← Ephesians (2/6) → |
1. | ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು. |
2. | ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ; |
3. | ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು. |
4. | ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ |
5. | ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;) |
6. | ನಮ್ಮನ್ನು ಆತನ ಕೂಡ ಎಬ್ಬಿಸಿ ಕ್ರಿಸ್ತ ಯೇಸುವಿನಲ್ಲಿ ಆತನೊಂದಿಗೆ ಪರ ಲೋಕದ ಸ್ಥಳಗಳಲ್ಲಿ ಕೂಡ್ರಿಸಿದ್ದಾನೆ. |
7. | ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು. |
8. | ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ. |
9. | ಅದು ಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದ ವಿಲ್ಲ. |
10. | ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ. |
11. | ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ. |
12. | ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ. |
13. | ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ. |
14. | ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು. |
15. | ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು. |
16. | ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ. |
17. | ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು. |
18. | ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು. |
19. | ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ. |
20. | ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು; |
21. | ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ. |
22. | ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ. |
← Ephesians (2/6) → |