← Exodus (27/40) → |
1. | ಇದಲ್ಲದೆ ಜಾಲೀ ಮರದಿಂದ ಯಜ್ಞವೇದಿಯನ್ನು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಮಾಡಬೇಕು. ಆ ಯಜ್ಞವೇದಿಯು ಚಚ್ಚೌಕವಾಗಿರಬೇಕು. ಅದರ ಎತ್ತ ರವು ಮೂರು ಮೊಳ ಇರಬೇಕು. |
2. | ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಯಜ್ಞವೇದಿಗೆ ಎತ್ತರವಾಗಿರಬೇಕು; ನೀನು ಅದನ್ನು ಹಿತ್ತಾಳೆಯಿಂದ ಹೊದಿಸಬೇಕು. |
3. | ಅದರ ಬೂದಿಗಾಗಿ ತಟ್ಟೆಗಳನ್ನು ಸಲಿಕೆಗಳನ್ನು ಬೋಗುಣಿಗಳನ್ನು ಮುಳ್ಳುಗಳನ್ನು ಅಗ್ನಿಪಾತ್ರೆಗಳನ್ನು ಎಲ್ಲಾ ಉಪಕರಣಗಳನ್ನು ಹಿತ್ತಾಳೆಯಿಂದ ಮಾಡಬೇಕು. |
4. | ಅದಕ್ಕೆ ಹಿತ್ತಾಳೆಯ ಜಾಳಿಗೆಯನ್ನು ಮಾಡಿ ಆ ಜಾಳಿಗೆಯ ಮೇಲೆ ನಾಲ್ಕು ಮೂಲೆಗಳಿಗೆ ಹಿತ್ತಾಳೆಯ ನಾಲ್ಕು ಬಳೆಗಳನ್ನು ಮಾಡಬೇಕು. |
5. | ಆ ಜಾಳಿಗೆಯು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಇದ್ದು, ಯಜ್ಞವೇದಿಯ ಬುಡದಿಂದ ನಡುವಿನ ತನಕ ಇರು ವಂತೆ ಹಾಕಿಸಬೇಕು. |
6. | ಯಜ್ಞವೇದಿಗೆ ಜಾಲೀ ಮರ ದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಹಿತ್ತಾಳೆ ಯಿಂದ ಹೊದಿಸಬೇಕು. |
7. | ಆ ಕೋಲುಗಳನ್ನು ಬಳೆ ಗಳಲ್ಲಿ ಸೇರಿಸಬೇಕು. ಅವುಗಳು ಯಜ್ಞವೇದಿಯನ್ನು ಹೊರುವದಕ್ಕೆ ಅದರ ಎರಡೂ ಪಾರ್ಶ್ವಗಳಲ್ಲಿ ಇರ ಬೇಕು. |
8. | ಹಲಗೆಗಳಿಂದ ಅದನ್ನು ಪೊಳ್ಳಾಗಿರುವಂತೆ ಮಾಡಬೇಕು. ಬೆಟ್ಟದಲ್ಲಿ ನಿನಗೆ ತೋರಿಸಿದಂತೆಯೇ ಅದನ್ನು ಮಾಡಬೇಕು. |
9. | ಗುಡಾರದ ಅಂಗಳವನ್ನು ಮಾಡಬೇಕು. ದಕ್ಷಿಣ ದಿಕ್ಕಿನಲ್ಲಿರುವ ದಕ್ಷಿಣ ಭಾಗದಲ್ಲಿ ಅಂಗಳಕ್ಕೋಸ್ಕರ ನಯವಾದ ಹೊಸೆದ ನಾರಿನ ಪರದೆಗಳನ್ನು ಮಾಡ ಬೇಕು. ಒಂದು ಕಡೆಯಲ್ಲಿ ಅದರ ಉದ್ದವು ನೂರು ಮೊಳವಿರಬೇಕು. |
10. | ಅದರ ಸ್ತಂಭಗಳು ಇಪ್ಪತ್ತು, ಅವುಗಳಿಗೆ ಹಿತ್ತಾಳೆಯ ಕುಳಿಗಳು ಇರಬೇಕು; ಸ್ತಂಭಗಳ ಕೊಂಡಿಗಳನ್ನೂ ಅವುಗಳ ಪಟ್ಟಿಗಳನ್ನೂ ಬೆಳ್ಳಿಯಿಂದ ಮಾಡಬೇಕು. |
