ಮನುಷ್ಯ ಪುತ್ರರಿಗೆ ಒಳ್ಳೆಯದೇನೆಂದು ನೋಡುವ ತನಕ ಬುದ್ಧಿ ಹೀನತೆಯನ್ನು ಹಿಡಿಯುವದಕ್ಕೂ ನಾನು ನನ್ನ ಹೃದಯ ದಲ್ಲಿ ವಿಚಾರ ಮಾಡಿಕೊಂಡೆನು. |
4. | ನಾನು ಮಹ ತ್ತಾದ ಕಾರ್ಯಗಳನ್ನು ನಡಿಸಿದೆನು, ಮನೆಗಳನ್ನು ಕಟ್ಟಿಸಿ ಕೊಂಡೆನು; ದ್ರಾಕ್ಷಾತೋಟಗಳನ್ನು ನೆಟ್ಟೆನು. |
5. | ಉದ್ಯಾನ ವನಗಳನ್ನೂ ಹಣ್ಣು ತೋಟಗಳನ್ನೂ ಮಾಡಿಕೊಂಡು ಅವುಗಳಲ್ಲಿ ತರತರವಾದ ಹಣ್ಣಿನ ವೃಕ್ಷಗಳನ್ನು ನೆಟ್ಟೆನು. |
6. | ವೃಕ್ಷಗಳನ್ನು ಬೆಳೆಸುವ ಮರಕ್ಕೆ ನೀರು ಹಾಯಿಸುವ ದಕ್ಕೆ ನಾನು ಕೊಳಗಳನ್ನು ಮಾಡಿಕೊಂಡೆನು. |
7. | ನನಗೆ ದಾಸದಾಸಿಯರು ಇದ್ದರು; ನನ್ನ ಮನೆಯಲ್ಲಿ ಹುಟ್ಟಿದ ದಾಸರು ನನಗೆ ಇದ್ದರು; ನನಗೆ ಮುಂಚೆ ಯೆರೂಸ ಲೇಮಿನಲ್ಲಿ ಇದ್ದವರಿಗಿಂತ ದನಕುರಿಗಳ ಸಂಪತ್ತು ಹೆಚ್ಚಾ ಗಿತ್ತು. |
8. | ನಾನು ಬೆಳ್ಳಿ ಬಂಗಾರಗಳನ್ನು ಅರಸರ ಮತ್ತು ಪ್ರಾಂತ್ಯಗಳ ವಿಶೇಷವಾದ ಸಂಪತ್ತನ್ನು ಸಂಗ್ರಹಿಸಿ ಕೊಂಡೆನು; ಗಾಯಕ ಗಾಯಕಿಯರನ್ನು ಮತ್ತು ಮನುಷ್ಯ ಪುತ್ರರಿಗೆ ಆನಂದಕರವಾದ ಸಂಗೀತ ವಾದ್ಯ ಗಳನ್ನು ಅವುಗಳಿಗೆ ಸಂಭವಿಸಿದವುಗಳನ್ನು ಸಂಪಾದಿಸಿ ಕೊಂಡೆನು. |
9. | ಹೀಗೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದ ಎಲ್ಲರಿಗಿಂತಲೂ ನಾನು ಅಭಿವೃದ್ಧಿ ಹೊಂದಿ ದೊಡ್ಡವನಾಗಿದ್ದೆನು. |
10. | ನನ್ನ ಕಣ್ಣುಗಳು ಬಯಸಿದ್ದೆಲ್ಲವನ್ನು ಅವುಗಳಿಂದ ಹಿಂತೆಗೆಯಲಿಲ್ಲ, ಯಾವ ಸಂತೋಷಕ್ಕಾಗಿಯೂ ನನ್ನ ಹೃದಯವನ್ನು ನಾನು ತಡೆಯಲಿಲ್ಲ; ನನ್ನ ಎಲ್ಲಾ ಪ್ರಯಾಸದಲ್ಲಿ ನನ್ನ ಹೃದಯವು ಸಂತೋಷಿಸಿತು; ನನ್ನ ಪ್ರಯಾಸ ದಿಂದೆಲ್ಲಾ ನನಗಾದ ಪಾಲು ಇದೆ. |
11. | ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ. |
12. | ಜ್ಞಾನವನ್ನೂ ಹುಚ್ಚುತನವನ್ನೂ ಮೂಢತೆಯನ್ನೂ ನೋಡುವದಕ್ಕೆ ನಾನು ತಿರುಗಿಕೊಂಡೆನು; ಅರಸನ ತರುವಾಯ ಬರುವ ಮನುಷ್ಯನು ಏನು ಮಾಡಾನು? ಮೊದಲಿದ್ದದ್ದು ಆಗಲೇ ನಡೆಯಿತು. |
13. | ಆಗ ಕತ್ತಲೆಗಿಂತ ಬೆಳಕು ಶ್ರೇಷ್ಠವಾಗಿರುವಂತೆ ಮೂಢತನಕ್ಕಿಂತ ಜ್ಞಾನವು ಶ್ರೇಷ್ಠವಾಗಿದೆ ಎಂದು ನಾನು ಕಂಡೆನು. |
14. | ಜ್ಞಾನಿಯ ಕಣ್ಣುಗಳು ಅವನ ತಲೆಯಲ್ಲಿರುತ್ತವೆ. ಬುದ್ಧಿಹೀನನು ಕತ್ತಲೆಯಲ್ಲಿ ನಡೆಯುತ್ತಾನೆ; ಅವರೆಲ್ಲರಿಗೂ ಒಂದೇ ಗತಿಯು ಸಂಭವಿಸುವದೆಂದು ನನ್ನಷ್ಟಕ್ಕೆ ನಾನೇ ಗ್ರಹಿಸಿ ಕೊಂಡೆನು. |
