← Ephesians (6/6) |
1. | ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆ ತಾಯಿಗಳಿಗೆ ವಿಧೇಯರಾಗಿರ್ರಿ; ಇದು ನ್ಯಾಯವಾದದ್ದು. |
2. | ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು, ಇದು ವಾಗ್ದಾನಸಹಿತವಾದ ಮೊದಲನೇ ಆಜ್ಞೆಯಾಗಿದೆ. |
3. | ಸನ್ಮಾನಿಸಿದರೆ ನಿನಗೆ ಮೇಲಾಗುವದು, ನೀನು ಭೂಮಿಯ ಮೇಲೆ ಬಹು ಕಾಲ ಬದುಕುವಿ. |
4. | ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ ಕರ್ತನ ಶಿಕ್ಷೆಯಲ್ಲಿಯೂ ಉಪದೇಶದಲ್ಲಿಯೂ ಅವರನ್ನು ಬೆಳೆಸಿರಿ. |
5. | ಸೇವಕರೇ, ಶಾರೀರಕ್ಕನುಸಾರವಾಗಿ ನಿಮ್ಮ ಯಜ ಮಾನರಾಗಿರುವವರಿಗೆ ಕ್ರಿಸ್ತನಿಗೆಂದು ಹೃದಯ ಪೂರ್ವಕವಾಗಿ ನಡುಗುತ್ತಾ ವಿಧೇಯರಾಗಿರ್ರಿ. |
6. | ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಕಣ್ಣಿಗೆ ಕಾಣುವಾಗ ಮಾತ್ರ ಸೇವೆ ಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಹೃದಯ ಪೂರ್ವಕವಾಗಿ ನಡಿಸಿರಿ. |
7. | ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆ ಮಾಡುತ್ತೇವೆಂದು ಒಳ್ಳೇ ಮನಸ್ಸಿನಿಂದ ಸೇವೆಮಾಡಿರಿ. |
8. | ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬದನ್ನು ನೀವು ತಿಳಿದವರಾಗಿಯೇ ಇದ್ದೀರಿ. |
9. | ಯಜಮಾನರೇ, ನೀವು ಅದೇ ರೀತಿಯಾಗಿ ಮಾಡಿರಿ. ಪರಲೋಕದಲ್ಲಿ ನಿಮ್ಮ ಯಜಮಾನನಾಗಿರು ವಾತನಿದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ಅವರನ್ನು ಬೆದರಿಸುವದನ್ನು ಬಿಟ್ಟುಬಿಡಿರಿ. |
10. | ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ. |
11. | ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ. |
12. | ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ. |
13. | ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ. |
14. | ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. |
15. | ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. |
16. | ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ. |
17. | ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ. |
18. | ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ. |
19. | ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ. |
20. | ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ. |
21. | ಆದರೆ ನನ್ನ ವಿಷಯಗಳು ನಿಮಗೆ ಸಹ ಗೊತ್ತಾ ಗುವ ಹಾಗೆಯೂ ನಾನು ಹೇಗಿದ್ದೇನೆಂದು ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತನಾದ ಸೇವಕನೂ ಆಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸುವನು. |
22. | ನೀವು ನಮ್ಮ ಸಮಾಚಾರವನ್ನು ತಿಳುಕೊಳ್ಳುವ ಹಾಗೆಯೂ ಅವನು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. |
23. | ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯು ನಂಬಿಕೆಯಿಂದ ಕೂಡಿದ ಪ್ರೀತಿಯು ಸಹೋದರರಿಗೆ ಇರಲಿ. |
24. | ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್. |
← Ephesians (6/6) |