← Exodus (26/40) → |
1. | ಗುಡಾರವನ್ನು ಹತ್ತು ತೆರೆಗಳಿಂದ ಮಾಡ ಬೇಕು. ಅವು ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣಗ ಳಿಂದಲೂ ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳವು ಗಳಾಗಿಯೂ ಇರಬೇಕು. |
2. | ಒಂದು ತೆರೆಯ ಉದ್ದವು ಇಪ್ಪತ್ತೆಂಟು ಮೊಳ, ಅದರ ಅಗಲವು ನಾಲ್ಕು ಮೊಳ ವಾಗಿರಬೇಕು ಪ್ರತಿಯೊಂದು ತೆರೆಯು ಒಂದೇ ಅಳತೆ ಯುಳ್ಳದ್ದಾಗಿರಬೇಕು. |
3. | ಐದು ತೆರೆಗಳು ಒಂದಕ್ಕೊಂದು ಜೋಡಿಸಲ್ಪಟ್ಟಿರಬೇಕು, ಬೇರೆ ಐದು ತೆರೆಗಳು ಒಂದ ಕ್ಕೊಂದು ಜೋಡಿಸಲ್ಪಟ್ಟಿರಬೇಕು. |
4. | ಒಂದು ತೆರೆಯ ಅಂಚಿನ ಕೊನೆಗೆ ಜೋಡಿಸುವ ಸ್ಥಳದಲ್ಲಿ ನೀಲಿ ನೂಲಿನ ಕುಣಿಕೆಗಳನ್ನು ಮಾಡಿ ಎರಡನೇ ಜೋಡನೆಯ ಕಡೇ ತೆರೆಯ ಕೊನೆಯಲ್ಲಿಯೂ ಹಾಗೆಯೇ ಮಾಡಬೇಕು. |
5. | ಒಂದು ತೆರೆಯನ್ನು ಜೋಡಿಸುವ ಸ್ಥಳದಲ್ಲಿ ಇರುವ ಇನ್ನೊಂದು ತೆರೆಯ ಕೊನೆಯಲ್ಲಿ ಐವತ್ತು ಕುಣಿಕೆಗಳನ್ನು ಮಾಡಬೇಕು. ಆ ಕುಣಿಕೆಗಳು ಒಂದಕ್ಕೊಂದು ಸರಿ ಯಾಗಿ ಹಿಡುಕೊಳ್ಳುವವುಗಳಾಗಿರಬೇಕು. |
6. | ಬಂಗಾರದ ಐವತ್ತು ಕೊಂಡಿಗಳನ್ನು ಮಾಡಿ ಅವುಗಳಿಂದ ತೆರೆಗಳನ್ನು ಒಂದಕ್ಕೊಂದು ಜೋಡಿಸಬೇಕು. ಹೀಗೆ ಅದು ಒಂದೇ ಗುಡಾರವಾಗುವದು. |
7. | ಇದಲ್ಲದೆ ನೀನು ಗುಡಾರದ ಮೇಲೆ ಹೊದಿಸು ವದಕ್ಕಾಗಿ ಮೇಕೆ ಕೂದಲಿನಿಂದ ಹನ್ನೊಂದು ತೆರೆಗಳನ್ನು ಮಾಡಬೇಕು. |
8. | ಒಂದು ತೆರೆಯ ಉದ್ದವು ಮೂವತ್ತು ಮೊಳ, ಅದರ ಅಗಲವು ನಾಲ್ಕು ಮೊಳ, ಹನ್ನೊಂದು ತೆರೆಗಳಿಗೂ ಅದೇ ಅಳತೆ ಇರಬೇಕು. |
9. | ಐದು ತೆರೆಗಳನ್ನು ಬೇರೆಯಾಗಿಯೂ ಆರು ತೆರೆಗಳನ್ನು ಬೇರೆಯಾಗಿಯೂ ಜೋಡಿಸಿ ಆರನೆಯ ತೆರೆಯನ್ನು ಗುಡಾರದ ಮುಂಭಾಗ ದಲ್ಲಿ ಇಮ್ಮಡಿ ಮಾಡಬೇಕು. |
10. | ಜೋಡಿಸುವಾಗ ಕಡೇ ಒಂದು ತೆರೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಜೋಡಣೆಯಲ್ಲಿರುವ ಎರಡನೇ ತೆರೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಮಾಡಬೇಕು. |
11. | ಇದಲ್ಲದೆ ಹಿತ್ತಾಳೆಯ ಐವತ್ತು ಕೊಂಡಿಗಳನ್ನು ಮಾಡಿ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಗುಡಾರವು ಒಂದಾಗುವ ಹಾಗೆ ಜೋಡಿಸಬೇಕು. |