11. | ಹಾಗೆಯೇ ಉತ್ತರ ಪಾರ್ಶ್ವದಲ್ಲಿ ನೂರು ಮೊಳ ಉದ್ದವಾದ ಪರದೆಗಳೂ ಇಪ್ಪತ್ತು ಸ್ತಂಭಗಳೂ ಇಪ್ಪತ್ತು ಹಿತ್ತಾಳೆಯ ಕುಳಿಗಳೂ ಇರಬೇಕು. ಸ್ತಂಭಗಳ ಕೊಂಡಿಗಳನ್ನೂ ಕಟ್ಟುಗಳನ್ನೂ ಬೆಳ್ಳಿಯಿಂದ ಮಾಡಬೇಕು. |
12. | ಅಂಗಳದ ಪಶ್ಚಿಮ ಪಾರ್ಶ್ವದಲ್ಲಿ ಐವತ್ತು ಮೊಳ ಅಗಲವಾದ ಪರದೆಗಳೂ ಹತ್ತು ಸ್ತಂಭಗಳೂ ಹತ್ತು ಕುಳಿಗಳೂ ಇರಬೇಕು. |
13. | ಪೂರ್ವದ ಕಡೆಯಲ್ಲಿ ಅಂಗಳದ ಅಗಲವು ಮೂಡಣದಲ್ಲಿ ಐವತ್ತು ಮೊಳ ಇರಬೇಕು. |
14. | ಒಂದು ಕಡೆಯಲ್ಲಿ ಹದಿನೈದು ಮೊಳದ ಪರದೆಗಳಿದ್ದು ಮೂರು ಸ್ತಂಭಗಳೂ ಮೂರು ಕುಳಿಗಳೂ ಇರಬೇಕು. |
15. | ಮತ್ತೊಂದು ಕಡೆಯಲ್ಲಿ ಹದಿನೈದು ಮೊಳದ ಪರದೆಗಳೂ ಮೂರು ಸ್ತಂಭ ಗಳೂ ಮೂರು ಕುಳಿಗಳೂ ಇರಬೇಕು. |
16. | ಅಂಗಳದ ಬಾಗಲಿಗಾಗಿ ನೀಲಿ ಧೂಮ್ರ ರಕ್ತ ವರ್ಣದ ಹೊಸೆದ ನಯವಾದ ನಾರಿನಿಂದ ಕಸೂತಿಯ ಕೆಲಸ ಮಾಡಿದ ಇಪ್ಪತ್ತು ಮೊಳದ ತೆರೆಯೂ ಅದಕ್ಕೆ ನಾಲ್ಕು ಸ್ತಂಭಗಳೂ ನಾಲ್ಕು ಕುಳಿಗಳೂ ಇರಬೇಕು. |
17. | ಅಂಗಳದ ಸುತ್ತಲಿ ರುವ ಸ್ತಂಭಗಳಿಗೆಲ್ಲಾ ಬೆಳ್ಳಿಯ ಕಟ್ಟುಗಳೂ ಬೆಳ್ಳಿಯ ಕೊಂಡಿಗಳೂ ಹಿತ್ತಾಳೆಯ ಕುಳಿಗಳೂ ಇರಬೇಕು. |
18. | ಅಂಗಳದ ಉದ್ದ ನೂರು ಮೊಳ, ಅಗಲ ಐವತ್ತು ಮೊಳ, ಅದರ ಎತ್ತರ ಐದು ಮೊಳ ಇರಬೇಕು. ಪರದೆಗಳು ನಯವಾದ ನಾರಿನಿಂದ ಹೊಸೆದದ್ದಾಗಿದ್ದು ಅವುಗಳ ಕುಳಿಗಳನ್ನು ಹಿತ್ತಾಳೆಯಿಂದ ಮಾಡಿಸಬೇಕು. |
19. | ಗುಡಾರದ ಎಲ್ಲಾ ಕೆಲಸಕ್ಕೆ ಬರುವ ಉಪಕರಣಗಳೂ ಗೂಟಗಳೂ ಅಂಗಳದ ಗೂಟಗಳೂ ಹಿತ್ತಾಳೆಯಿಂದ ಮಾಡಿದವುಗಳಾಗಿರಬೇಕು. |
20. | ಇದಲ್ಲದೆ ಬೆಳಕಿಗೋಸ್ಕರ ಯಾವಾಗಲೂ ದೀಪ ವನ್ನು ಉರಿಸುವಂತೆ ಶುದ್ಧವಾದ ಕುಟ್ಟಿದ ಹಿಪ್ಪೆಯ ಎಣ್ಣೆಯನ್ನು ನಿನಗೆ ತರುವ ಹಾಗೆ ಇಸ್ರಾಯೇಲ್ ಮಕ್ಕಳಿಗೆ ಅಪ್ಪಣೆಕೊಡಬೇಕು. |
21. | ಸಭೆಯ ಗುಡಾರ ದಲ್ಲಿ ಮಂಜೂಷದ ಮುಂದೆ ಇರುವ ತೆರೆಯ ಹೊರಗೆ ಅರೋನನೂ ಅವನ ಮಕ್ಕಳೂ ಅದನ್ನು ಸಾಯಂಕಾಲ ದಿಂದ ಉದಯದ ವರೆಗೂ ಕರ್ತನ ಮುಂದೆ ದೀಪ ವನ್ನು ಸರಿಪಡಿಸುತ್ತಿರಬೇಕು. ಇದು ಇಸ್ರಾಯೇಲ್ ಮಕ್ಕಳ ಪರವಾಗಿ ಅವರ ಸಂತತಿಯವರಿಗೆ ಶಾಶ್ವತವಾದ ಕಟ್ಟಳೆಯಾಗಿರಬೇಕು. |
← Exodus (27/40) → |