← Exodus (20/40) → |
1. | ದೇವರು ಈ ಎಲ್ಲಾ ವಾಕ್ಯಗಳನ್ನು ಹೇಳಿದನು. ಅವು ಯಾವವಂದರೆ-- |
2. | ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ. |
3. | ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು. |
4. | ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು. |
5. | ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು. |
6. | ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆ ಗಳನ್ನು ಕೈಕೊಳ್ಳುವವರಿಗೆ ಸಾವಿರ ತಲೆಗಳ ವರೆಗೆ ದಯೆತೋರಿಸುವೆನು. |
7. | ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬಾರದು. ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ. |
8. | ಸಬ್ಬತ್ ದಿನವನ್ನು ಪರಿಶುದ್ಧವಾಗಿ ಇರುವಂತೆ ಜ್ಞಾಪಕದಲ್ಲಿಟ್ಟುಕೋ. |
9. | ನೀನು ಆರು ದಿನಗಳು ದುಡಿದು ನಿನ್ನ ಕೆಲಸಗಳನ್ನೆಲ್ಲಾ ಮಾಡಿಕೋ. |
10. | ಆದರೆ ಏಳನೆಯ ದಿನವು ನಿನ್ನ ದೇವರಾದ ಕರ್ತನ ಸಬ್ಬತ್ ಆಗಿದೆ. ಅದರಲ್ಲಿ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು. |
11. | ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು. |
12. | ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು. |
13. | ಕೊಲೆ ಮಾಡಬಾರದು. |
14. | ವ್ಯಭಿಚಾರ ಮಾಡಬಾರದು. |
15. | ಕದಿಯಬಾರದು. |
16. | ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳು ಸಾಕ್ಷಿ ಹೇಳಬಾರದು. |
17. | ನೀನು ನಿನ್ನ ನೆರೆಯವನ ಮನೆಯನ್ನು ಆಶಿಸ ಬಾರದು, ನಿನ್ನ ನೆರೆಯವನ ಹೆಂಡತಿಯನ್ನೂ ಆಶಿಸ ಬಾರದು; ಅವನ ದಾಸನನ್ನಾಗಲಿ ದಾಸಿಯನ್ನಾಗಲಿ ಎತ್ತನ್ನಾಗಲಿ ಕತ್ತೆಯನ್ನಾಗಲಿ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬಾರದು ಎಂದು ಹೇಳಿದನು. |
18. | ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟವು ಹೊಗೆ ಹಾಯು ವದನ್ನೂ ನೋಡಿದರು; ಜನರು ಅದನ್ನು ನೋಡಿ ದೂರ ಹೋಗಿ ನಿಂತುಕೊಂಡರು. |
19. | ಅವರು ಮೋಶೆಗೆ--ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮ ಸಂಗಡ ಮಾತನಾಡದಿರಲಿ ಅಂದರು. |
20. | ಆಗ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ, ನಿಮ್ಮನ್ನು ಪರೀಕ್ಷಿಸುವದಕ್ಕೂ ನೀವು ಪಾಪ ಮಾಡದಂತೆ ಆತನ ಭಯವು ನಿಮಗಿರುವದಕ್ಕೂ ದೇವರು ಬಂದಿದ್ದಾನೆ ಅಂದನು. |
21. | ಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು. |
22. | ಕರ್ತನು ಮೋಶೆಗೆ--ನೀನು ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳಬೇಕು--ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ. |
23. | ನನ್ನ ಹೊರತಾಗಿ ಬೆಳ್ಳಿ ಬಂಗಾರದ ದೇವರುಗಳನ್ನೂ ನೀವು ಮಾಡಿಕೊಳ್ಳಬಾರದು. |
24. | ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು. |
25. | ನೀನು ನನಗೆ ಯಜ್ಞವೇದಿ ಯನ್ನು ಕಲ್ಲಿನಿಂದ ಮಾಡಿದರೆ ಅದನ್ನು ಕೆತ್ತಿದ ಕಲ್ಲಿನಿಂದ ಕಟ್ಟಬಾರದು. ಉಳಿಯನ್ನು ಅದರ ಮೇಲೆ ಎತ್ತಿದರೆ ನೀನು ಅದನ್ನು ಅಪವಿತ್ರ ಮಾಡಿದವನಾಗಿದ್ದೀ. |
26. | ಇಲ್ಲವೆ ನೀನು ನನ್ನ ಯಜ್ಞವೇದಿಯ ಮೇಲೆ ನಿನ್ನ ಬೆತ್ತಲೆಯು ಕಾಣುವಂತೆ ಅದರ ಮೆಟ್ಟಲುಗಳನ್ನು ಹತ್ತಬಾರದು ಎಂದು ಹೇಳಿದನು. |
← Exodus (20/40) → |