← Exodus (12/40) → |
1. | ಕರ್ತನು ಐಗುಪ್ತದಲ್ಲಿ ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ-- |
2. | ಈ ತಿಂಗಳೇ ನಿಮಗೆ ಆದಿಮಾಸವಾಗಿರಬೇಕು. ಇದು ನಿಮಗೆ ವರುಷದ ಮೊದಲನೆಯ ತಿಂಗಳಾಗಿರುವದು. |
3. | ಇಸ್ರಾಯೇಲ್ ಸಭೆಗೆಲ್ಲಾ ನೀವು ಹೇಳಬೇಕಾದದ್ದೇ ನಂದರೆ--ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಒಂದೊಂದು ಕುರಿಮರಿಯನ್ನು ಅವರ ತಂದೆಗಳ ಮನೆಯ ಪ್ರಕಾರ ಮನೆಗೆ ಒಂದು ಕುರಿಮರಿಯನ್ನು ತಕ್ಕೊಳ್ಳಬೇಕು. |
4. | ಒಂದು ಕುರಿಮರಿಯನ್ನು ತಿನ್ನುವದಕ್ಕೆ ಕುಟುಂಬವು ಚಿಕ್ಕದಾಗಿದ್ದರೆ ಅವನೂ ತನ್ನ ಮನೆಗೆ ಸವಿಾಪವಾಗಿರುವ ತನ್ನ ನೆರೆಯವನೂ ವ್ಯಕ್ತಿಗಳ ಲೆಕ್ಕದ ಪ್ರಕಾರ ಒಂದನ್ನು ತಕ್ಕೊಳ್ಳಲಿ; ಒಬ್ಬೊಬ್ಬನು ತಾನು ತಿನ್ನುವ ಅಳತೆಯ ಪ್ರಕಾರ ಕುರಿಮರಿಯನ್ನು ತಕ್ಕೊಳ್ಳಲಿ. |
5. | ನಿಮ್ಮ ಕುರಿಮರಿಯು ನಿರ್ದೋಷವಾಗಿರುವ ಒಂದು ವರುಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಮೇಕೆಗಳಿಂದಾಗಲಿ ಅದನ್ನು ತಕ್ಕೊ ಳ್ಳಬೇಕು. |
6. | ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು. |
7. | ರಕ್ತದಲ್ಲಿ ಸ್ವಲ್ಪ ತೆಗೆದು ಅವರು ಊಟ ಮಾಡುವ ಮನೆಗಳ ಎರಡು ನಿಲುವು ಗಂಬಗ ಳಿಗೂ ಬಾಗಿಲ ಮೇಲಿನ ಅಡ್ಡಗಂಬಕ್ಕೂ ಹಚ್ಚಬೇಕು. |
8. | ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು. |
9. | ಅದರಲ್ಲಿ ಯಾವದನ್ನೂ ಹಸಿಯಾದದ್ದಾಗಲಿ ನೀರಿ ನಲ್ಲಿ ಬೇಯಿಸಿದ್ದಾಗಲಿ ತಿನ್ನದೆ ಅದರ ತಲೆ ತೊಡೆ ಒಳಗಿನವುಗಳ ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ಅದನ್ನು ತಿನ್ನಬೇಕು. |
10. | ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು. ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. |
11. | ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ. |
12. | ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು. |
13. | ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ. |
14. | ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು. |
15. | ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು. |
16. | ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ಸಭೆಯೂ ಏಳನೆಯ ದಿನದಲ್ಲಿ ಪರಿಶುದ್ಧ ಸಭೆಯೂ ನಿಮಗೆ ಇರಬೇಕು. ಊಟಮಾಡುವದನ್ನು ಬಿಟ್ಟು ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡ ಬಾರದು. |
17. | ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬ ವನ್ನು ಆಚರಿಸಬೇಕು. ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ್ದೇನೆ; ಆದಕಾರಣ ನಿಮ್ಮ ಸಂತತಿಗಳಲ್ಲಿ ಸದಾ ಕಾಲಕ್ಕೂ ಒಂದು ಶಾಸನವಾಗಿ ಈ ದಿನವನ್ನು ನೀವು ಆಚರಿಸಬೇಕು. |
18. | ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ಆ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. |
19. | ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್ ಸಭೆಯೊಳಗಿಂದ ತೆಗೆದು ಹಾಕಬೇಕು. |
20. | ಹುಳಿಕಲಸಿದ್ದು ಯಾವದೇ ಆಗಿರಲಿ ನೀವು ತಿನ್ನಬಾರದು; ನಿಮ್ಮ ಎಲ್ಲಾ ನಿವಾಸ ಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು ಎಂದು ಹೇಳಿದನು. |
21. | ಆಗ ಮೋಶೆಯು ಇಸ್ರಾಯೇಲಿನ ಎಲ್ಲಾ ಹಿರಿಯ ರನ್ನು ಕರೆದು ಅವರಿಗೆ--ನಿಮ್ಮ ಗೋತ್ರಗಳ ಪ್ರಕಾರ ಕುರಿಗಳನ್ನು ತೆಗೆದುಕೊಂಡು ಪಸ್ಕವನ್ನು (ಕುರಿಯನ್ನು) ಕೊಯ್ಯಿರಿ. |
22. | ಹಿಸ್ಸೋಪಿನ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿ ಲಿನ ಮೇಲಿನ ಅಡ್ಡಗಂಬಕ್ಕೂ ಪಕ್ಕದಲ್ಲಿರುವ ಎರಡು ನಿಲುವುಗಂಬಗಳಿಗೂ ಹಚ್ಚಿರಿ. ನಿಮ್ಮಲ್ಲಿ ಯಾರೂ ಬೆಳಗಾಗುವ ವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೋಗಬಾರದು. |
23. | ಕರ್ತನು ಐಗುಪ್ತ್ಯರನ್ನು ಸಂಹರಿ ಸುವದಕ್ಕಾಗಿ ಹಾದುಹೋಗುವನು; ಆತನು ಮೇಲಿನ ಅಡ್ಡಗಂಬದ ಮೇಲೂ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡ ದಂತೆ ನಿಮ್ಮ ಬಾಗಿಲುಗಳನ್ನು ದಾಟಿ ಹೋಗುವನು. |
24. | ಇದನ್ನು ಒಂದು ಶಾಸನವಾಗಿ ನೀವೂ ನಿಮ್ಮ ಕುಮಾರರೂ ಸದಾಕಾಲಕ್ಕೂ ಇದನ್ನು ಆಚರಿಸತಕ್ಕದ್ದು. |
25. | ಕರ್ತನು ಕೊಡುವೆನೆಂದು ಪ್ರಮಾಣಮಾಡಿದ ದೇಶಕ್ಕೆ ನೀವು ಬಂದಾಗ ಈ ಆಚರಣೆಯನ್ನು ನೀವು ಕೈಕೊಳ್ಳಬೇಕು. |
26. | ನಿಮ್ಮ ಮಕ್ಕಳು ಈ ಆಚಾರದ ಅರ್ಥವೇನು ಎಂದು ಕೇಳಿದಾಗ |