12. | ಗುಡಾರದ ತೆರೆಗಳಲ್ಲಿ ಮಿಕ್ಕಿ ಉಳಿದ ಅರ್ಧ ತೆರೆಯು ಗುಡಾರದ ಹಿಂಭಾಗದಲ್ಲಿ ತೂಗಾಡಲಿ. |
13. | ಗುಡಾರದ ತೆರೆಗಳ ಉದ್ದದಲ್ಲಿ ಆಚೆ ಈಚೆ ಮಿಕ್ಕಿದ ಒಂದು ಮೊಳವು ಗುಡಾರದ ಈಚೆ ಆಚೆಯಲ್ಲಿ ಅದನ್ನು ಮುಚ್ಚುವದಕ್ಕಾಗಿ ತೂಗಾಡಲಿ. |
14. | ಕೆಂಪು ಬಣ್ಣದ ಟಗರಿನ ಚರ್ಮಗಳಿಂದ ಗುಡಾರಕ್ಕೆ ಹೊದಿಕೆಯನ್ನೂ ಕಡಲು ಹಂದಿಯ ಚರ್ಮ ಗಳಿಂದ ಮೇಲು ಹೊದಿಕೆಯನ್ನೂ ಮಾಡಬೇಕು. |
15. | ಗುಡಾರಕ್ಕೆ ಜಾಲೀ ಮರದಿಂದ ನಿಲ್ಲುವ ಹಲಿಗೆ ಗಳನ್ನು ಮಾಡಬೇಕು. |
16. | ಹಲಿಗೆಯ ಉದ್ದವು ಹತ್ತು ಮೊಳ, ಅದರ ಅಗಲ ಒಂದುವರೆ ಮೊಳ ಇರಬೇಕು. |
17. | ಒಂದು ಹಲಗೆಗೆ ಎರಡು ಕೂರುಗಳು ಇರಬೇಕು. ಅವುಗಳನ್ನು ಕ್ರಮವಾಗಿ ಇರಿಸುವಂತೆ ಅವು ಎದುರು ಬದುರಾಗಿ ಇರಬೇಕು. ಹೀಗೆ ಗುಡಾರದ ಎಲ್ಲಾ ಹಲಗೆ ಗಳಿಗೂ ನೀನು ಮಾಡಬೇಕು. |
18. | ಗುಡಾರದ ದಕ್ಷಿಣ ದಿಕ್ಕಿನಲ್ಲಿ ಇಪ್ಪತ್ತು ಹಲಗೆಗಳನ್ನು ನೀನು ಮಾಡಬೇಕು. |
19. | ಇಪ್ಪತ್ತು ಹಲಗೆಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಕುಳಿಗಳನ್ನು ಮಾಡಬೇಕು; ಒಂದೊಂದು ಹಲಗೆಯ ಕೆಳಗೆ ಅದರ ಎರಡು ಕೂರುಗಳಿಗಾಗಿ ಎರಡೆರಡು ಕುಳಿಗಳನ್ನು ಮಾಡಬೇಕು. |
20. | ಉತ್ತರ ದಿಕ್ಕಿನಲ್ಲಿರುವ ಅದರ ಮತ್ತೊಂದು ಪಾರ್ಶ್ವಕ್ಕೋಸ್ಕರ ಇಪ್ಪತ್ತು ಹಲಗೆ ಗಳನ್ನೂ |
21. | ಒಂದೊಂದು ಹಲಗೆಯ ಕೆಳಗೆ ಎರಡೆರಡು ಕೂರುಗಳಂತೆ ನಾಲ್ವತ್ತು ಬೆಳ್ಳಿಯ ಕೂರುಗಳನ್ನೂ |
22. | ಗುಡಾರದ ಪಶ್ಚಿಮದ ಕಡೆಗೆ ಆರು ಹಲಗೆಗಳನ್ನೂ ಮಾಡಬೇಕು. |
23. | ಗುಡಾರದ ಉಭಯ ಪಾರ್ಶ್ವಗಳ ಲ್ಲಿರುವ ಮೂಲೆಗಳಿಗೆ ಎರಡು ಹಲಗೆಗಳನ್ನು ಮಾಡ ಬೇಕು. |
24. | ಇವುಗಳನ್ನು ಅಡಿಯಲ್ಲಿ ಜೋಡಿಸಿರಬೇಕು; ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿರ ಬೇಕು. ಹೀಗೆ ಅವು ಎರಡಾಗಿದ್ದು ಆ ಎರಡು ಮೂಲೆಗಳಲ್ಲಿ ಇರಬೇಕು. |
25. | ಹೀಗೆ ಅವು ಎಂಟು ಹಲಗೆಗಳು; ಒಂದೊಂದು ಹಲಗೆಯ ಕೆಳಗೆ ಎರಡೆ ರಡು ಕುಳಿಗಳು ಇರುವದರಿಂದ ಅವುಗಳಿಗೆ ಹದಿನಾರು ಬೆಳ್ಳಿಯ ಕುಳಿಗಳು ಇರಬೇಕು. |
