← Exodus (21/40) → |
1. | ಈಗ ಅವರ ಮುಂದೆ ನೀನು ಇಡತಕ್ಕನ್ಯಾಯವಿಧಿಗಳು ಇವೇ. |
2. | ನೀನು ಇಬ್ರಿಯ ದಾಸನನ್ನು ಕೊಂಡುಕೊಂಡರೆ ಅವನು ಆರು ವರುಷ ನಿನಗೆ ಸೇವೆಮಾಡಬೇಕು; ಏಳನೆಯ ವರುಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಅವನು ಹೋಗಲಿ. |
3. | ಅವನು ಒಬ್ಬನಾಗಿ ಬಂದಿದ್ದರೆ ಒಬ್ಬನಾಗಿಯೇ ಹೋಗ ಬೇಕು. ಅವನು ಮದುವೆಯಾದವನಾಗಿದ್ದರೆ ಅವನ ಹೆಂಡತಿಯು ಅವನ ಸಂಗಡ ಹೋಗಬೇಕು. |
4. | ಅವನ ಯಜಮಾನನು ಅವನಿಗೆ ಕೊಟ್ಟ ಹೆಂಡತಿಯು ಅವನಿಗೆ ಕುಮಾರರನ್ನೂ ಕುಮಾರ್ತೆಯರನ್ನೂ ಹೆತ್ತಿದ್ದರೆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನವ ರಾಗಿರಬೇಕು. ಅವನು ಒಬ್ಬನಾಗಿಯೇ ಹೋಗಬೇಕು. |
5. | ಆದರೆ ದಾಸನು--ನಾನು ನನ್ನ ಯಜಮಾನನನ್ನೂ ನನ್ನ ಹೆಂಡತಿಯನ್ನೂ ನನ್ನ ಮಕ್ಕಳನ್ನೂ ಪ್ರೀತಿ ಮಾಡು ತ್ತೇನೆ. ಆದದರಿಂದ ನಾನು ಬಿಡುಗಡೆಯಾಗಿ ಹೋಗು ವದಕ್ಕೆ ಮನಸ್ಸಿಲ್ಲ ಎಂದು ಸ್ಪಷ್ಟವಾಗಿ ಹೇಳಿದರೆ |
6. | ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು ಬಾಗಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ ಅವನ ಯಜಮಾ ನನು ಅವನ ಕಿವಿಯನ್ನು ಸಲಾಕಿಯಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ಸೇವೆಮಾಡಬೇಕು. |
7. | ಒಬ್ಬನು ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ ದಾಸರು ಹೋಗುವಂತೆ ಆಕೆಯು ಹೋಗಬಾರದು. |
8. | ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಅವಳು ಮೆಚ್ಚಿಕೆಯಾಗದೆ ಹೋದರೆ ಅವಳು ಬಿಡುಗಡೆಯಾಗುವಂತೆ ಮಾಡಲಿ; ಅವನು ಅವಳನ್ನು ವಂಚಿಸಿದ್ದರಿಂದ ಅನ್ಯರಿಗೆ ಅವಳನ್ನು ಮಾರು ವದಕ್ಕೆ ಅವನಿಗೆ ಅಧಿಕಾರವಿಲ್ಲ. |
9. | ಒಂದು ವೇಳೆ ಅವನು ತನ್ನ ಮಗನಿಗೆ ಅವಳನ್ನು ನಿಶ್ಚಯಮಾಡಿದರೆ ಹೆಣ್ಣು ಮಕ್ಕಳ ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕು. |
10. | ಒಂದು ವೇಳೆ ಅವನು ತನಗೆ ಇನ್ನೊಬ್ಬ ಹೆಂಡತಿ ಯನ್ನು ತಕ್ಕೊಂಡರೆ ಅವಳ ಅನ್ನ ವಸ್ತ್ರ ಸಹವಾಸಗಳನ್ನು ಕಡಿಮೆಮಾಡಬಾರದು. |
11. | ಈ ಮೂರನ್ನು ಅವಳಿಗೆ ಮಾಡದೆ ಹೋದರೆ ಅವಳು ಹಣಕೊಡದೆ ಸ್ವತಂತ್ರ ಳಾಗಿ ಹೋಗಬಹುದು. |