27. | ನೀವು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ಐಗುಪ್ತ್ಯರನ್ನು ಸಂಹರಿಸಿ ನಮ್ಮ ಮನೆಗಳನ್ನು ಕಾಪಾಡುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಮನೆಗಳನ್ನು ದಾಟಿಹೋದ ಕರ್ತನ ಪಸ್ಕವೇ ಇದು ಎಂದು ನೀವು ಹೇಳಬೇಕು ಅಂದನು. ಆಗ ಜನರು ತಲೆಬಾಗಿಸಿ ಆರಾಧಿಸಿದರು. |
28. | ಇಸ್ರಾಯೇಲ್ ಮಕ್ಕಳು ಹೊರಟುಹೋಗಿ ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದ ಮೇರೆಗೆ ಅವರು ಮಾಡಿದರು. |
29. | ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು. |
30. | ಆಗ ಫರೋಹನೂ ಅವನ ಎಲ್ಲಾ ಸೇವಕರೂ ಎಲ್ಲಾ ಐಗುಪ್ತ್ಯರೂ ರಾತ್ರಿಯಲ್ಲಿ ಎದ್ದರು. ಆಗ ಐಗುಪ್ತದಲ್ಲಿ ದೊಡ್ಡ ಗೋಳಾಟವಾಯಿತು. ಅಲ್ಲಿ ಸತ್ತವರಿಲ್ಲದ ಒಂದು ಮನೆಯಾದರೂ ಇರಲಿಲ್ಲ. |
31. | ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ--ನೀವು ಎದ್ದು ನನ್ನ ಜನರೊ ಳಗಿಂದ ಹೊರಟು ಹೋಗಿರಿ; ನೀವು ಹೇಳಿದ ಹಾಗೆಯೇ ಕರ್ತನನ್ನು ಸೇವಿಸುವದಕ್ಕೆ ನೀವೂ ಇಸ್ರಾಯೇಲ್ ಮಕ್ಕಳೂ ಹೋಗಿಬಿಡಿರಿ. |
32. | ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ ಅಂದನು. |
33. | ಇದಲ್ಲದೆ ಐಗುಪ್ತ್ಯರು--ನಾವೆಲ್ಲರೂ ಸಾಯುತ್ತೇವೆಂದು ಹೇಳಿ ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ಜನರನ್ನು ಒತ್ತಾಯ ಮಾಡಿದರು. |
34. | ಆದದರಿಂದ ಜನರು ಹಿಟ್ಟಿಗೆ ಹುಳಿ ಹಾಕುವದಕ್ಕಿಂತ ಮುಂಚೆ ಅದನ್ನು ಅಡಿಗೆ ಮಾಡುವ ಪಾತ್ರೆಗಳ ಸಂಗಡ ಬಟ್ಟೆಗಳಲ್ಲಿ ಕಟ್ಟಿ ಹೆಗಲಿನ ಮೇಲೆ ಹೊತ್ತುಕೊಂಡು ಹೋದರು. |
35. | ಮೋಶೆಯು ಹೇಳಿದಂತೆ ಇಸ್ರಾ ಯೇಲ್ ಮಕ್ಕಳು ಮಾಡಿ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಐಗುಪ್ತ್ಯರಿಂದ ಕೇಳಿ ಪಡೆದರು. |
36. | ಕರ್ತನು ಐಗುಪ್ತ್ಯರ ಎದುರಿನಲ್ಲಿ ಜನರ ಮೇಲೆ ಕೃಪೆ ತೋರಿಸಿದ್ದರಿಂದ ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಐಗುಪ್ತ್ಯರನ್ನು ಸುಲು ಕೊಂಡರು. |
37. | ಆಗ ಇಸ್ರಾಯೇಲ್ಯರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಕಾಲು ನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣ ಮಾಡಿದರು. |
38. | ಬೆರೆತಿದ್ದ ಜನಸಮೂಹವೂ ಕುರಿದನಗಳ ಬಹು ದೊಡ್ಡ ಹಿಂಡೂ ಅವರ ಸಂಗಡ ಹೋದವು. |
