← Exodus (15/40) → |
1. | ಆಗ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ. |
2. | ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು. |
3. | ಕರ್ತನು ಯುದ್ಧ ಶೂರನು; ಕರ್ತನು ಎಂಬದೇ ಆತನ ಹೆಸರು. |
4. | ಆತನು ಫರೋಹನ ರಥಗಳನ್ನೂ ಅವನ ಸೈನ್ಯವನ್ನೂ ಸಮುದ್ರ ದಲ್ಲಿ ನೂಕಿದ್ದಾನೆ; ಆಯಲ್ಪಟ್ಟ ಅವನ ಅಧಿಪತಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿಹೋದರು. |
5. | ಅಗಾಧಗಳು ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ (ಸಮುದ್ರದ) ತಳಕ್ಕೆ ಮುಳುಗಿದರು. |
6. | ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು. |
7. | ನಿನ್ನ ಮಹತ್ತಾದ ಘನತೆಯಲ್ಲಿ ನಿನಗೆ ವಿರೋಧವಾಗಿ ಎದ್ದವರನ್ನು ಕೆಡವಿ ಬಿಟ್ಟಿರುವಿ. ನಿನ್ನ ರೌದ್ರವು ಹೊರಟು ಅವರನ್ನು ಹುಲ್ಲಿನಂತೆ ದಹಿಸಿಬಿಟ್ಟಿತು. |
8. | ನಿನ್ನ ಮೂಗಿನ ಬಿರುಸಾದ ಗಾಳಿ ಯಿಂದ ನೀರುಗಳು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು; ಸಮುದ್ರದ ಅಗಾಧಗಳ ನೀರು ಗಟ್ಟಿಯಾದವು. |
9. | ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು. |
10. | ನೀನು ನಿನ್ನ ಗಾಳಿಯನ್ನು ಊದಿದಾಗ ಸಮುದ್ರವು ಅವರನ್ನು ಮುಚ್ಚಿಕೊಂಡಿತು. ಅವರು ಸೀಸದಂತೆ ಮಹಾಜಲಗಳಲ್ಲಿ ಮುಳುಗಿ ಹೊದರು. |
11. | ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ? |
12. | ನೀನು ನಿನ್ನ ಬಲಗೈಯನ್ನು ಚಾಚಲು ಭೂಮಿಯು ಅವರನ್ನು ನುಂಗಿತು. |
13. | ನೀನು ವಿಮೋಚಿ ಸಿದ ಜನರನ್ನು ಕರುಣೆಯಿಂದ ನಡಿಸಿದಿ; ನೀನು ಅವ ರನ್ನು ನಿನ್ನ ಬಲದಿಂದ ನಿನ್ನ ಪರಿಶುದ್ಧ ನಿವಾಸಕ್ಕೆ ನಡಿಸಿದಿ. |
14. | ಜನರು ಇದನ್ನು ಕೇಳಿ ಭಯಪಡುವರು; ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವದು. |
15. | ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು. |
16. | ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು. |
17. | ನೀನು ಅವರನ್ನು ಒಳಗೆ ಬರಮಾಡಿ ಓ ಕರ್ತನೇ, ನಿನ್ನ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ (ಓ ಕರ್ತನೇ,) ನೀನು ವಾಸಿಸುವದಕ್ಕೆ ಮಾಡಿಕೊಂಡಿರುವ ನಿನ್ನ ಸ್ವಾಸ್ಥ್ಯದ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿ. |
18. | ಕರ್ತನು ಯುಗಯುಗಾಂತರಗಳ ವರೆಗೆ ಆಳುವನು. |
19. | ಫರೋ ಹನ ಕುದುರೆಗಳು ಅವನ ರಥಗಳ ಸಂಗಡಲೂ ಸವಾರರ ಸಂಗಡಲೂ ಸಮುದ್ರದೊಳಗೆ ಬಂದಾಗ ಕರ್ತನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರ ಮಾಡಿದನು; ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣನೆಲದ ಮೇಲೆ ಹೋದರು. |
20. | ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು. |
21. | ಮಿರ್ಯಾಮಳು ಅವರಿಗೆ ಕೊಟ್ಟ ಉತ್ತರವೇನಂದರೆ--ನೀವು ಕರ್ತನಿಗೆ ಹಾಡಿರಿ, ಆತನು ಮಹಿಮೆಯಿಂದ ಜಯಿಸಿದ್ದಾನೆ; ಕುದುರೆಯನ್ನು ಸವಾರ ನನ್ನು ಸಮುದ್ರದಲ್ಲಿ ಹಾಕಿದ್ದಾನೆ ಎಂಬದು. |
22. | ಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ. |
23. | ಅವರು ಮಾರಾಗೆ ಬಂದ ಮೇಲೆ ಮಾರಾದ ನೀರನ್ನು ಕುಡಿಯಲಾರದೆ ಇದ್ದರು; ಯಾಕಂದರೆ ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು ಮಾರಾ ಎಂದು ಕರೆಯಲ್ಪಟ್ಟಿತು. |
24. | ಆದದ ರಿಂದ ಜನರು--ನಾವು ಏನು ಕುಡಿಯೋಣ ಎಂದು ಹೇಳಿ ಮೋಶೆಗೆ ವಿರೋಧವಾಗಿ ಗುಣುಗುಟ್ಟಿದರು. |
25. | ಅವನು ಕರ್ತನಿಗೆ ಮೊರೆಯಿಟ್ಟನು; ಆಗ ಕರ್ತನು ಅವನಿಗೆ ಒಂದು ಮರವನ್ನು ತೋರಿಸಿದನು; ಅವನು ಅದನ್ನು ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಗಿ ಮಾಡಲ್ಪಟ್ಟಿತು; ಅಲ್ಲಿ ಆತನು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿ, ಅಲ್ಲಿಯೇ ಅವರನ್ನು ಪರೀಕ್ಷಿಸಿದನು. |
26. | ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು. |
27. | ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು. |
← Exodus (15/40) → |