26. | ಜಾಲೀ ಮರದಿಂದ ಅಗುಳಿಗಳನ್ನೂ ಮಾಡಬೇಕು. ಗುಡಾರದ ಒಂದು ಪಾರ್ಶ್ವದ ಹಲಗೆಗಳಿಗೆ ಐದು |
27. | ಗುಡಾರದ ಇನ್ನೊಂದು ಪಾರ್ಶ್ವದ ಹಲಗೆಗಳಿಗೆ ಐದು ಅಗುಳಿ ಗಳನ್ನೂ ಗುಡಾರ ಹಿಂಭಾಗದ ಪಶ್ಚಿಮದ ಎರಡು ಕಡೆಗಳಲ್ಲಿ ಇರುವ ಹಲಗೆಗಳಿಗೆ ಐದು ಅಗುಳಿಗಳನ್ನೂ ಮಾಡಬೇಕು. |
28. | ಮಧ್ಯದ ಅಗುಳಿಯು ಹಲಗೆಗಳ ನಡುವೆ ಒಂದು ಕಡೆಯಿಂದ ಮತ್ತೊಂದು ಕಡೆಯ ವರೆಗೆ ಮುಟ್ಟಿರಬೇಕು. |
29. | ಆ ಹಲಗೆಗಳನ್ನು ಬಂಗಾರ ದಿಂದ ಹೊದಿಸಬೇಕು. ಅವುಗಳಿಗೆ ಬಂಗಾರದಿಂದ ಬಳೆಗಳನ್ನು ಮಾಡಬೇಕು, ಅಗುಳಿಗಳನ್ನೂ ಬಂಗಾರ ದಿಂದ ಹೊದಿಸಬೇಕು. |
30. | ಹೀಗೆ ಬೆಟ್ಟದ ಮೇಲೆ ನಾನು ನಿನಗೆ ತೋರಿಸಿದ ಕ್ರಮದ ಪ್ರಕಾರ ಗುಡಾರ ವನ್ನು ನಿಲ್ಲಿಸಬೇಕು. |
31. | ನೀಲಿ ಧೂಮ್ರ ರಕ್ತವರ್ಣಗಳಿರುವ ನಯವಾದ ನಾರುಗಳಿಂದ ಹೊಸೆದ ತೆರೆಯನ್ನು ಮಾಡಬೇಕು. ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಬೇಕು. |
32. | ಅದನ್ನು ಬಂಗಾರದಿಂದ ಹೊದಿಸಿದ ಬಂಗಾರದ ಕೊಂಡಿಗಳಿದ್ದ ಬೆಳ್ಳಿಯ ನಾಲ್ಕು ಕುಳಿಗಳಲ್ಲಿ ಊರಿಕೊಂಡಿರುವ ನಾಲ್ಕು ಜಾಲೀ ಮರದ ಸ್ತಂಭಗಳಲ್ಲಿ ಅದನ್ನು ತೂಗುಹಾಕಬೇಕು. |
33. | ಆ ತೆರೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ ತೆರೆಯೊಳಗೆ ಸಾಕ್ಷಿ ಹಲಗೆಗಳ ಮಂಜೂಷವನ್ನು ತರ ಬೇಕು. ಪರಿಶುದ್ಧ ಸ್ಥಳವನ್ನೂ ಅತಿಪರಿಶುದ್ಧ ಸ್ಥಳವನ್ನೂ ಆ ತೆರೆಯು ವಿಂಗಡಿಸುವದು. |
34. | ಅತಿಪರಿಶುದ್ಧ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮಂಜೂಷದ ಮೇಲೆ ಕರುಣಾಸನ ವನ್ನು ಇಡಬೇಕು. |
35. | ತೆರೆಯ ಹೊರಗೆ ಮೇಜನ್ನು ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಡಬೇಕು. ಉತ್ತರ ಭಾಗದಲ್ಲಿ ಮೇಜನ್ನು ಇಡಬೇಕು. |
36. | ಗುಡಾರದ ಬಾಗಲಿಗೆ ನೀಲಿ ಧೂಮ್ರ ರಕ್ತವರ್ಣ ಗಳಿರುವ ನಯವಾಗಿ ಹೊಸೆದ ನಾರುಗಳಿಂದ ಕಸೂತಿ ಕೆಲಸದ ತೆರೆಯನ್ನು ತೂಗುಹಾಕಬೇಕು. |
37. | ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು. |
← Exodus (26/40) → |