12. | ಮನುಷ್ಯನನ್ನು ಸಾಯುವಂತೆ ಹೊಡೆದವನು ಖಂಡಿತವಾಗಿ ಸಾಯಬೇಕು. |
13. | ಆದರೆ ಅವನು ಹೊಂಚಿ ನೋಡದೆ ಇದ್ದು ದೇವರು ಅವನ ಕೈಗೆ ಅವನನ್ನು ಒಪ್ಪಿಸಿದ್ದಾಗಿದ್ದರೆ ಅವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಿನಗೆ ನಾನು ನೇಮಿಸುವೆನು. |
14. | ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು. |
15. | ತಂದೆ ತಾಯಿಗಳನ್ನು ಹೊಡೆಯುವವನು ಖಂಡಿತವಾಗಿ ಸಾಯಬೇಕು. |
16. | ಮನುಷ್ಯನನ್ನು ಕದ್ದವನಿಗೆ ಅವನನ್ನು ಮಾರಿದರೂ ತನ್ನಲ್ಲಿಯೇ ಇಟ್ಟುಕೊಂಡರೂ ಅವನು ಖಂಡಿತವಾಗಿ ಸಾಯಬೇಕು. |
17. | ತಂದೆಗಾದರೂ ತಾಯಿಗಾದರೂ ಶಾಪಕೊಟ್ಟ ವನು ಖಂಡಿತವಾಗಿ ಸಾಯಬೇಕು. |
18. | ಇಬ್ಬರು ಜಗಳವಾಡುವಾಗ ಒಬ್ಬನು ಮತ್ತೊಬ್ಬ ನನ್ನು ಕಲ್ಲಿನಿಂದಾಗಲಿ ಮುಷ್ಟಿಯಿಂದಾಗಲಿ ಹೊಡೆದ ದ್ದರಿಂದ ಅವನು ಸಾಯದೆ ಹಾಸಿಗೆಯಲ್ಲಿ ಬಿದ್ದರೆ |
19. | ಅವನು ಎದ್ದು ಕೋಲೂರಿಕೊಂಡು ತಿರುಗಾಡು ವಾಗ ಅವನಿಗೆ ಹೊಡೆದವನು ಅಪರಾಧವಿಲ್ಲದೆ ಹೋಗಬೇಕು. ಅವನ ನಷ್ಟವಾದ ಸಮಯಕ್ಕಾಗಿ ಮಾತ್ರ ಅವನಿಗೆ ಹಣ ಕೊಡಬೇಕು. ಅವನನ್ನು ಪೂರ್ಣ ಸ್ವಸ್ಥಮಾಡಿಸಬೇಕು. |
20. | ಒಬ್ಬನು ದಾಸನನ್ನಾಗಲಿ ದಾಸಿಯನ್ನಾಗಲಿ ಸಾಯು ವಂತೆ ತನ್ನ ಕೋಲಿನಿಂದ ಹೊಡೆದರೆ ಅವನಿಗೆ ಖಂಡಿತವಾಗಿ ಶಿಕ್ಷೆಯಾಗಬೇಕು. |
21. | ಆದರೂ ಅವನು ಒಂದೆರೆಡು ದಿನಗಳು ಉಳಿದರೆ ಶಿಕ್ಷೆಯಾಗಬಾರದು. ಅವನು ಅವನ ಸೊತ್ತು. |
22. | ಮನುಷ್ಯರು ಜಗಳವಾಡುತ್ತಿರಲಾಗಿ ಗರ್ಭಿಣಿ ಯಾದ ಸ್ತ್ರೀಗೆ ಏಟು ತಗಲಿದದರಿಂದ ಅವಳಿಗೆ ಗರ್ಭ ಸ್ರಾವವೇ ಹೊರತಾಗಿ ಬೇರೆ ಯಾವ ಹಾನಿಯೂ ಆಗದೆ ಹೋದರೆ ಸ್ತ್ರೀಯ ಗಂಡನು ನ್ಯಾಯಾಧಿಪತಿಗಳ ಸಮ್ಮತಿಯಿಂದ ಎಷ್ಟು ಹಣವನ್ನು ಗೊತ್ತು ಮಾಡು ತ್ತಾನೋ ಹೊಡೆದವನು ಅಷ್ಟನ್ನು ಕೊಡಬೇಕು. |
23. | ನಷ್ಟ ವಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರಾಣವನ್ನೂ |
24. | ಕಣ್ಣಿಗೆ ಕಣ್ಣನ್ನೂ ಹಲ್ಲಿಗೆ ಹಲ್ಲನ್ನೂ ಕೈಗೆ ಕೈಯನ್ನೂ ಕಾಲಿಗೆ ಕಾಲನ್ನೂ |
25. | ಬರೆಗೆ ಬರೆ, ಗಾಯಕ್ಕೆ ಗಾಯ, ಏಟಿಗೆ ಏಟು, ಈ ಮೇರೆಗೆ ಪ್ರತಿದಂಡನೆಯಾಗಬೇಕು. |
26. | ಇದಲ್ಲದೆ ಒಬ್ಬನು ದಾಸನ ಕಣ್ಣನ್ನು ಇಲ್ಲವೆ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೋಸ್ಕರ ಅವನನ್ನು ಬಿಡುಗಡೆಮಾಡಿ ಅವನು ಕಳುಹಿಸಲಿ. |