15. | ಆಗ ನಾನು ನನ್ನ ಹೃದಯದಲ್ಲಿ --ಮೂಢನಿಗೆ ಸಂಭವಿಸುವಂತೆ ನನಗೂ ಸಂಭವಿಸು ತ್ತದೆ. ಇದರಿಂದ ಯಾಕೆ ನಾನು ಹೆಚ್ಚು ಜ್ಞಾನದಿಂದ ಇದ್ದೇನೆ ಎಂದು ಅಂದುಕೊಂಡೆನು. ಆಗ ನಾನು ಇದೂ ವ್ಯರ್ಥವೆಂದು ನನ್ನ ಹೃದಯದಲ್ಲಿ ಅಂದು ಕೊಂಡೆನು. |
16. | ಮೂಢನಿಗಿಂತ ಜ್ಞಾನವಂತನ ಜ್ಞಾಪ ಕವು ಎಂದಿಗೂ ಇರುವದಿಲ್ಲ; ಈಗ ಇರುವದು ಬರುವ ದಿವಸಗಳಲ್ಲಿ ಮರೆಯಲ್ಪಡುತ್ತದೆ. ಮೂಢನಂತೆ ಜ್ಞಾನಿಯೂ ಸಾಯುವದು ಹೇಗೆ? |
17. | ಆದಕಾರಣ ಜೀವವನ್ನು ನಾನು ಹಗೆಮಾಡಿದೆನು; ಸೂರ್ಯನ ಕೆಳಗೆ ನಡೆಯುವ ಕಾರ್ಯವು ವ್ಯಥೆಯಾಗಿ ನನಗೆ ತೋರಿತು; ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕ ರವೂ ಆಗಿವೆ. |
18. | ಹೌದು, ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆಮಾಡಿದೆನು; ನನ್ನ ತರು ವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕು. |
19. | ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ. |
20. | ಆದದರಿಂದ ಸೂರ್ಯನ ಕೆಳಗೆ ಪ್ರಯಾಸ ಪಟ್ಟ ಎಲ್ಲಾ ಪ್ರಯಾಸದ ವಿಷಯವಾಗಿ ನನ್ನ ಹೃದಯವು ನಿರಾಶೆಗೊಳ್ಳುವಂತೆ ನಾನು ತಿರುಗಾಡಿದೆನು. |
21. | ಜ್ಞಾನ ದಲ್ಲಿಯೂ ತಿಳುವಳಿಕೆಯಲ್ಲಿಯೂ ಯಥಾರ್ಥವಾಗಿ ಪ್ರಯಾಸಪಟ್ಟ ಒಬ್ಬ ಮನುಷ್ಯನಿದ್ದಾನೆ; ಆದರೂ ಇವು ಗಳಲ್ಲಿ ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡುವನು. ಇದು ವ್ಯರ್ಥವೂ ದೊಡ್ಡ ಕೇಡೂ ಆಗಿದೆ. |
22. | ಸೂರ್ಯನ ಕೆಳಗೆ ತಾನು ಪ್ರಯಾಸ ಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ? |
23. | ಅವನ ದಿವಸಗಳೆಲ್ಲಾ ವ್ಯಸನಮಯವೇ, ಅವನ ಪ್ರಯಾಸವು ದುಃಖಮಯವೇ; ಹೌದು, ಅವನ ಹೃದಯವು ರಾತ್ರಿಯಲ್ಲಿ ವಿಶ್ರಾಂತಿತಕ್ಕೊಳ್ಳುವದಿಲ್ಲ. ಇದೂ ಕೂಡ ವ್ಯರ್ಥವೇ. |
24. | ತನ್ನ ಪ್ರಯಾಸದಲ್ಲಿ ತನ್ನ ಪ್ರಾಣವು ಸುಖವನ್ನು ಅನುಭವಿಸುವಂತೆ ಮಾಡುತ್ತಾ ತಿಂದು ಕುಡಿಯುವ ದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು. |
25. | ನನಗಿಂತ ಹೆಚ್ಚಾಗಿ ಯಾವನು ತಿನ್ನಲು ಶಕ್ತನು? ಯಾವನು ಅದಕ್ಕೆ ಆತುರ ಪಡಶಕ್ತನು? |
26. | ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ. |
← Ecclesiastes (2/12) → |