← Ephesians (5/6) → |
1. | ಆದದರಿಂದ ನೀವು ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ದೇವರನ್ನು ಅನುಸರಿಸುವ ವರಾಗಿರ್ರಿ. |
2. | ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ. |
3. | ಆದರೆ ನಿಮ್ಮೊಳಗೆ ಜಾರತ್ವವಾಗಲಿ ಯಾವ ಅಶುದ್ಧತ್ವವಾಗಲಿ ಇಲ್ಲವೆ ಲೋಭವಾಗಲಿ ಪರಿಶುದ್ಧರಿಗೆ ತಕ್ಕ ಹಾಗೆ ಇವುಗಳ ಹೆಸರನ್ನು ಒಂದು ಸಲವಾದರೂ ಎತ್ತಬಾರದು. |
4. | ಇಲ್ಲವೆ ಹೊಲಸುತನ ಹುಚ್ಚು ಮಾತು ಕುಚೋದ್ಯ ಇವು ಬೇಡ, ಅಯುಕ್ತವಾಗಿವೆ; ಇವು ಗಳನ್ನು ಬಿಟ್ಟು ಆತನಿಗೆ ಉಪಕಾರ ಸ್ತುತಿಮಾಡುವದೇ ಉತ್ತಮ. |
5. | ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ. |
6. | ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ. |
7. | ಆದದರಿಂದ ನೀವು ಅವರೊಂದಿಗೆ ಪಾಲುಗಾರ ರಾಗಿರಬೇಡಿರಿ. |
8. | ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ. |
9. | ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ. |
10. | ಕರ್ತನಿಗೆ ಮೆಚ್ಚಿಕೆಯಾದದ್ದೇ ನೆಂಬದನ್ನು ಪರಿಶೋಧಿಸಿರಿ. |
11. | ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ. |
12. | ಅವರು ರಹಸ್ಯವಾಗಿ ನಡಿಸುವ ಕೆಲಸ ಗಳನ್ನು ಕುರಿತು ಮಾತನಾಡುವದಾದರೂ ನಾಚಿಕೆಗೆ ಕಾರಣವಾಗಿದೆ. |
13. | ಆದರೆ ಖಂಡನೆಯಾಗುವವು ಗಳೆಲ್ಲವೂ ಬೆಳಕಿನಿಂದ ಪ್ರಕಟವಾಗುತ್ತವೆ; ಯಾಕಂದರೆ ಪ್ರಕಟಪಡಿಸುವಂಥದ್ದು ಬೆಳಕೇ. |
14. | ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ. |
15. | ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿರಿ. ಜ್ಞಾನವಿಲ್ಲದವರಾಗಿ ರದೆ ಜ್ಞಾನವಂತರಾಗಿರ್ರಿ. |
16. | ದಿನಗಳು ಕೆಟ್ಟವುಗಳಾಗಿರು ವದರಿಂದ ಕಾಲವನ್ನು ಸುಮ್ಮನೆ ಕಳೆಯದೆ ಉಪಯೋಗಿ ಸಿಕೊಳ್ಳಿರಿ. |
17. | ಬುದ್ದಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ. |
18. | ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ. |
19. | ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ. |
20. | ಯಾವಾಗಲೂ ಎಲ್ಲಾ ಕಾರ್ಯಗಳಿ ಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಇರ್ರಿ. |
21. | ಇದಲ್ಲದೆ ದೇವರಿಗೆ ಭಯಪಡುವವರಾಗಿದ್ದು ಒಬ್ಬರಿ ಗೊಬ್ಬರು ವಿಧೇಯರಾಗಿ ನಡೆದುಕೊಳ್ಳಿರಿ. |
22. | ಸ್ತ್ರೀಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. |
23. | ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಆತನು (ಕ್ರಿಸ್ತನು) ದೇಹಕ್ಕೆ ರಕ್ಷಕ ನಾಗಿದ್ದಾನೆ, |
24. | ಆದದರಿಂದ ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನ ರಾಗಿರಬೇಕು. |
25. | ಪುರಷರೇ, ನೀವು ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಯಾಕಂದರೆ ಕ್ರಿಸ್ತನು ಸಹ ಸಭೆಯನ್ನು ಪ್ರೀತಿಸಿ ಅದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು. |
26. | ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ |
27. | ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ. |
28. | ಹಾಗೆಯೇ ಪುರುಷರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೆ ಪ್ರೀತಿಸಿಕೊಳ್ಳುವನಾಗಿದ್ದಾನೆ. |
29. | ಯಾರೂ ಎಂದೂ ಸ್ವಶರೀರವನ್ನು ಹಗೆಮಾಡಿದ್ದಿಲ್ಲ. ಆದರೆ ಅದನ್ನು ಪೋಷಿಸಿ ಸಂರಕ್ಷಿಸುವ ಪ್ರಕಾರ ಕರ್ತನು ಸಭೆಯನ್ನು ಪೋಷಿಸಿ ಸಂರಕ್ಷಿಸುವಾತನಾಗಿದ್ದಾನೆ. |
30. | ನಾವು ಆತನ ದೇಹದ ಅಂಗಗಳೂ ಮಾಂಸವೂ ಎಲುಬುಗಳೂ ಆಗಿದ್ದೇವೆ. |
31. | ಇದರ ನಿಮಿತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿ ಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು. |
32. | ಇದೊಂದು ದೊಡ್ಡ ಮರ್ಮವೇ; ಆದರೆ ನಾನು ಕ್ರಿಸ್ತನ ವಿಷಯವಾಗಿಯೂ ಸಭೆಯ ವಿಷಯವಾಗಿಯೂ ಮಾತನಾಡುತ್ತೇನೆ. |
33. | ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು. |
← Ephesians (5/6) → |