27. | ಒಬ್ಬನು ದಾಸನ ಹಲ್ಲನ್ನು ಇಲ್ಲವೆ ದಾಸಿಯ ಹಲ್ಲನ್ನು ಉದುರಿಸಿದರೆ ಹಲ್ಲಿಗೋಸ್ಕರ ಅವನನ್ನು ಬಿಡುಗಡೆಮಾಡಿ ಕಳುಹಿಸಲಿ. |
28. | ಇದಲ್ಲದೆ ಯಾವದಾದರೂ ಒಂದು ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಾದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು. |
29. | ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದ್ದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಭದ್ರಮಾಡದೆ ಇದ್ದದರಿಂದ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದುಹಾಕಿದರೆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು; ಅದರ ಯಜಮಾನನೂ ಸಾಯಬೇಕು. |
30. | ಒಂದು ವೇಳೆ ಅವನಿಗೆ ಪ್ರಾಯಶ್ಚಿತ್ತವನ್ನು ನೇಮಿ ಸಿದರೆ ಅವನು ತನಗೆ ನೇಮಿಸಿದ್ದನ್ನು ತನ್ನ ಪ್ರಾಣ ವಿಮೋಚನೆಗಾಗಿ ಕೊಡಲಿ. |
31. | ಅದು ಮಗನನ್ನಾಗಲಿ ಮಗಳನ್ನಾಗಲಿ ತಿವಿದರೂ ಈ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು. |
32. | ದಾಸನನ್ನಾದರೂ ದಾಸಿಯನ್ನಾದರೂ ಎತ್ತು ತಿವಿ ದರೆ ಅವರ ಯಜಮಾನನಿಗೆ ಮೂವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. |
33. | ಇದಲ್ಲದೆ ಗುಂಡಿಯನ್ನು ಅಗೆದವನು ಅದನ್ನು ಮುಚ್ಚದೆ ಇದ್ದದ್ದರಿಂದ ಎತ್ತಾದರೂ ಕತ್ತೆಯಾದರೂ ಗುಂಡಿಯಲ್ಲಿ ಬಿದ್ದರೆ |
34. | ಗುಂಡಿಯನ್ನು ಅಗೆದವನು ಕ್ರಯ ಕೊಡಬೇಕು. ಅವುಗಳ ಯಜಮಾನನಿಗೆ ಹಣ ತೀರಿಸಬೇಕು. ಆದರೆ ಸತ್ತ ಪಶುವು ಅವನದಾಗಬೇಕು. |
35. | ಇದಲ್ಲದೆ ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾಯ್ದುಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಪಾಲು ಹಂಚಬೇಕು. ಸತ್ತ ಎತ್ತನ್ನು ಸಹ ಪಾಲು ಹಂಚಬೇಕು. |
36. | ಇಲ್ಲವೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ತಿಳಿದಿ ದ್ದರೂ ಅದರ ಯಜಮಾನನು ಅದನ್ನು ಭದ್ರಮಾಡದೆ ಹೋಗಿದ್ದರೆ ಎತ್ತಿಗೆ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಪಶುವು ಅವನದಾಗಬೇಕು. |
← Exodus (21/40) → |