39. | ಆಗ ಅವರು ಐಗುಪ್ತದಿಂದ ತಂದಿದ್ದ ನಾದಿದ ಹಿಟ್ಟು ಇನ್ನೂ ಹುಳಿ ಯಾಗದ ಕಾರಣ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿ ಗಳನ್ನು ಮಾಡಿದರು; ಯಾಕಂದರೆ ಅವರನ್ನು ಅಲ್ಲಿ ನಿಲ್ಲಗೊಡದೆ ಐಗುಪ್ತದಿಂದ ಓಡಿಸಿಬಿಟ್ಟಿದ್ದರು. ಅವರು ತಮಗಾಗಿ ಯಾವ ಆಹಾರವನ್ನು ಸಿದ್ಧಪಡಿಸಿಕೊಂಡಿ ರಲಿಲ್ಲ. |
40. | ಇಸ್ರಾಯೇಲ್ ಮಕ್ಕಳು ಐಗುಪ್ತದಲ್ಲಿ ಪ್ರವಾ ಸವಾಗಿ ವಾಸಮಾಡಿದ್ದ ಕಾಲವು ನಾನೂರ ಮೂವತ್ತು ವರುಷಗಳಾಗಿದ್ದವು. |
41. | ನಾನೂರ ಮೂವತ್ತು ವರುಷ ಗಳು ತೀರಿದ ತರುವಾಯ ಅದೇ ದಿನದಲ್ಲಿ ಕರ್ತನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಗೆ ಹೋದವು. |
42. | ಆತನು ಐಗುಪ್ತದೇಶದಿಂದ ಅವರನ್ನು ಹೊರಗೆ ತಂದ ಕಾರಣ ಇದು ಕರ್ತನಿಗೆ ಆಚರಿಸ ಬೇಕಾದ ರಾತ್ರಿಯಾಗಿತ್ತು. ಇಸ್ರಾಯೇಲ್ ಮಕ್ಕಳೆ ಲ್ಲರೂ ತಮ್ಮ ಸಂತತಿಗಳಲ್ಲಿ ಕರ್ತನಿಗೆ ಆಚರಿಸ ಬೇಕಾದ ರಾತ್ರಿಯು ಇದೇ. |
43. | ಕರ್ತನು ಮೋಶೆ ಆರೋನರಿಗೆ--ಪಸ್ಕದ ಶಾಸನವು ಇದೇ: ಅನ್ಯರಲ್ಲಿ ಯಾರೂ ಅದನ್ನು ತಿನ್ನ ಬಾರದು. |
44. | ಆದರೆ ಹಣಕ್ಕೆ ತೆಗೆದುಕೊಂಡ ಪ್ರತಿ ಯೊಬ್ಬನ ಸೇವಕನನ್ನು ನೀನು ಸುನ್ನತಿಮಾಡಿಸಿದ ತರುವಾಯ ಅವನು ಅದನ್ನು ತಿನ್ನಬಹುದು. |
45. | ಪರ ದೇಶದವರೂ ಕೂಲಿಯವರೂ ಅದನ್ನು ತಿನ್ನಬಾರದು. |
46. | ಒಂದೇ ಮನೆಯಲ್ಲಿ ಅದನ್ನು ತಿನ್ನಬೇಕು. ಆ ಮಾಂಸ ದಲ್ಲಿ ಸ್ವಲ್ಪ ಅಂಶವನ್ನಾದರೂ ಮನೆಯ ಹೊರಗೆ ತೆಗೆದುಕೊಂಡು ಹೋಗಬಾರದು. ಪಶುವಿನ ಒಂದು ಎಲುಬಾದರೂ ಮುರಿಯಬಾರದು. |
47. | ಇಸ್ರಾಯೇಲಿನ ಸಭೆಯೆಲ್ಲಾ ಇದನ್ನು ಆಚರಿಸಬೇಕು. |
48. | ನಿನ್ನ ಜೊತೆ ಯಲ್ಲಿ ಪ್ರವಾಸಮಾಡಿದ ಅನ್ಯನು ಕರ್ತನಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ; ತರುವಾಯ ಅವನು ಅದನ್ನು ಆಚರಿಸುವದಕ್ಕೆ ಸವಿಾಪ ಬರಲಿ; ಅಂಥವನು ಸ್ವದೇಶ ದಲ್ಲಿ ಹುಟ್ಟಿದವನಂತೆ ಇರುವನು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು. |
49. | ಮನೆಯಲ್ಲಿ ಹುಟ್ಟಿದವನಿಗೂ ನಿಮ್ಮಲ್ಲಿ ಪ್ರವಾಸಿ ಯಾಗಿರುವ ಅನ್ಯನಿಗೂ ಒಂದೇ ನ್ಯಾಯಪ್ರಮಾಣ ವಿರಬೇಕು ಎಂದು ಹೇಳಿದನು. |
50. | ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ ಮಕ್ಕಳೆಲ್ಲಾ ಮಾಡಿದರು. |
51. | ಅದೇ ದಿನದಲ್ಲಿ ಕರ್ತನು ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೇಶದೊಳಗಿಂದ ಹೊರಗೆ ತಂದನು. |
← Exodus (12/40) → |